HOME » NEWS » District » ZP PREZ JYOTI S KUMAR SAYS FREE RICE AND DAL WILL BE PROVIDED DIRECTLY TO STUDENTS UNDER AKSHARA DASOHA HRNS HK

ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೇರವಾಗಿ ಅಕ್ಕಿ ಬೆಳೆ ವಿತರಣೆ: ಜಿ.ಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್

ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ದಿನಕ್ಕೆ 100 ಗ್ರಾಂ ಅಕ್ಕಿ ಮತ್ತು 37 ಗ್ರಾಂ ಬೆಳೆಯಂತೆ ಒಂದೇ ಕಂತಿನಲ್ಲಿ ಇಂದಿನಿಂದ ವಿದ್ಯಾರ್ಥಿಗಳಿಗೆ ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ

news18-kannada
Updated:November 10, 2020, 7:13 PM IST
ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೇರವಾಗಿ ಅಕ್ಕಿ ಬೆಳೆ ವಿತರಣೆ: ಜಿ.ಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್
ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆ
  • Share this:
ಶಿವಮೊಗ್ಗ(ನವೆಂಬರ್​. 10): ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ಈ ಸಾಲಿನಲ್ಲಿ 108 ದಿನಗಳ ಅವಧಿಯ ಅಕ್ಕಿ ಮತ್ತು ಬೆಳೆಯನ್ನು ನೇರವಾಗಿ ವಿತರಿಸಲಾಗುವುದು ಎಂದು ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್​ ತಿಳಿಸಿದರು. ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 53 ದಿನಗಳ ಅವಧಿಯ ರೇಷನ್ ಸರಬರಾಜಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ದಿನಕ್ಕೆ 100 ಗ್ರಾಂ ಅಕ್ಕಿ ಮತ್ತು 37 ಗ್ರಾಂ ಬೆಳೆಯಂತೆ ಒಂದೇ ಕಂತಿನಲ್ಲಿ ಇಂದಿನಿಂದ ವಿದ್ಯಾರ್ಥಿಗಳಿಗೆ ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದರು. ಈ ವೇಳೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರು ನಡೆಸಿದರು. ಪ್ರೌಢಶಾಲೆ ಆರಂಭಿಸುವ ಕುರಿತಾಗಿ ವಿವಿಧ ಹಂತಗಳಲ್ಲಿ ಈಗಾಗಲೇ ಚರ್ಚೆ ನಡೆದಿದ್ದು, ಡಿಸೆಂಬರ್ ತಿಂಗಳಿನಿಂದ ತರಗತಿಗಳು ಆರಂಭವಾಗುವ ಸಾಧ್ಯತೆ ಇದೆ. ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಶೇ.98 ರಷ್ಟು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ದಾಖಲಾತಿಯಲ್ಲಿ ಹೆಚ್ಚಳವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ಮಾಹಿತಿ ನೀಡಿದರು. 

ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಪ್ರಕರಣಗಳು ಇಳಿಮುಖವಾಗಿದ್ದು, ಒಟ್ಟು 20,803 ಸೋಂಕಿತ ಪ್ರಕರಣಗಳ ಪೈಕಿ 20,243 ಜನರು ಗುಣಮುಖರಾಗಿದ್ದಾರೆ. ಹಾಲಿ 213 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು  ಇಲ್ಲಿಯವರೆಗೆ 347 ಮಂದಿ ಮರಣ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 3155 ಬೆಡ್​​ಗಳ ವ್ಯವಸ್ಥೆ ಮಾಡಲಾಗಿದ್ದು, 152 ತೀವ್ರ ನಿಗಾ ಘಟಕದ ಬೆಡ್​ಗಳು ಹಾಗೂ 658 ಆಕ್ಸಿಜನ್ ಬೆಡ್​ಗಳಿವೆ. 76 ವೆಂಟಿಲೇಟರ್​ಗಳಿ ಲಭ್ಯವಿದೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ ಶೇ.21, ಸೆಪ್ಟಂಬರ್​ನಲ್ಲಿ ಶೇ.19 ಇದ್ದ ಸೋಂಕಿನ ಪ್ರಮಾಣ ಇಂದು ಶೇ.2 ಕ್ಕೆ ಇಳಿದಿದೆ. ಪರೀಕ್ಷೆಗೆ ಒಳಪಡಿಸುವ 100 ಜನರಲ್ಲಿ 1.61 ಮಂದಿಗೆ ಸೋಂಕು ಕಂಡು ಬರುತ್ತಿದೆ ಎಂದು ಮಾಹಿತಿ ನೀಡಿದರು.

2019ನೇ ಮುಂಗಾರು ಹಂಗಾಮಿಗೆ  ಜಿಲ್ಲೆಯ 8950 ರೈತರಿಗೆ ಬೆಳೆವಿಮೆ ಮಂಜೂರಾಗಿದ್ದು, ಒಟ್ಟು 8.56 ಕೋಟಿ ರೂಪಾಯಿ ಒಂದು ವಾರದ ಒಳಗಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 3796 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದ್ದು, ಪರಿಹಾರ ಒದಗಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದರು.

ಇದನ್ನೂ ಓದಿ : Munirathna: ರಾಜರಾಜೇಶ್ವರಿ ನಗರದಲ್ಲಿ 57936 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ದ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಮುನಿರತ್ನ

ಪ್ರಸಕ್ತ ಮುಂಗಾರಿನಲ್ಲಿ 234 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯುಂಟಾಗಿದೆ. ಕಳೆದ ಸಾಲಿಗೆ  ಸಂಬಂಧಿಸಿದಂತೆ  21,414 ರೈತರಿಗೆ 25.94 ಕೋಟಿ ರೂಪಾಯಿ ಬೆಳೆ ವಿಮೆ ಮೊತ್ತವನ್ನು ಪಾವತಿಸಲಾಗುತ್ತಿದೆ ಎಂದು ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕ ರಾಮಚಂದ್ರ ಮಡಿವಾಳ ಮಾಹಿತಿ ನೀಡಿದರು.
Youtube Video
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ವೀರಭದ್ರಪ್ಪ ಪೂಜಾರ್, ಸುರೇಶ್ ಸ್ವಾಮಿರಾವ್, ರೇಣುಕಾ ಹನುಮಂತಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Published by: G Hareeshkumar
First published: November 10, 2020, 7:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories