ಪ್ರವಾಹ ಸಂತ್ರಸ್ಥರ ನೆರವಿಗೆ ನಿಲ್ಲುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ನಟ ದರ್ಶನ್​​​

ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿರುತ್ತದೆ

G Hareeshkumar | news18
Updated:August 7, 2019, 10:48 PM IST
ಪ್ರವಾಹ ಸಂತ್ರಸ್ಥರ ನೆರವಿಗೆ ನಿಲ್ಲುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ನಟ ದರ್ಶನ್​​​
ದರ್ಶನ್​
  • News18
  • Last Updated: August 7, 2019, 10:48 PM IST
  • Share this:
ಬೆಂಗಳೂರು (ಆ.07) :  ಉತ್ತರ ಕರ್ನಾಟಕ ಹಾಗೂ ಮಲೆನಾಡಿನಲ್ಲಿ ಭೀಕರ ಪ್ರವಾಹ ಹಿನ್ನೆಲೆಯಲ್ಲಿ ನಟ ದರ್ಶನ್‌ ಮನವಿ ಮಿಡಿದಿದ್ದು, ಪ್ರವಾಹದ ಹೊಡೆತಕ್ಕೆ ಸಿಕ್ಕವರಿಗೆ ಆಸರೆಯಾಗಿ ನಿಲ್ಲುವುದು ಎಲ್ಲರ ಕರ್ತವ್ಯ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ನಟ ದರ್ಶನ, ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿರುತ್ತದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಇವರಿಗೆ ಮಾಡಬೇಕಾಗಿ ವಿನಂತಿಸುತ್ತೇನೆ ಎಂದು ಟ್ವೀಟ್​​​ ಮಾಡಿ ಮನವಿಯನ್ನು ಮಾಡಿದ್ದಾರೆ.


ಧಾರವಾಡ, ಹುಬ್ಬಳ್ಳಿ, ಉತ್ತರ ಕನ್ನಡ, ಬೆಳಗಾವಿ, ಗದಗ ಚಿಕ್ಕೋಡಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಲ ಗ್ರಾಮಗಳು ನೀರಿನಿಂದ ಸಂಪೂರ್ಣ ಜಲಾವೃತವಾಗಿವೆ. ಈ ನಿಟ್ಟಿನಲ್ಲಿ ಅಗತ್ಯವಿರುವ ನೆರವನ್ನು ನೀಡುವಂತೆ ನಟ ದರ್ಶನ್‌ ಟ್ವಿಟರ್‌ ಮೂಲಕ ಮನವಿ ಮಾಡಿದ್ದಾರೆ.ಇದೇ ರೀತಿ ನಟ ಶರಣ್​​​ ಕೂಡ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿಯಲ್ಲಿ ಮಳೆಯಿಂದ ಆದ ಪ್ರವಾಹಕ್ಕೆ ನಾವೆಲ್ಲರು ಕೈಜೋಡಿಸೋಣ ಎಂದು ಟ್ವೀಟ್​​​ ಮಾಡಿದ್ದಾರೆ.

ರಾಜ್ಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಬಹುತೇಕ ಜಿಲ್ಲೆಗಳು ನಡುಗಡ್ಡೆಗಳಾಗಿವೆ. ನದಿಗಳು ಉಕ್ಕಿಹರಿಯುತ್ತಿದ್ದು, ಸೇತುವೆಗಳು ಮುಳುಗಿ ಹೋಗಿವೆ. ಮುಂದಿನ ಒಂದು ವಾರದವರೆಗೂ ಭಾರೀ ಮಳೆಯಾಗಲಿದ್ದು, ಜನರಲ್ಲಿ ಪ್ರವಾಹ ಭೀತಿ ಆವರಿಸಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅನಾಹುತ ಸಂಭವಿಸಿದಂತೆ ರಾಜ್ಯ ಸರ್ಕಾರವೂ ಮುಂಬೈ ಕರ್ನಾಟಕ, ಕರಾವಳಿ, ಹೈಕ ಭಾಗದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅನೇಕ ಕಡೆ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಪ್ರವಾಹಕ್ಕೆ ಸಿಲುಕಿರುವ ಗ್ರಾಮಗಳ ನಡುವಿನ ಸಂಪರ್ಕ ಕಳೆದುಕೊಂಡಿದೆ. ಹೀಗಾಗಿ ಜನರಲ್ಲಿ ಭಾರೀ ಆಂತಕ ಮೂಡಿದೆ. ನವಿಲುತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ಅಂದಾಜು 45,000 ಕ್ಯೂಸೆಕ್ಸ್  ನೀರು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಲಪ್ರಭಾ ನದಿ ತೀರದಲ್ಲಿ ರಾಜ್ಯ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ನದಿ ತೀರದ ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಬಾಗಲಕೋಟೆ ಜಿಲ್ಲಾಡಳಿತ ಆದೇಶಿಸಿದೆ.

ಇದನ್ನೂ ಓದಿ : ಮಲೆನಾಡಲ್ಲೂ ವರುಣನ ರುದ್ರನರ್ತನ ; ಉ.ಕದಲ್ಲಿ ಮುಂದುವರೆದ ಭಾರೀ ನೆರೆ

ಇತ್ತ ಘಟಪ್ರಭಾ ನದಿಯಿಂದ ಉಂಟಾದ ಪ್ರವಾಹದಿಂದಾಗಿ ಮಾರಾಪೂರ ಗ್ರಾಮದ 20 ಮನೆಗಳು ಮುಳುಗಡೆಯಾಗಿವೆ. ನೆರೆ ಪೀಡಿತರಿಗೆ ಊಟದ ಕೇಂದ್ರ ಆರಂಭಿಸಲಾಗಿದ್ದು, ಸುರಕ್ಷಿತ ಸ್ಥಳಗಳಿಗೆ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲೂ ಕಳೆದ ನಾಲ್ಕು ದಿನಗಳಿಂದ  ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ಜನರು ಹೊರಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ವರದಾ, ತುಂಗಭದ್ರಾ ದರ್ಮಾ ನದಿಗಳು‌ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 
First published: August 7, 2019, 10:34 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading