ವಿಜಯಪುರ: ಬಾರುಗಳು, ಸಿನಿಮಾ ಮಂದಿರಗಳು, ಮಾಲ್ ಗಳು ಮತ್ತು ರಾಜಕೀಯ ಕಾರ್ಯಕ್ರಮಗಳಿಗೆ ನೀಡಿದ ಅನುಮತಿಯಂತೆ ಜಾತ್ರೆಗಳು ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಗೂ ನೀಡಬೇಕು ಎಂದು ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಅಪ್ಪು ಪಟ್ಟಣಶೆಟ್ಟಿ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರನ್ನು ಅಪ್ಪು ಪಟ್ಟಣಶೆಟ್ಟಿ ಮತ್ತು ಇತರ ಮುಖಂಡರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಕೊರೋನಾ ಹಿನ್ನೆಲೆಯಲ್ಲಿ ರೋಗ ನಿಯಂತ್ರಣಕ್ಕಾಗಿ ಸರಕಾರ ರಾಜ್ಯಾದಂತ ಲಾಕ್‌ಡೌನ ಮಾಡಿತ್ತು. ಅಲ್ಲದೇ, ರಾಜ್ಯದಲ್ಲಿ ನಡೆಯುವ ಎಲ್ಲಾ ಜಾತ್ರೆಗಳು, ಮದುವೆ ಸಮಾರಂಭ ಧಾರ್ಮಿಕ ಕಾರ್ಯಕ್ರಮ, ಶಾಲಾ ಕಾಲೇಜುಗಳು, ಮಾಲ್ ಗಳು, ಸಿನೇಮಾ ಮಂದಿರಗಳು, ರೇಲ್ವೆ, ಬಸ್ಸುಗಳು ಹಾಗೂ ಬಾರ ಆ್ಯಂಡ್ ರೆಸ್ಟೋರೆಂಟ್ ಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಎಲ್ಲವೂ ಬಂದ ಆಗಿದ್ದವು. ಆದರೆ, ಕೊರೊನಾ ನಿಯಂತ್ರಣದ ನಂತರ ಎಲ್ಲ ಉದ್ಯಮಗಳು ಮತ್ತು ಹೋಟೆಲಗಳು, ಬಾರುಗಳು, ಮಾಲ್ ಗಳು ಪುನಾರಂಭವಾಗಿವೆ. ಜನರೂ ಕೂಡ ಎಂದಿನಂತೆ ವ್ಯವಹಾರ ನಡೆಸುತ್ತಿದ್ದಾರೆ. ಜಾತ್ರೆಗಳು, ದಾಸೋಹಗಳು, ಧಾರ್ಮಿಕ ಕಾರ್ಯಕ್ರಮಗಳೂ ಪ್ರಾರಂಭವಾಗಿದ್ದವು. ಈ ಹಿನ್ನೆಲೆಯಲ್ಲಿ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿ ಪೂರ್ವ ಸಿದ್ದತೆಗಳನ್ನು ಮಾಡಿಕೊಂಡಿದ್ದವು. ಈಗ ಸರಕಾರ ಏಕಾಏಕಿ 15 ದಿನಗಳವರೆಗೆ ಜಾತ್ರೆ ಹಾಗೂ ಧಾರ್ಮಿಕ ಸಮಾರಂಭಗಳು, ಮೇಳಗಳನ್ನು ಮಾಡದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಇದು ಸರಿಯಲ್ಲ ಎಂದು ಅವರು ತಿಳಿಸಿದರು.
ಇದನ್ನೂ ಓದಿ: Rafale Fighter Jet: ಭಾರತಕ್ಕೆ ಆಗಮಿಸಿದ ಮತ್ತೊಂದು ಬ್ಯಾಚ್ ರಪೇಲ್ ಯುದ್ಧ ವಿಮಾನಗಳು
ಧಾರ್ಮಿಕ ಪದ್ಧತಿಯಂತೆ ಮದುವೆಗಳು ನಿಗದಿಯಂತೆ ಅದೇ ದಿನ ನಡೆಯಲೇಬೇಕು. ಅಲ್ಲದೇ, ಕಳೆದ ಒಂದು ವರ್ಷದಿಂದ ಎಲ್ಲಿಯೂ ಕೂಡ ಜಾನುವಾರು ಜಾತ್ರೆ ನಡೆಸಿರುವುದಿಲ್ಲ. ಇದರಿಂದ ರೈತರು ಸಾಕಷ್ಟು ನಷ್ಟವನ್ನು ಅನುಭವಿಸುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ಸಮಯದಲ್ಲಿ ಹೆಚ್ಚು ಜಾತ್ರೆಗಳು ನಡೆಯುತ್ತಿದ್ದು ರೈತರು ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ಕೊರೋನಾ ನಿಯಮ ಪಾಲನೆಯ ಮಾಡುವ ಮೂಲಕ ಜಾತ್ರೆ, ಧಾರ್ಮಿಕ ಕಾರ್ಯಕ್ರಮ ಆಚರಣೆಗೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ