ಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ ಅವಧಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಪುನಃ 14 ದಿನಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದೆ.
ಪ್ರಕರಣ ಕುರಿತಂತೆ ವಿನಯ ಕುಲಕರ್ಣಿ ಅವರನ್ನು ನ.5 ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ವಿನಯ ಕುಲಕರ್ಣಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತ್ತು. ನ್ಯಾಯಾಧೀಶರು ವಿಚಾರಣೆ ಮಾಡಿದ ಬಳಿಕ ಒಂದು ದಿನ ನ್ಯಾಯಾಂಗ ಬಂಧನದ ಆದೇಶ ನೀಡಿತ್ತು.
ನಂತರ ಸಿಬಿಐ ಅಧಿಕಾರಿಗಳು ಮೂರು ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ನೀಡಬೇಕೆಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ವಿನಯ ಕುಲಕರ್ಣಿ ಅವರನ್ನು ನೀಡಲಾಗಿತ್ತು. ನ.9 ರಂದು ವಿನಯ್ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಲಯ ನ.23 ರವರೆಗೆ (14 ದಿನ) ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.
ಇದನ್ನು ಓದಿ: ಕ್ಯಾನ್ಸರ್ ಗೆದ್ದ ಕೃಷಿ; ಗಲ್ಫ್ನಿಂದ ಬಂದು ಬೇಸಾಯ ಮಾಡುತ್ತಾ ಮಾರಕ ಕಾಯಿಲೆ ಹಿಮ್ಮೆಟ್ಟಿಸಿದ ಮಂಗಳೂರು ರೈತ
ನ್ಯಾಯಾಂಗ ಬಂಧನ ಮುಗಿದ ಬಳಿಕ ನ .23 ರಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶರು ಡಿ.7 ರವರೆಗೂ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ್ದರು. ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶಯ ಮುಂದೆ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಪುನಃ 14 ದಿನ (ಡಿ.21 ರವರೆಗೆ) ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.
ವರದಿ; ಮಂಜುನಾಥ ಯಡಳ್ಳಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ