ಕನ್ನಡದಲ್ಲಿ ಯಂಗ್ ರೆಬೆಲ್ ಸ್ಟಾರ್ (Rebel Star) ಎಂದು ಪ್ರಸಿದ್ದರಾಗಿರುವ ಅಭಿಷೇಕ್ ಅಂಬರೀಶ್ (Abishek Ambareesh) ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ (Films) ಬ್ಯುಸಿ ಇದ್ದಾರೆ. ಈಗಾಗಲೇ ಅವರು 3 ಸಿನಿಮಾಗಳನ್ನು ಒಪ್ಪಿಕೊಂಡಿದ್ದು, ಒಂದರ ಶೂಟಿಂಗ್ ಆರಂಭವಾಗಿದೆ. ಅಲ್ಲದೇ ಅವರು ಬಿಗ್ ಬಜೆಟ್ ಸಿನಿಮಾವೊಂದನ್ನು ಮಾಡುತ್ತಿದ್ದು, ಅದರ ನಿರ್ಮಾಪಕರ ಬಗ್ಗೆ ಸದ್ಯ ಚರ್ಚೆ ನಡೆಯುತ್ತಿದೆ. ಈ ಸಿನಿಮಾವನ್ನು ಯಾರು ನಿರ್ಮಾಣ ಮಾಡ್ತಾರೆ ಎನ್ನುವ ಬಗ್ಗೆ ಚರ್ಚೆ ಶುರುವಾಗಿತ್ತು. ಆದರೆ ಈ ಬಗ್ಗೆ ನಿರ್ದೇಶಕ ಮಹೇಶ್ ಕುಮಾರ್ ನ್ಯೂಸ್18 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.
ರಾಕ್ಲೈನ್ ವೆಂಕಟೇಶ್ ಹೊಸ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈ ಸಿನಿಮಾವನ್ನು ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಅಂಬರೀಶ್ ಅವರ ಹುಟ್ಟು ಹಬ್ಬದ ದಿನ ಅಭಿಷೇಕ್ ಅವರಿಗಾಗಿ ಒಂದು ಸಿನಿಮಾ ಮಾಡುವ ಬಗ್ಗೆ ಹೇಳಿಕೊಂಡಿದ್ದರು. ನಾನು ಸದ್ಯದಲ್ಲಿಯೇ ಅಭಿಷೇಕ್ ಅಂಬರೀಶ್ಗಾಗಿ ಸಿನಿಮಾ ಮಾಡುವುದಾಗಿ ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದ್ದರು. ಅಲ್ಲದೇ, ಸಿನಿಮಾದ ಫಸ್ಟ್ಲುಕ್ ಕೂಡ ಬಿಡುಗಡೆ ಮಾಡಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚು ಮಾಡಿದ್ದರು. ಆದರೆ ಈ ಸಿನಿಮಾವನ್ನು ಯಾರು ನಿರ್ಮಾಣ ಮಾಡಲಿದ್ದಾರೆ ಎನ್ನುವ ಬಗ್ಗೆ ಎಲ್ಲೂ ಸಹ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ. ಆದರೆ ಈಗ ಈ ಸಿನಿಮಾದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಎನ್ನಲಾಗುತ್ತಿತ್ತು. ಆದರೆ ಈಗ ಈ ಸುದ್ದಿ ಸುಳ್ಳು ಎಂಬುದು ತಿಳಿದುಬಂದಿದೆ.
ಇದೊಂದು ಬಿಗ್ ಬಜೆಟ್ ಸಿನಿಮಾವಾಗಿದ್ದು, ಇನ್ನು ಈ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದೇ ಆಗಸ್ಟ್ 27ರಂದು ಸುಮಲತಾ ಅಂಬರೀಶ್ ಅವರ ಜನ್ಮದಿನ, ಆ ದಿನವೇ ಈ ಹೊಸ ಸಿನಿಮಾದ ಟೈಟಲ್ ಅನ್ನು ಹಾಗೂ ಈ ಸಿನಿಮಾ ನಿರ್ಮಾಪಕರ ಬಗ್ಗೆ ಸಹ ಬಹಿರಂಗಪಡಿಸಲಾಗುತ್ತದೆ.
ಇದನ್ನೂ ಓದಿ: ಲೈಗರ್ ಸಿನಿಮಾದ ಟ್ರೈಲರ್ ರಿಲೀಸ್, ಮಾಸ್ ಲುಕ್ನಲ್ಲಿ ವಿಜಯ್ ದೇವರಕೊಂಡ
ಅಮರ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, ಅಭಿಮಾನಿಗಳ ಮನಸ್ಸಲ್ಲಿ ಯಂಗ್ ರೆಬೆಲ್ ಸ್ಟಾರ್ ಎನಿಸಿಕೊಂಡವರು ಅಭಿಷೇಕ್ ಅಂಬರೀಷ್. ಮೊದಲ ಚಿತ್ರದ ನಂತರ ಸುಕ್ಕಾ ಸೂರಿ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್‘ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಸಾಲಾಗಿ 2 ಚಿತ್ರವನ್ನು ಒಪ್ಪಿಕೊಂಡಿರುವ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದರು. ಅದರಲ್ಲಿ ಒಂದು ಸಿನಿಮಾವನ್ನು ಮಹೇಶ್ ಅವರು ನಿರ್ದೇಶಿಸುತ್ತಿದ್ದಾರೆ.
ಅಕ್ಟೋಬರ್ 3ರಿಂದ ಶೂಟಿಂಗ್
ಅಯೋಗ್ಯ' ಹಾಗೂ 'ಮದಗಜ' ಖ್ಯಾತಿಯ ಮಹೇಶ್ ಕುಮಾರ್ ಈ ಸಿನಿಮಾವನ್ನು ಅಕ್ಟೋಬರ್ನಿಂದ ಆರಂಭಿಸಲು ನಿರ್ಧರಿಸಿದ್ದು, ಅದರ ಫಸ್ಟ್ ಲುಕ್ ಸಹ ನಿರೀಕ್ಷೆ ಮೂಡಿಸಿದೆ. ಅಕ್ಟೋಬರ್ 3 ಕ್ಕೆ ಮುಹೂರ್ತವನ್ನು ಇಟ್ಟುಕೊಳ್ಳಲಾಗಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದ್ದು, ಆ ದಿನ ಅಭಿಷೇಕ್ ಅಂಬರೀಷ್ ಅವರ ಜನ್ಮದಿನವಾಗಿದ್ದು, ಹಾಗಾಗಿ ಈ ದಿನವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ಇನ್ನು ಈ ಚಿತ್ರದ ಫಸ್ಟ್ ಲುಕ್ನಲ್ಲಿ ರಕ್ತ ಮತ್ತು ಕೆಸರಿನಿಂದ ಕೂಡಿರುವ ಅರ್ಧ ಮುಖದಲ್ಲಿ ಯಂಗ್ ರೆಬಲ್ ಸ್ಟಾರ್ ಮಿಂಚಿದ್ದಾರೆ. ಇದೊಂದು ಒಂದು ಕಾಲಘಟ್ಟದಲ್ಲಿ ನಡೆಯುವ ಕಥೆ ಇದಾಗಿದೆ ಎಂದು ನಿರ್ದೇಶಕ ಮಹೇಶ್ ಕುಮಾರ್ ಈಗಾಗಲೇ ಹೇಳಿದ್ದಾರೆ.
ಇದನ್ನೂ ಓದಿ: ಜೇಮ್ಸ್ ನಿರ್ದೇಶಕನ ಮುಂದಿನ ಸಿನಿಮಾ ಯಾವ್ದು? ಈ ಹೀರೋಗೆ ಡೈರೆಕ್ಷನ್ ಮಾಡ್ತಾರಂತೆ ಚೇತನ್!
ತುಂಬಾ ದೊಡ್ಡ ಬಜೆಟ್ ಸಿನಿಮಾ ಇದಾಗಿದ್ದು, ಸುಮಾರು 30 ರಿಂದ 35 ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣವಾಗಲಿದೆ. ಅಲ್ಲದೇ ಚಿತ್ರದ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಸೀನ್ ಗಳು ಇರಲಿವೆ ಎಂದು ಹೇಳಿದ್ದಾರೆ. ಅಲ್ಲದೇ 135 ದಿನ ಶೂಟಿಂಗ್ ಪ್ಲ್ಯಾನ್ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ