ವಿನಯ್​ ಕುಲಕರ್ಣಿಗೆ ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ; ಬೆಳಗಾವಿ ಹಿಂಡಲಗಾ ಜೈಲಿಗೆ ಮಾಜಿ ಸಚಿವ

ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಹಾಗೂ ಸಿಬಿಐ ವಿಶೇಷ ಕೋರ್ಟ್‌ನ ನ್ಯಾಯಾಧೀಶ ಪಂಚಾಕ್ಷರಿ ಎಂ ನ್ಯಾಯಾಲಯ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನುಒಂದು ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ

ಮಾಜಿ ಸಚಿವ ವಿನಯ್ ಕುಲಕರ್ಣಿ

ಮಾಜಿ ಸಚಿವ ವಿನಯ್ ಕುಲಕರ್ಣಿ

  • Share this:
ಧಾರವಾಡ (ನವೆಂಬರ್​. 05): ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಮಾಜಿ ಸಚಿವ ವಿನಯ್​​ ಕುಲಕರ್ಣಿ ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಧಾರವಾಡ ಎರಡನೇ ಹೆಚ್ಚುವರಿ ಪ್ರಧಾನ ಮತ್ತು ಸತ್ರ‌ ನ್ಯಾಯಾಧೀಶರು ಮಾಜಿ ಸಚಿವ ವಿನಯ್ ಕುಲರ್ಣಿಯವರಿಗೆ ನಾಳೆಯ ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದ್ದಾರೆ. ವಿನಯ್​ ಕುಲಕರ್ಣಿಯವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ. ಜಿಪಂ ಸದಸ್ಯ ಯೋಗೀಶ್ ‌ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಗುರುವಾರ ಮಾಜಿ ಸಚಿವ ವಿನಯ್‌ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಹಾಗೂ ಕೊರೋನಾ ವೈರಸ್‌ ಪರೀಕ್ಷೆ ನಡೆಸಿದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಹಾಗೂ ಸಿಬಿಐ ವಿಶೇಷ ಕೋರ್ಟ್‌ನ ನ್ಯಾಯಾಧೀಶ ಪಂಚಾಕ್ಷರಿ ಎಂ ನ್ಯಾಯಾಲಯ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನುಒಂದು ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಇದನ್ನೂ ಓದಿ : ಮಾಜಿ ಸಚಿವ ವಿನಯ್‌ ಕುಲಕರ್ಣಿ ಬಂಧನಕ್ಕೆ ರಾಜಕೀಯ ಬಣ್ಣ ಸರಿಯಲ್ಲ: ಡಿಸಿಎಂ ಅಶ್ವತ್ಥನಾರಾಯಣ

ಮಾಜಿ ಸಚಿವ ವಿನಯ್​​ ಕುಲಕರ್ಣಿ ಅವರನ್ನು ಗುರುವಾರ ಬೆಳಗ್ಗೆ 7ಕ್ಕೆ ಸಿಬಿಐ ತಂಡ ವಶಕ್ಕೆ ಪಡೆದಿದ್ದು, ಅವರನ್ನು ಉಪನಗರ ಠಾಣೆಯಲ್ಲಿ ದಿನವಿಡಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಸಾಕ್ಷಿನಾಶ, ಕೊಲೆಯ ಸುಪಾರಿ ನೀಡಿರುವ ಆರೋಪಗಳ ಕುರಿತಂತೆಯೂ ಅಧಿಕಾರಿಗಳು ವಿನಯ್ ಕುಲಕರ್ಣಿಯವರನ್ನು ಪ್ರಶ್ನಿಸಿದ್ದಾರೆ. ವಿಚಾರಣೆ ನಂತರ ಅವರನ್ನು ಬಂಧಿಸಲಾಗಿದೆ.

ರಾಜಕೀಯ ಉದ್ದೇಶದಿಂದ ವಿನಯ್ ಕುಲಕರ್ಣಿ ಅವರನ್ನು ತೇಜೋವಧೆ ಮಾಡಲು ಬಿಜೆಪಿ ಸಿಬಿಐ ಸಂಸ್ಥೆಯನ್ನು ಬಳಸಿಕೊಳ್ಳುತ್ತಿದೆ. ಯಾವುದೇ ನೋಟಿಸ್ ನೀಡದೇ ಏಕಾಏಕಿ ಮಾಜಿ ಸಚಿವರನ್ನು ಬಂಧಿಸಲಾಗಿದೆ ಎಂದು ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
Published by:G Hareeshkumar
First published: