ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ಮಗನ ಮದುವೆಯಲ್ಲಿ ನಿಯಮ ಉಲ್ಲಂಘನೆ; ಪಿಟಿಪಿ ವಿರುದ್ಧ ದೂರು ದಾಖಲು

ಜನ ಸಾಮಾನ್ಯರಿಗಾದರೆ ಒಂದು ನ್ಯಾಯ, ರಾಜಕಾರಣಿಗಳಿಗಾದರೆ ಒಂದು ನ್ಯಾಯ ಎಂದು ಸಾರ್ವಜನಿಕರು ಈ ಬಗ್ಗೆ ಅಸಮಾಧಾನ ಕೂಡ ವ್ಯಕ್ತಪಡಿಸಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲೂ ವರದಿ ಪ್ರಸಾರವಾದ ಬಳಿಕ ಎಚ್ಚೆತ್ತ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಯಮ ಉಲ್ಲಂಘಿಸಿದ ಶಾಸಕರ ವಿರುದ್ಧ ಕಾನೂನು ಕ್ರಮದ ಸೂಚನೆ ನೀಡಿದ ಮೇರೆಗೆ ಇದೀಗ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಪಿ.ಟಿ.ಪರಮೇಶ್ವರ ನಾಯ್ಕ್ ಮಗನ ಮದುವೆಯಲ್ಲಿ ಸಚಿವ ಶ್ರೀರಾಮುಲು ಪಾಲ್ಗೊಂಡಿದ್ದರು. ಈ ವೇಳೆ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘಿಸಲಾಗಿದೆ.

ಪಿ.ಟಿ.ಪರಮೇಶ್ವರ ನಾಯ್ಕ್ ಮಗನ ಮದುವೆಯಲ್ಲಿ ಸಚಿವ ಶ್ರೀರಾಮುಲು ಪಾಲ್ಗೊಂಡಿದ್ದರು. ಈ ವೇಳೆ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘಿಸಲಾಗಿದೆ.

  • Share this:
ದಾವಣಗೆರೆ: ‌ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪಿ ಟಿ ಪರಮೇಶ್ವರ ನಾಯ್ಕ್ ಮಗನ ಮದುವೆ ಇಂದು ನಗರದಲ್ಲಿ ಅದ್ಧೂರಿಯಾಗಿ ನೆರವೇರಿತ್ತು. ಈ ಮದುವೆಗೆ ಹಲವಾರು ಮಾಜಿ ಸಿಎಂ ಸಿದ್ಧರಾಮಯ್ಯ, ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ರಾಜ್ಯದ ಹಲವು ರಾಜಕೀಯ ನಾಯಕರು ಆಗಮಿಸಿ, ನೂತನ ವಧು-ವರನನ್ನು ಆರೈಸಿದ್ದರು. ಆದರೆ, ಮದುವೆಯ ಕೊರೋನಾ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ಹಾಗೂ ಅವರ ಮತ್ತೊಬ್ಬ ಮಗ ವಿರುದ್ಧ ಇದೀಗ ಎಫ್​ಐಆರ್ ದಾಖಲಿಸಲಾಗಿದೆ.

ಪಿಟಿ ಪರಮೇಶ್ವರ್ ನಾಯ್ಕ್ ಹಾಗೂ ಮತ್ತೊಬ್ಬ ಮಗ ಭರತ್ ನಾಯ್ಕ್ ವಿರುದ್ದ ಪ್ರಕರಣ ದಾಖಲಾಗಿದೆ.  ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ಸೂಚನೆ ಮೇರೆಗೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಎಫ್ಐಅರ್ ದಾಖಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಹಾಲಿ ಶಾಸಕನ ವಿರುದ್ಧ ದೂರು ದಾಖಲಿಸಲಾಗಿದೆ.

ಕೊರೋನಾ ಸಂಕಷ್ಟ ಸಮಯದಲ್ಲಿ ಯಾವುದೇ ಮದುವೆ ಸಮಾರಂಭ ನಡೆಸಲು ಕೇಂದ್ರ ಗೃಹ ಇಲಾಖೆ ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದರಂತೆ ಪ್ರತಿಯೊಬ್ಬರು ಮದುವೆ ಸಮಾರಂಭ ನಡೆಸಬೇಕು ಎಂದು ಹೇಳಿದೆ. ಅದರಂತೆ ಮದುವೆ ಸಮಾರಂಭಕ್ಕೆ 50ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ, ಬಂದ ಅತಿಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಬೇಕು ಎಂಬುದು ಸೇರಿ ಹಲವು  ನಿಯಮಗಳನ್ನು ರೂಪಿಸಲಾಗಿದೆ. ಆದರೆ, ಇಂದು ನಡೆದ ಶಾಸಕರ ಮಗನ ಮದುವೆಯಲ್ಲಿ ಸಾವಿರಕ್ಕೂ ಅಧಿಕ ಜನರು ಸೇರಿದ್ದರು. ಬಂದವರಲ್ಲಿ ಹಲವು ಮಂದಿ ಮಾಸ್ಕ್​ ಕೂಡ ಧರಿಸಿರಲಿಲ್ಲ. ಅಲ್ಲದೇ ಎಲ್ಲರೂ ಗುಂಪು ಗುಂಪಾಗೇ ಇದ್ದು, ಸಾಮಾಜಿಕ ಅಂತರವನ್ನು ನಿರ್ಲಕ್ಷ್ಯ ಮಾಡಿದ್ದರು.

ಜನ ಸಾಮಾನ್ಯರಿಗಾದರೆ ಒಂದು ನ್ಯಾಯ, ರಾಜಕಾರಣಿಗಳಿಗಾದರೆ ಒಂದು ನ್ಯಾಯ ಎಂದು ಸಾರ್ವಜನಿಕರು ಈ ಬಗ್ಗೆ ಅಸಮಾಧಾನ ಕೂಡ ವ್ಯಕ್ತಪಡಿಸಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲೂ ವರದಿ ಪ್ರಸಾರವಾದ ಬಳಿಕ ಎಚ್ಚೆತ್ತ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಯಮ ಉಲ್ಲಂಘಿಸಿದ ಶಾಸಕರ ವಿರುದ್ಧ ಕಾನೂನು ಕ್ರಮದ ಸೂಚನೆ ನೀಡಿದ ಮೇರೆಗೆ ಇದೀಗ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

First published: