Karnataka PUC 2nd Results 2023: ಕರ್ನಾಟಕ ಮಂಡಳಿಯು (Karnataka Board) ಇಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು (Second PUC Result) ಘೋಷಿಸಿದೆ. ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ತಮ್ಮ ರಿಸಲ್ಟ್ನ್ನು ನೋಡಬಹುದು. ಮಂಡಳಿಯು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ 12 ನೇ ತರಗತಿಯ ಫಲಿತಾಂಶವನ್ನು(Result) ಪ್ರಕಟಿಸಲಾಯಿತು.
ಈ ವರ್ಷ ಒಟ್ಟಾರೆ ಶೇ. 74.67ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು (Dakshina Kannada District) ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಯಾದಗಿರಿ (Yadagiri) ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಪರಿಶೀಲಿಸಬಹುದು.
ಈ ವರ್ಷ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕರ್ನಾಟಕದಲ್ಲಿ 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಮಾರ್ಚ್ 9 ರಿಂದ ಮಾರ್ಚ್ 29, 2023 ರವರೆಗೆ ನಡೆಸಲಾಗಿತ್ತು. ವರದಿಗಳ ಪ್ರಕಾರ, ವಿಜ್ಞಾನ ವಿಭಾಗದಲ್ಲಿ ಒಟ್ಟು 2,44,129 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,269 ಮತ್ತು ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯನ್ನು ಎಲ್ಲಾ ದಿನ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಒಂದೇ ಪಾಳಿಯಲ್ಲಿ ನಡೆಸಲಾಯಿತು.
ಫಲಿತಾಂಶ ನೋಡುವುದು ಹೇಗೆ?
Karnataka PUC 2nd Results 2023: ರಿಸಲ್ಟ್ ಚೆಕ್ ಮಾಡಲು ಹೀಗೆ ಮಾಡಿ.
ಮೊದಲಿಗೆ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ.
ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2023 ಲಿಂಕ್ ಅನ್ನು ಕ್ಲಿಕ್ ಮಾಡಿ.
ಅಗತ್ಯವಿರುವ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು ಕ್ಲಿಕ್ ಮಾಡಿ.
ಮುಂದಿನ ಅಗತ್ಯಕ್ಕಾಗಿ ಪುಟವನ್ನು ಡೌನ್‌ಲೋಡ್ ಮಾಡಿ ಮತ್ತು ಅದರ ಹಾರ್ಡ್ ಪ್ರತಿಯನ್ನು ಇಟ್ಟುಕೊಳ್ಳಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ