ಸಾರ್ವಜನಿಕರ ಆಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಬೇಕು; ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರಿನಲ್ಲಿ ಗಲಾಟೆ ಮಾಡಿದವರ ಮೇಲೆ‌‌ ಪ್ರಕರಣ ದಾಖಲಿಸಿ ಬಂಧಿಸಲಾಗುತ್ತಿದೆ. ಗಲಾಟೆಯಲ್ಲಿ ಯಾವ ಸಂಘಟನೆ ಹಾಗೂ ಯಾರ್ಯಾರ ಕೈವಾಡ ಇದೆ ಎನ್ನುವ ಕುರಿತು ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ, ಮಾಡಿದರಿಂದಲೇ ನಷ್ಟ ವಸೂಲಿ ಮಾಡಬೇಕು ಎಂದರು.

news18-kannada
Updated:August 14, 2020, 2:24 PM IST
ಸಾರ್ವಜನಿಕರ ಆಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಬೇಕು; ಸಚಿವ ಜಗದೀಶ್ ಶೆಟ್ಟರ್
ಜಗದೀಶ್‌ ಶೆಟ್ಟರ್‌.
  • Share this:
ಗದಗ: ಬೆಂಗಳೂರಿನಲ್ಲಿ ನಡೆದ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಗಲಾಟೆಯ ಪೊಲೀಸ್ ಗೋಲಿಬಾರ್​ನಲ್ಲಿ ಮೂವರು ಮೃತಪಟ್ಟಿದ್ದರು. ಗಲಭೆಯಲ್ಲಿ ಮೃತರ ಕುಟುಂಬಕ್ಕೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಪರಿಹಾರ ನೀಡಿದ ವಿಚಾರವಾಗಿ ಸಚಿವ ಜಗದೀಶ್ ಶೆಟ್ಟರ್ ಅವರು ಕಿಡಿಕಾರಿದ್ದಾರೆ.

ಗದಗ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಶಾಸಕ ಜಮೀರ್ ಅಹಮದ್ ಖಾನ್ ಅವರು ಹೀಗೆ ಪರಿಹಾರ ನೀಡುತ್ತಾ ಹೋದರೆ ಪ್ರಚೋದನೆ ಮಾಡಿದಂತೆ ಆಗುತ್ತೆ. ಜಮೀರ್ ಅಹ್ಮದ್ ಅವರಿಗೆ ಬರೀ ಜಾತಿ, ಧರ್ಮದ ಬಗ್ಗೆ ಮಾತ್ರ ಕಾಳಜಿ ಇದೆ. ಸಮಾಜ, ಸಮಾಜದ ವ್ಯವಸ್ಥೆ, ಕಾನೂನು ಸುವ್ಯವಸ್ಥೆ ಬಗ್ಗೆ ಗೊತ್ತಿಲ್ಲ. ಒಬ್ಬ ರಾಜಕಾರಣಿಯಾಗಿ, ಶಾಸಕನಾಗಿ ಮಾಡುವ ಕರ್ತವ್ಯಕ್ಕೆ ಯಾವಾಗಲೂ ವಿಮುಖರಾಗಿ ನಡೆಯುವ ಕೆಲಸ ಜಮೀರ್ ಮಾಡುತ್ತಿದ್ದಾರೆ. ಇದರಲ್ಲಿ ಕೋಮು ದ್ವೇಷ ಮಾಡುವ, ಜಾತಿ ಇಟ್ಕೊಂಡು ವಾದ ಮಾಡುವ ಕೆಲಸ ಇದೆ. ಜಮೀರ್ ಅವರು ಮಾಡುವ ಕೆಲಸ ಸಮಾಜಕ್ಕೆ ಮಾರಕವಾಗಲಿದೆ ಎಂದು ಹೇಳಿದರು.

ಇದನ್ನು ಓದಿ: DJ Halli Violence: ‘ಫೇಸ್​​ಬುಕ್​​ ಪೋಸ್ಟ್​ ಹಾಕಿದ್ದು ನಾನೇ‘ - ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡ ನವೀನ್​

ಇನ್ನು ಬೆಂಗಳೂರಿನಲ್ಲಿ ಗಲಾಟೆ ಮಾಡಿದವರ ಮೇಲೆ‌‌ ಪ್ರಕರಣ ದಾಖಲಿಸಿ ಬಂಧಿಸಲಾಗುತ್ತಿದೆ. ಗಲಾಟೆಯಲ್ಲಿ ಯಾವ ಸಂಘಟನೆ ಹಾಗೂ ಯಾರ್ಯಾರ ಕೈವಾಡ ಇದೆ ಎನ್ನುವ ಕುರಿತು ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ, ಮಾಡಿದರಿಂದಲೇ ನಷ್ಟ ವಸೂಲಿ ಮಾಡಬೇಕು. ಸಾರ್ವಜನಿಕ ಆಸ್ತಿ ಹಾನಿ ಮಾಡಿದವರ ಸ್ವತ್ತು ಮುಟ್ಟುಗೋಲು ಹಾಕಿಕೊಳ್ಳುವ ಚರ್ಚೆ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿದೆ. ಸಂಘಟನೆ ನಿಷೇಧ ಮಾಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಕಾನೂನು ಕೈಗೆ ತೆಗೆದುಕೊಂಡಿದ್ದನ್ನು ನಾನು ಖಂಡಿಸುತ್ತೇನೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
Published by: HR Ramesh
First published: August 14, 2020, 2:24 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading