• Home
  • »
  • News
  • »
  • education
  • »
  • Training For Students: ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದಿಂದ ಉಚಿತ ತರಬೇತಿ

Training For Students: ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದಿಂದ ಉಚಿತ ತರಬೇತಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Training For Students: ಎಂಜಿನಿಯರಿಂಗ್‌, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ ಪ್ರವೇಶ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಇದೊಂದು ಶುಭ ಸುದ್ದಿ.

  • News18 Kannada
  • Last Updated :
  • Karnataka, India
  • Share this:

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ (Students) ನೆರವಾಗುವ ಉದ್ದೇಶದಿಂದ ಉನ್ನತ ಶಿಕ್ಷಣ (Higher Education) ಇಲಾಖೆ ಉಚಿತ ತರಬೇತಿ ನೀಡಲು ಆಲೋಚಿಸಿದೆ. ಉನ್ನತ ಶಿಕ್ಷಣ ಪ್ರವೇಶಕ್ಕೆ ಸರ್ಕಾರದಿಂದ ಉಚಿತ ಟ್ರೈನಿಂಗ್ ನೀಡಿ ಸಹಕರಿಸಲು ಸರ್ಕಾರ (Government) ನಿರ್ಧರಿಸಿದೆ. ಇದರಿಂದ ಹಲವಾರು ವಿದ್ಯಾರ್ಥಿಗಳಿಗೆ ಸಹಾಯವಾಗಲಿದ್ದು ಇದರ ಪ್ರಯೋಜನ (Benifit) ಪಡೆಯಬಹುದಾಗಿದೆ.  ಜೆಇಇ, ನೀಟ್‌, ಸಿಇಟಿ ಸೇರಿದಂತೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗೆ ಇದು ಸಹಕಾರಿ.

ಎಂಜಿನಿಯರಿಂಗ್‌, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಶ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಇದೊಂದು ಶುಭ ಸುದ್ದಿ. ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜೆಇಇ, ನೀಟ್‌, ಸಿಇಟಿ ಸೇರಿದಂತೆ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದಿಂದಲೇ ಉಚಿತ ತರಬೇತಿ ನೀಡಲು  ಗಂಭೀರ ಆಲೋಚನೆ ನಡೆದಿದೆ.


ಉಚಿತ ಕ್ರೀಡಾ ತರಬೇತಿ


ಅಷ್ಟೇ ಅಲ್ಲದೆ ಸರ್ಕಾರಿ ಶಾಲೆ ಹಾಗೂ ಪಿಯು ಕಾಲೇಜುಗಳ ಕ್ರೀಡಾಸಕ್ತ ವಿದ್ಯಾರ್ಥಿಗಳಿಗೆ ವಿಶೇಷ ಕ್ರೀಡಾ ತರಬೇತಿ, ಕೆಲ ಉಚಿತ ಆರೋಗ್ಯ ಸೌಲಭ್ಯಗಳನ್ನು ಪ್ರಾರಂಭಿಸಲೂ ಕೂಡ ಚರ್ಚೆಗಳು ನಡೆದಿವೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಗಳಿಗೆ 31 ಕೋಟಿ ರೂ ವೆಚ್ಚದಲ್ಲಿ ಈ ವರ್ಷವೇ ಕ್ರಿಯಾ ಯೋಜನೆ ರೂಪಿಸಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಜಾರಿಗೊಳಿಸುವ ಕುರಿತು ಚರ್ಚೆಗಳು ನಡೆದಿವೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ನಿಮ್ಮ ಮಕ್ಕಳ ಬಳಿ ಈ ನಾಲ್ಕು ವಿಷಯಗಳನ್ನು ಕೇಳಲೇ ಬೇಡಿ


ಹೊಸ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ


ಡಿಸೆಂಬರ್‌ ವೇಳೆಗೆ ಕ್ರಿಯಾ ಯೋಜನೆಗೆ ಸರ್ಕಾರದ ಅನುಮತಿ ಪಡೆದು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಆರಂಭಿಸುವ ಲೆಕ್ಕಾಚಾರ ಇಲಾಖೆಯದ್ದು. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಕಾಲೇಜಿನ ಸಮೀಪದ ಕಟ್ಟಡಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಪ್ರಕ್ರಿಯೆ ನಡೆಸಲಾಗುತ್ತದೆ. ಇದಕ್ಕೆ ಹಾಲಿ ಇರುವ ಕೋಚಿಂಗ್‌ ಕೇಂದ್ರಗಳಲ್ಲಿ ತರಬೇತಿ ನೀಡುತ್ತಿರುವ ಅಥವಾ ಹೊಸ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಬೋಧಕರಿಗೆ ನಿರ್ದಿಷ್ಟ ಗೌರವಧನವನ್ನೂ ನೀಡಲು ಉದ್ದೇಶಿಸಲಾಗಿದೆ.ಈ ಬಗ್ಗೆ ಕೆಲವೇ ದಿನಗಳಲ್ಲಿ ಸ್ಪಷ್ಟಚಿತ್ರಣ ದೊರೆಯಲಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಖಾಸಗಿ ತರಬೇತಿ ಕೇಂದ್ರಗಳಿಗೆ ನಷ್ಟ 


ಸರ್ಕಾರವೇ ತರಬೇತಿ ನೀಡಲು ಪ್ರಾರಂಭಿಸಿದರೆ ಖಾಸಗಿ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆಯಲು ಬರುವವರ ಸಂಖ್ಯೆ ಕುಸಿಯುವ ಸಾಧ್ಯತೆ ಇದೆ. ಪಿಯುಸಿ ವ್ಯಾಸಾಂಗ ಮಾಡುವ ವೇಳೆಯೇ ಕಾಲೇಜುಗಳಲ್ಲಿ ಸಾಮಾನ್ಯ ತರಗತಿಯ ಜೊತೆ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನೀಡಲಾಗುತ್ತದೆ. ದಾಖಲಾತಿ ಮಾಡುವ ಸಂದರ್ಭದಲ್ಲಿ ಖಾಸಗಿ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಿಧಿಸಿ ಟ್ರೇನಿಂಗ್ ನೀಡುತ್ತೇವೆ ಎಂದು ಹೇಳಲಾಗುತ್ತದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ನಷ್ಟವಾಗುತ್ತದೆ. ಹಾಗಾಗಿಯೇ ಈ ಸರ್ಕಾರಿ ಯೋಜನನೆಯನ್ನು ಜಾರಿಗೆ ತರಲು ಯೋಚಿಸಲಾಗುತ್ತಿದೆ.


ಇದನ್ನೂ ಓದಿ: ಕಲಿಕೆಯ ಮೇಲೆ ಧನಾತ್ಮಕ ಪರಿಣಾಮ ಬೀರುತ್ತವೆ ಈ 7 ಅಂಶಗಳು


ಕಾನೂನು ಬಾಹಿರ ತರಗತಿ


ದಾಖಲಾತಿ ವೇಳೆಯೇ ಕೋಚಿಂಗ್ ಕ್ಲಾಸ್ ನೆಪದಲ್ಲಿ ಲಕ್ಷಾಂತರ ರೂಪಾಯಿ ವಸೂಲಿ ಮಾಡುವ ಖಾಸಗಿ ಶಾಲೆಗಳಿಗೆ ಈಗ ನಷ್ಟವಾಗಬಹುದು. ಶಾಲಾ ಕಾಲೇಜುಗಳಲ್ಲಿ ಕೋಚಿಂಗ್ ಕ್ಲಾಸ್ ನಡೆಸಬಾರದು ಅನ್ನೊ ಆದೇಶವಿದ್ದರೂ ಎಲ್ಲೆಡೆಯೂ ಕೋಚಿಂಗ್​ ಕ್ಲಾಸ್​ ನಡೆಯುತ್ತಿದೆ. ಇದು ಕಾನೂನು ಬಾಹಿರ ಕೂಡ. ಸದ್ಯ ಸರ್ಕಾರದ ಹಂತದಲ್ಲಿ ಈ ಉಚಿತ ತರಬೇತಿ ಆರಂಭವಾದರೆ ಖಾಸಗಿ ಕೋಚಿಂಗ್ ಕ್ಲಾಸ್​ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕುಸಿಯುವ ಭೀತಿ ಇದೆ.


ವಿಶೇಷ ಕಾರ್ಯಕ್ರಮ ಆಯೋಜನೆ


ಇನ್ನೂ ಶಿಕ್ಷಣ ಕಲ್ಯಾಣ ನಿಧಿಗೆ ವಾಪಸ್‌ ಬಂದಿರುವ ತೆರಿಗೆ ರೂಪದ ಹಣವೂ ಸೇರಿ ಒಟ್ಟು 31 ಕೋಟಿ ರೂ. ವೆಚ್ಚದಲ್ಲಿ ಇಲಾಖೆಯು ಸರ್ಕಾರಿ ಶಾಲಾ - ಕಾಲೇಜು ಮಕ್ಕಳಿಗೆ ಶಿಕ್ಷಣ, ಆರೋಗ್ಯ, ಕ್ರೀಡೆ ಮತ್ತಿತರ ವಿಭಾಗದಲ್ಲಿ ಕೆಲ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

First published: