ಡಿಕೆಶಿ ಭೇಟಿ ವೇಳೆ ಕೋವಿಡ್ ನಿಯಮ ಉಲ್ಲಂಘನೆ: 10 ಸಾವಿರ ರೂಪಾಯಿ ದಂಡ ವಿಧಿಸಿದ ಹುಬ್ಬಳ್ಳಿ ಪಾಲಿಕೆ

ಸಾಮಾಜಿಕ ಅಂತರ ಕಾಪಾಡದ ಹಿನ್ನೆಲೆ, ಅನುಮತಿಯಿಲ್ಲದೆ ಕಾಂಗ್ರೆಸ್ ಬ್ಯಾನರ್, ಬಂಟಿಂಗ್ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಡಿ.ಕೆ. ಶಿವಕುಮಾರ್​.

ಡಿ.ಕೆ. ಶಿವಕುಮಾರ್​.

  • Share this:
ಹುಬ್ಬಳ್ಳಿ (ಜೂನ್ 02); ಕೊರೋನಾ ಸೋಂಕು ಮಿತಿ ಮೀರುತ್ತಿದ್ದರೂ ಒಂದು ಕಡೆ ಜನ ಎಚ್ಚೆತ್ತುಕೊಳ್ಳುತ್ತಿಲ್ಲ. ಮತ್ತೊಂದೆಡೆ ಜನ ಪ್ರತಿನಿಧಿಗಳೂ ಬೇಕಾಬಿಟ್ಟಿಯಾಗಿ ಅಡ್ಡಾಡುತ್ತಿದ್ದಾರೆ. ಜನಪ್ರತಿನಿಧಿಗಳು, ರಾಜಕಾರಣಿಗಳ ಭೇಟಿ ವೇಳೆ ಕೋವಿಡ್ ನಿಯಮಗಳ ಉಲ್ಲಂಘನೆ ಮಾಮೂಲಿ ಅನ್ನುವಂತಾಗಿದೆ. ಹೀಗೆ ನಿಯಮ ಉಲ್ಲಂಘಿಸಿದವರ ಮೇಲೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹುಬ್ಬಳ್ಳಿಯ ಭೇಟಿ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಮೇ 31 ರಂದು ಸಂಜೆ ಡಿಕೆಶಿ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಕಾರ್ಯಕ್ರಮ ನಡೆದಿತ್ತು. ಆ್ಯಂಬುಲೆನ್ಸ್, ಕೋವಿಡ್ ಸೇವಾ ವಾಹನ, ಆಕ್ಸೀಜನ್ ಇತ್ಯಾದಿ ಸೌಲಭ್ಯಗಳಿಗೆ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದರು.

ಈ ವೇಳೆ ಜನಜಂಗುಳಿ ವಾತಾವರಣ ನಿರ್ಮಾಣವಾಗಿತ್ತು. ಕೋವಿಡ್ ನಿಯಮ ಪಾಲಿಸುವಂತೆ ಮುಖಂಡರೂ ಹೇಳೋ ಗೋಜಿಗೆ ಹೋಗಲಿಲ್ಲ. ಸಾಮಾಜಿಕ ಅಂತರ ಕಾಪಾಡದ ಹಿನ್ನೆಲೆ, ಅನುಮತಿಯಿಲ್ಲದೆ ಕಾಂಗ್ರೆಸ್ ಬ್ಯಾನರ್, ಬಂಟಿಂಗ್ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಂಡ ವಿಧಿಸಿರೊದಾಗಿ ಪಾಲಿಕೆ ಪರಿಸರ ಎಂಜಿನಿಯರ್ ನಯನ ತಿಳಿಸಿದ್ದಾರೆ. ಕಾನೂನು ಯಾರೇ ಉಲ್ಲಂಘಿಸಿದರೂ ಕಠಿಣ ಕ್ರಮ ಕೈಗೊಳ್ಳೋದಾಗಿ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ತೋರಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Pinarayi Vijayan| ಉಚಿತ ಸಾರ್ವಜನಿಕ ಲಸಿಕೆ ನೀಡಿ: ಕೇರಳ ಅಸೆಂಬ್ಲಿಯಲ್ಲಿ ನಿರ್ಣಯ ಅಂಗೀಕರಿಸಿದ ಪಿಣರಾಯಿ ವಿಜಯನ್ ಸರ್ಕಾರ!

ಲಾಕ್ ಡೌನ್ ಉಲ್ಲಂಘಿಸಿ ಮಸೀದಿಯಲ್ಲಿ ಹುಟ್ಟು ಹಬ್ಬ;

ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮಸೀದಿಯಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡ ಘಟನೆ ಹಳೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಹಾನಗರ ಪಾಲಿಕೆ ಮಾಜಿ ಸದಸ್ಯ ಅಲ್ತಾಫ್ ಕಿತ್ತೂರ ಹಳೇ ಹುಬ್ಬಳ್ಳಿಯ ಮಸೀದಿಯೊಂದರಲ್ಲಿ ಹುಟ್ಟು ಹಬ್ಬ ಆಚರಿಸಿಕೊಂ ಡಿದ್ದಾರೆ. ಧಾರವಾಡ ಜಿಲ್ಲೆಯಾದ್ಯಂತ ಕೊರೊನಾ ಲಾಕ್ ಡೌನ್, 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Shashi Tharoor| ಎಲ್ಲರಿಗೂ ಉಚಿತ ಲಸಿಕೆ ನೀಡಿ: ಕೇಂದ್ರ ಸರ್ಕಾರದ ಲಸಿಕಾ ನೀತಿ ಬಗ್ಗೆ ಕಿಡಿಕಾರಿದ ಶಶಿ ತರೂರ್

ಇಷ್ಟರ ನಡುವೆಯೂ ಅದ್ಧೂರಿಯಾಗಿ ಅಲ್ತಾಫ್ ಕಿತ್ತೂರ ಹುಟ್ಟು ಹಬ್ಬ ಆಚರಿಸಿಕೊಂ ಡಿದ್ದಾನೆ. ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಪಾಡದೆ ಹುಟ್ಟು ಹಬ್ಬ ಆಚರಿಸಿಕೊಳ್ಳ ಲಾಗಿದೆ. ಜೆಡಿಎಸ್ ಪಕ್ಷದಲ್ಲಿದ್ದ ಅಲ್ತಾಫ್ ಕೆಲ ದಿನಗಳ ಹಿಂದೆಯಷ್ಟೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಕಠಿಣ ನಿಯಮ ಜಾರಿಯಲ್ಲಿದ್ರೂ ಅದ್ದೂರಿ ಹುಟ್ಟು ಹಬ್ಬ ಆಚರಣೆ ಚರ್ಚೆಗೆ ಗ್ರಾಸವಾಗಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:MAshok Kumar
First published: