ಕಲಘಟಗಿಯಲ್ಲಿ ಎ‌ಂಎಸ್‌ಐಎಲ್ ಮದ್ಯದ ಅಂಗಡಿ ಬಂದ್ ಮಾಡಲು ಮಹಿಳೆಯರ ಹೋರಾಟ

ಸ್ಥಳದಲ್ಲಿ ಮಹಾಲಕ್ಷ್ಮೀ ದೇವಸ್ಥಾನ, ದರ್ಗಾ ಮತ್ತು ಶಾಲೆಗಳಿವೆ. ಮಹಿಳೆಯರು, ವಿದ್ಯಾರ್ಥಿಗಳು ಓಡಾಡುವ ಜಾಗದಲ್ಲಿ ಮದ್ಯದ ಅಂಗಡಿ ತೆರೆದಿರುವುದರಿಂದ ತೊಂದರೆಯಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ

news18-kannada
Updated:October 10, 2020, 7:29 AM IST
ಕಲಘಟಗಿಯಲ್ಲಿ ಎ‌ಂಎಸ್‌ಐಎಲ್ ಮದ್ಯದ ಅಂಗಡಿ ಬಂದ್ ಮಾಡಲು ಮಹಿಳೆಯರ ಹೋರಾಟ
ಮಹಿಳೆಯರು
  • Share this:
ಹುಬ್ಬಳ್ಳಿ(ಅಕ್ಟೋಬರ್​. 10): ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ನೂತನವಾಗಿ ತೆರೆದಿರುವ ಎಂ‌ಎಸ್‌ಐಎಲ್ ಮದ್ಯದ ಅಂಗಡಿ ವಿರುದ್ಧ ಸ್ಥಳೀಯ ಮಹಿಳೆಯರು ಪ್ರತಿಭಟನೆ ನಡೆಸಿದರು. ಎಂಎಸ್​‌ಐಎಲ್ ಮದ್ಯದ ಅಂಗಡಿ ಬಾಗಿಲು ಮುಚ್ಚುವಂತೆ ಒತ್ತಾಯಿಸಿದ್ದಾರೆ. ಬಾಗವಾನ್ ಓಣಿಯಲ್ಲಿ ತೆರೆಯಲಾಗಿರುವ ನೂತನ ಎಂ‌ಎಸ್ಐಎಲ್ ಮದ್ಯದಂಗಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಮಹಾಲಕ್ಷ್ಮೀ ದೇವಸ್ಥಾನ, ದರ್ಗಾ ಮತ್ತು ಶಾಲೆಗಳಿವೆ. ಮಹಿಳೆಯರು, ವಿದ್ಯಾರ್ಥಿಗಳು ಓಡಾಡುವ ಜಾಗದಲ್ಲಿ ಮದ್ಯದ ಅಂಗಡಿ ತೆರೆದಿರುವುದರಿಂದ ತೊಂದರೆಯಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸ್ಥಳದಲ್ಲಿದ್ದ ಅಬಕಾರಿ ಅಧಿಕಾರಿಗಳ‌ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನವಸತಿ ಪ್ರದೇಶದಲ್ಲಿರುವ ಮದ್ಯದಂಗಡಿಯನ್ನು ಕೂಡಲೆ ಬಂದ್ ಮಾಡುವಂತೆ ಮಹಿಳೆಯರು ಆಗ್ರಹಿಸಿದ್ದಾರೆ‌. ಎಂ‌ಎಸ್‌ಐಎಲ್ ಸಿಬ್ಬಂದಿ ಹಾಗೂ ಅಬಕಾರಿ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಪೌರ ಕಾರ್ಮಿಕರ ಪ್ರತಿಭಟನೆ :

ನೇರ ನೇಮಕಾತಿ ಹಾಗೂ ನೇರ ವೇತನ ಪಾವತಿಗೆ ಆಗ್ರಹಿಸಿ ಹುಬ್ಬಳ್ಳಿ - ಧಾರವಾಡ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಹಾಗೂ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ ನಿವಾಸದ ಎದರು ಧರಣಿ ನಡೆಸಿದರು. ನೂರಾರು ಪೌರ ಕಾರ್ಮಿಕರಿಂದ ಶೆಟ್ಟರ್ ನಿವಾಸದ ಎದುರು ಜಮಾಯಿಸಿ ಘೋಷಣೆಗಳನ್ನು ಕೂಗಿದರು. ‌ನೇರ ನೇಮಕಾತಿ ಮಾಡಿಸುವುದಾಗಿ ಕೆಲ‌ ಕಾರ್ಮಿಕರ ಮುಖಂಡರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪೌರ ಕಾರ್ಮಿಕರ ದೂರು ಆಲಿಸಿದ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕರಿಂದ ಹಣ ಸೂಲಿಗೆ ಮಾಡುತ್ತಿರುವ ವಿಚಾರ ಗಮನಕ್ಕೆ‌ ಬಂದಿದೆ. ಪೌರ ಕಾರ್ಮಿಕರಿಗೆ ಏನೇ ಸಮಸ್ಯೆಗಳಿದ್ದರೂ ನೇರವಾಗಿ ಭೇಟಿಯಾಗುವಂತೆ ಸಲಹೆ ನೀಡಿದರು. ಮಧ್ಯವರ್ತಿಗಳಿಗೆ ಹಣ ನೀಡಬೇಡಿ. ಶೀಘ್ರದಲ್ಲೇ ಪೌರ ಕಾರ್ಮಿಕರ ನೇರ ನೇಮಕಾತಿ ಹಾಗೂ ನೇರ ವೇತನ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶೆಟ್ಟರ್ ಭರವಸೆ ನೀಡಿದರು.

ಹತ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ  ಬೃಹತ್ ಪ್ರತಿಭಟನೆ

ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಜಯಕರ್ನಾಟಕ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಅಂಬೇಡ್ಕರ್ ವೃತ್ತದಿಂದ‌ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.

ಇದನ್ನೂ ಓದಿ : ಮೀಸಲಾತಿಯಲ್ಲಿ ಅನ್ಯಾಯ ; ಅಡ್ವೊಕೇಟ್ ಜನರಲ್‌ ರಾಜೀನಾಮೆಗೆ ಮಾಜಿ ಸಚಿವ ರೇವಣ್ಣ ಒತ್ತಾಯಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಪರಾಧ ನಿಯಂತ್ರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಯುಪಿ ಸರ್ಕಾರ ಅಪರಾಧಿಗಳಿಗೆ ರಕ್ಷಣೆ ಕೊಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅತ್ಯಾಚಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರಿಗಳಿಗೆ ತಕ್ಷಣ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿ ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
Published by: G Hareeshkumar
First published: October 10, 2020, 7:29 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading