ಕನ್ನಡದ ಹಾಸ್ಯ ನಟ ಮಂದೀಪ್ ರಾಯ್ಗೆ (Mandeep Roy) ಹೃದಯಾಘಾತವಾಗಿದೆ. ಹಿರಿಯ ನಟ ಸದ್ಯ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದಾರೆ. ತಂದೆ ಆರೋಗ್ಯದ ಬಗ್ಗೆ ನ್ಯೂಸ್ 18ಗೆ ಮಾಹಿತಿ ನೀಡಿದ ಮಂದೀಪ್ ರಾಯ್ ಪುತ್ರಿ ಅವರು, ನಮ್ಮ ತಂದೆಗೆ ಹೃದಯಾಘಾತವಾಗಿದ್ದು ಐಸಿಯುನಲ್ಲಿ (ICU) ಚಿಕಿತ್ಸೆ ಕೊಡಲಾಗುತ್ತಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ. ಅವರಿಗೆ ಹಾರ್ಟ್ ಸರ್ಜರಿ ಮಾಡಬೇಕೆ ಅಥವಾ ಸ್ಟಂಟ್ ಹಾಕಿಸಬೇಕಾ ಅಂತ ನಮ್ಮ ಕುಟುಂಬದವರು ವೈದ್ಯರ ಜೊತೆ ಚರ್ಚೆ ಮಾಡುತ್ತೇವೆ. ಅವರಿಗೆ ವಯಸ್ಸಾಗಿರೋ ಕಾರಣ ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸುತ್ತೇವೆ ಎಂದಿದ್ದಾರೆ.
ಇವರು ರೇ, ಆಪ್ತ ರಕ್ಷಕ, ಅಮೃತಧಾರೆ, ಕುರಿಗಳು ಸಾರ್ ಕುರಿಗಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹೃದಯಾಘಾತದಿಂದ ನಟ ಆಸ್ಪತ್ರೆಗೆ ದಾಖಲಾಗಿದ್ದು ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ನಟನ ಆರೋಗ್ಯ ವಿಚಾರಿಸಿದ್ದಾರೆ. ಸುದ್ದಿ ಚಿತ್ರೋದ್ಯಮ ಮಂದಿ ಅವರು ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ. ಇವರು ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟು ಮಿಂಚಿನ ಓಡ, ಬೆಂಕಿಯ ಬಲೆ, ಏಳು ಸುತ್ತಿನ ಕೋಟೆ, ಆಸಕಸ್ಮಿಕ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ