ಶಿವಮೊಗ್ಗ(ಜೂ.17): ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ 19 ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದ ದಾವಣಗೆರೆ ಜಿಲ್ಲೆಯ ಮಹಿಳೆ ಮೃತಪಟ್ಟಿದ್ದಾಳೆ. ಮೃತ ಮಹಿಳೆಯುವ ದಾವಣೆಗರೆ ಜಿಲ್ಲೆಯ ಚನ್ನಗಿರಿ ಮೂಲದರು. ಸುಮಾರು 57 ವರ್ಷದ ಮಹಿಳೆ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.
ಕಳೆದ ಮೂರು ದಿನಗಳ ಹಿಂದೆಯಷ್ಟೇ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯು ಕಿಡ್ನಿ ಸೊಂಕು, ಶ್ವಾಸಕೋಶ ಸಮಸ್ಯೆ ಯಿಂದ ಅವರು ಬಳಲುತ್ತಿದ್ದರು.ಈ ಹಿನ್ನೆಲೆಯಲ್ಲಿ ಚಿಕಿತ್ಯೆ ಪಡೆಯುವುದಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಮೂರು ದಿನಗಳ ಹಿಂದೆಯಷ್ಟೇ ಸ್ವತಃ ಅವರೇ ಬಂದು ಮೆಗ್ಗಾನ್ ದಾಖಲಾಗಿದ್ದರು.ಚಿಕಿತ್ಸೆ ಸಹ ನೀಡಲಾಗುತ್ತಿತ್ತು.
ಇದನ್ನೂ ಓದಿ :
ಅಶೋಕ ಚಂದರಗಿ ಅವರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡಲು ಆಗ್ರಹ- ಕನ್ನಡ ಪರ ಸಂಘಟನೆಗಳ ಒಗ್ಗಟ್ಟು ಪ್ರದರ್ಶನ..!
ಈ ಹಿಂದೆ ಅವರಿಗೆ ಕೋವಿಡ್ ಪರೀಕ್ಷೆ ಮಾಡಿದಾಗ ನೆಗೆಟಿವ್ ಬಂದಿತ್ತು. ಮತ್ತೊಂದು ಬಾರಿ ನಿನ್ನೆ ಪರೀಕ್ಷೆ ಮಾಡಿದಾಗ ವರದಿಯಲ್ಲಿ ಪಾಸಿಟಿವ್ ಬಂದಿದೆ. ವರದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೋನಾ ಪಾಸಿಟಿವ್ ಬಂದು ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ. ಮೃತಪಟ್ಟ ಮಹಿಳೆಯ ಪ್ರಾಥಮಿಕ ಸಂಪರ್ಕ ದಲ್ಲಿದ್ದ ನಾಲ್ಕು ಜನರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ