ಚಿಕ್ಕೋಡಿ (ಏಪ್ರಿಲ್ 13): ಯುಗಾದಿ ಹಬ್ಬದ ದಿನವೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಗೆ ಮಾತೃವಿಯೋಗ ಉಂಟಾಗಿದೆ. ಸಚಿವರ ತಾಯಿ 84 ವರ್ಷ ವಯಸ್ಸಿನ ಶ್ರೀಮತಿ ಸೇವಂತಾ ಹರದಾರೆ ವಯೋಸಹಜ ಖಾಯಿಲೆಯಿಂದ ಸಾವನ್ನಪ್ಪಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕೊಲ್ಗಾಪುರದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ