HOME » NEWS » District » VILLAGERS DIG MP SHOBHA KARANDLAJE WHEN SHE GONE TO CAMPAIGN RHHSN VCTV

ಗ್ರಾಪಂ ಚುನಾವಣಾ ಪ್ರಚಾರಕ್ಕೆ ಹೋದ ಸಂಸದೆ ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರಿಂದ ತರಾಟೆ

ಯಾವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ವಿದ್ಯುತ್, ರಸ್ತೆ, ಮೊಬೈಲ್ ನೆಟ್ ವರ್ಕ್ ಸೇರಿದಂತೆ ಸಾಕಷ್ಟು ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದೇವೆ. ನೀವು ಏನಾದ್ರು ಮಾಡಿ ಪರಿಹಾರ ಮಾಡಿಕೊಡಿ ಎಂದು ಸ್ಥಳೀಯರು ಶೋಭಾ ಕರಂದ್ಲಾಜೆಗೆ ಮನವಿ ಮಾಡಿಕೊಂಡರು. ಸಂಸದರು ಸಾರ್ವಜನಿಕರ ಮನವಿ ಕೇಳುತ್ತಿದ್ದ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆಗುತ್ತಿದ್ದನ್ನು ಕಂಡ ಶೋಭಾ ಕರಂದ್ಲಾಜೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.   

news18-kannada
Updated:December 16, 2020, 7:20 PM IST
ಗ್ರಾಪಂ ಚುನಾವಣಾ ಪ್ರಚಾರಕ್ಕೆ ಹೋದ ಸಂಸದೆ ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರಿಂದ ತರಾಟೆ
ಪ್ರಚಾರದ ವೇಳೆ ಸ್ಥಳೀಯರ ಮಾತಿನ ಚಕಮಕಿ.
  • Share this:
ಚಿಕ್ಕಮಗಳೂರು; ಮೊಬೈಲ್ ನೆಟ್ವರ್ಕ್ ಸರಿಪಡಿಸುವಂತೆ ಗ್ರಾಮ ಪಂಚಾಯಿತಿ ಚುನಾವಣಾ ಪ್ರಚಾರಕ್ಕೆ ಹೋದ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಎಂ.ಪಿ ಕುಮಾರಸ್ವಾಮಿ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾಂಬಳೆಯಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಮೊದಲ ಹಂತದಲ್ಲೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವುದರಿಂದ  ನಿನ್ನೆ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರಚಾರಕ್ಕೆಂದು ಕಳಸ ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದರು. ಈ ವೇಳೆ, ಜಾಂಬಳೆ, ಕುದುರೆಮುಖ, ಕೆಂಕನಕೊಂಡ, ಬಿಳಗಲ್ ಹಾಗೂ ನೆಲ್ಲಿಬೀಡು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ನೆಟ್ವರ್ಕ್ ಸಮಸ್ಯೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆಗೆ ಸ್ಥಳೀಯರು ಮನವಿ ಮಾಡಿದ್ದರು. ನೆಟ್ವರ್ಕ್ ಸಮಸ್ಯೆ ತುಂಬಾ ಇದೆ. ಮಕ್ಕಳಿಗೆ ಆನ್‍ಲೈನ್ ಶಿಕ್ಷಣಕ್ಕೂ ಕಷ್ಟವಾಗುತ್ತಿದೆ. ಆರೋಗ್ಯ ಸರಿ ಇಲ್ಲದಿದ್ದಾಗ ವಾಹನಗಳಿಗೆ ಫೋನ್ ಮಾಡಲು ಸಾಧ್ಯವಾಗುವುದಿಲ್ಲ. ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆಗೆ ಪರಿಹಾರ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ.

ಇದನ್ನು ಓದಿ: ಪಂಚಾಯಿತಿ ಸದಸ್ಯರಾಗಲು ಒಂದೇ ವಾರ್ಡಿನಲ್ಲಿ ಗಂಡ -ಹೆಂಡತಿ ನಡುವೆ ಫೈಟ್; ಇಬ್ಬರು ಒಟ್ಟೊಟ್ಟಿಗೆ ಹೋಗಿ ಮತಯಾಚನೆ

ಈ ವೇಳೆ, ಸಂಸದೆ ಶೋಭಾ ಕೂಡ ಸಂಬಂಧಪಟ್ಟವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಮಾತನಾಡುತ್ತೇನೆ ಎಂದಿದ್ದಾರೆ. ಆಗ, ನೆರೆದಿದ್ದ ಸ್ಥಳೀಯರಲ್ಲಿ ಕೆಲವರು ನಿಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕಲು ಮನಸ್ಸು ಮಾಡುತ್ತೇವೆ ಎಂದಿದ್ದಾರೆ. ಆಗ, ಸಂಸದೆ ಶೋಭಾ ಅವರು, ನಾನು ಕರೆದು ಮಾತನಾಡುತ್ತೇನೆ ಎಂದಿದ್ದೇನೆಲ್ಲಾ, ನೀವು ಏಕೆ ಉಲ್ಟಾ ಮಾತನಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಆಗ ಸ್ಥಳೀಯರಲ್ಲೇ ಮಾತಿನ ಚಕಮಕಿ ನಡೆದಿದೆ. ಸಂಸದೆ ಶೋಭಾ ಅವರು ಏಕೆ ಉಲ್ಟಾ ಮಾತನಾಡುತ್ತೀರಾ ಎನ್ನುತ್ತಿದ್ದಂತೆ ಬಿಜೆಪಿ ಬೆಂಬಲಿತರು ಹಾಗೂ ಇತರೆ ಪಕ್ಷಗಳ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕಳೆದೊಂದು ವರ್ಷದಿಂದ ತೀವ್ರ ನೆಟ್ವರ್ಕ್ ಸಮಸ್ಯೆ ಎದುರಿಸಿದ್ದೇವೆ. ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಸಂಸದೆ ಶೋಭಾ ಹಾಗೂ ಶಾಸಕ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ನಮ್ಮ ಭಾಗದಲ್ಲಿ ಮೂಲಭೂತ ಸಮಸ್ಯೆಗಳಿದ್ದರೂ ಯಾವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ವಿದ್ಯುತ್, ರಸ್ತೆ, ಮೊಬೈಲ್ ನೆಟ್ ವರ್ಕ್ ಸೇರಿದಂತೆ ಸಾಕಷ್ಟು ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದೇವೆ. ನೀವು ಏನಾದ್ರು ಮಾಡಿ ಪರಿಹಾರ ಮಾಡಿಕೊಡಿ ಎಂದು ಸ್ಥಳೀಯರು ಶೋಭಾ ಕರಂದ್ಲಾಜೆಗೆ ಮನವಿ ಮಾಡಿಕೊಂಡರು. ಸಂಸದರು ಸಾರ್ವಜನಿಕರ ಮನವಿ ಕೇಳುತ್ತಿದ್ದ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆಗುತ್ತಿದ್ದನ್ನು ಕಂಡ ಶೋಭಾ ಕರಂದ್ಲಾಜೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
Published by: HR Ramesh
First published: December 16, 2020, 7:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories