ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: 8 ನಾಮಪತ್ರ ತಿರಸ್ಕಾರ; 11 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆಗೆ ಬಿಜೆಪಿ, ಜೆಡಿಎಸ್, ಶಿವಸೇನಾ ಪಕ್ಷಗಳ ಅಭ್ಯರ್ಥಿ ಸೇರಿದಂತೆ ಒಟ್ಟು 11 ಮಂದಿಯ ನಾಮಪತ್ರಗಳು ಸ್ವೀಕೃತಗೊಂಡಿವೆ. ಜೆಡಿಯು ಅಭ್ಯರ್ಥಿಯದ್ದು ಸೇರಿ ಎಂಟು ನಾಮಪತ್ರಗಳು ತಿರಸ್ಕೃತಗೊಂಡಿವೆ.

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾ ಅಧಿಕಾರಿಗಳು

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾ ಅಧಿಕಾರಿಗಳು

  • Share this:
ಹುಬ್ಬಳ್ಳಿ(ಅ. 09): ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ ಇಂದು ಜರುಗಿತು. 19 ಅಭ್ಯರ್ಥಿಗಳಿಂದ ಸಲ್ಲಿಸಲ್ಪಟ್ಟಿದ್ದ 32 ನಾಮಪತ್ರಗಳಲ್ಲಿ 8 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ. 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಚುನಾವಣಾ ವೀಕ್ಷಕರಾಗಿರುವ ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಚುನಾವಣಾ ಅಧಿಕಾರಿಗಳಾಗಿರುವ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್, ಸಹಾಯಕ ಚುನಾವಣಾ ಅಧಿಕಾರಿಯಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರು ನಾಮಪತ್ರ ಪರಿಶೀಲನೆ ಕಾರ್ಯ ಕೈಗೊಂಡರು.

ಇದನ್ನೂ ಓದಿ: ವಿದ್ಯಾಗಮ ಮುಂದುವರಿಯುತ್ತದೆ; ಯೋಜನೆ ವೈಫಲ್ಯ ಎನ್ನುವುದು ತಪ್ಪು: ಶಿಕ್ಷಣ ಸಚಿವ

ತಿರಸ್ಕೃತಗೊಂಡ ನಾಮಪತ್ರಗಳು:
ಆಜಾದ್ ಮಜದೂರ್ ಕಿಸಾನ್ ಪಕ್ಷದ ಪ್ರಕಾಶ ಕಾಂಬಳೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಮಂಜುನಾಥ ಭದ್ರಪ್ಪ ಬೆಳವತ್ತಿ, ಜನತಾದಳ (ಸಂಯುಕ್ತ) ಮಲ್ಲಿಕಾರ್ಜುನ ಚನ್ನಪ್ಪ ಗಂಗಾಧರ, ಪಕ್ಷೇತರರಾದ ಅಶೋಕ ಮಲ್ಲಪ್ಪ ಜವಳಿ, ಕೃಷ್ಣ ಹನುಮಂತಪ್ಪ ಬಳಿಗಾರ, ಚನ್ನಪ್ಪ ಪಿ.ಬ್ರಹ್ಮನಪಾಡ, ಚರಣರಾಜ್ ಕೆ.ಎ, ರವಿ ಶಿವಪ್ಪ ಪಡಸಲಗಿ ಅವರು ಸಲ್ಲಿಸಿದ್ದ ನಾಮಪತ್ರಗಳಲ್ಲಿ ನೈಜ ಸೂಚಕರು, ಅಫಿಡವಿಟ್​ಗಳಲ್ಲಿ ನ್ಯೂನತೆ, ಮತದಾರರ ಪಟ್ಟಿಯ ಪ್ರಮಾಣೀಕೃತ ಪ್ರತಿಗಳ ಕೊರತೆ ಮತ್ತಿತರ ಅಂಶಗಳು ಕಂಡು ಬಂದ ಹಿನ್ನೆಲೆಯಲ್ಲಿ ಈ ಎಂಟು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತ ಗೊಂಡವು.

ಇದನ್ನೂ ಓದಿ: ತಾಯಿಯಿಂದ ಬೇರ್ಪಟ್ಟ ಕಾಡಾನೆ ಮರಿಗೆ ಸಕ್ರೆಬೈಲ್ ಬಿಡಾರದಲ್ಲಿ ಚಿಕಿತ್ಸೆ 

ಸ್ವೀಕೃತ ಸಿಂಧು ನಾಮಪತ್ರಗಳು:
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆರ್. ಎಂ.ಕುಬೇರಪ್ಪ, ಜನತಾದಳ (ಜಾತ್ಯಾತೀತ)ದ ಶಿವಶಂಕರ ಚನ್ನಪ್ಪ ಕಲ್ಲೂರ, ಭಾರತೀಯ ಜನತಾ ಪಕ್ಷದ ಸಿದ್ದಲಿಂಗಪ್ಪ ವಿ.ಸಂಕನೂರ, ಕರ್ನಾಟಕ ರಾಷ್ಟ್ರ ಸಮಿತಿಯ ಶಿವರಾಜ ಕೆಂಚಪ್ಪ ಕಾಂಬಳೆ, ಶಿವಸೇನಾ ಪಕ್ಷದ ಸೋಮಶೇಖರ ವಿರೂಪಾಕ್ಷ ಉಮರಾಣಿ, ಪಕ್ಷೇತರ ಅಭ್ಯರ್ಥಿಗಳಾದ ದಶರಥ ಚಂದ್ರಹಾಸ ರಂಗರೆಡ್ಡಿ, ಬಸನಗೌಡ ದ್ಯಾಮನಗೌಡ ಹಿರೇಗೌಡ್ರ, ಬಸವರಾಜ ಹೆಚ್. ಗುರಿಕಾರ, ಬಸವರಾಜ ಎಸ್. ತೇರದಾಳ, ಮಹ್ಮದ ಶಫೀವುದ್ದೀನ್ ಎಸ್ ನಾಗರಕಟ್ಟಿ ಹಾಗೂ ಶಿವಕುಮಾರ ಮಹಾದೇವಪ್ಪ ತಳವಾರ ಈ ಹನ್ನೊಂದು ಜನ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿಗಳಾಗಿರುವ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮತ್ತಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಶಾಲೆ ತೆರೆಯಬೇಡಿ, ಎಲ್ಲಕ್ಕಿಂತ ಜೀವ ಮುಖ್ಯ ; ಶಿಕ್ಷಣ ಸಚಿವರಿಗೆ ಪತ್ರ ಬರೆದ ವಿಪಕ್ಷ ನಾಯಕ ಸಿದ್ದರಾಮಯ್ಯ

ಎರಡನೇ ಶನಿವಾರವೂ ಸೇರಿ ಸೋಮವಾರದವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ:
ನಾಳೆ ಎರಡನೇ ಶನಿವಾರವೂ ಚುನಾವಣಾಧಿಕಾರಿಗಳ ಕಚೇರಿ ಕಾರ್ಯ ನಿರ್ವಹಿಸಲಿದ್ದು ಈ ದಿನವೂ ಸಹ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಬಹುದು. ಸೋಮವಾರ ಅಕ್ಟೋಬರ್ 12 ಮಧ್ಯಾಹ್ನ‌ 3 ಗಂಟೆಯವರೆಗೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ವರದಿ: ಪರಶುರಾಮ ತಹಶೀಲ್ದಾರ್
Published by:Vijayasarthy SN
First published: