ಹೃದಯಾಘಾತದಿಂದ ಅಸ್ವಸ್ಥರಾಗಿರುವ ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನಗೆ ಚಿಕಿತ್ಸೆ ನೀಡಲಾಗ್ತಿದೆ. ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಆಸ್ಪತ್ರೆಗೆ ತೆರಳಿ ನಂದಮೂರಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ನಾರಾಯಣ ಹೃದಯಾಲಯ ವೈದ್ಯರು ಮಾಹಿತಿ ನೀಡಿದ್ದಾರೆ.
ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭೇಟಿ
ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದು ಮಾತಾಡಿದ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಪಾದಯಾತ್ರೆ ವೇಳೆ ತಾರಕರತ್ನನಿಗೆ ಹೃದಯಾಘಾತವಾಗಿತ್ತು. ಕುಂಪಂನಲ್ಲಿ ಚಿಕಿತ್ಸೆ ಪಡೆದು ಬಳಿಕ ಉತ್ತಮ ಬೆಂಗಳೂರಿಗೆ ಕರೆ ತರಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ
ವೈದ್ಯರು ತಾರಕ್ ಅವರನ್ನು ಐಸಿಯುನಲ್ಲಿ ವೀಕ್ಷಣೆಯಲ್ಲಿ ಇರಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ನಾನು ವೈದ್ಯರೊಂದಿಗೆ ಮಾತನಾಡಿದ್ದೇನೆ. ತಾರಕರತ್ನ ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಹೆಲ್ ಬುಲೆಟ್ ಬಿಡುಗಡೆ
ನಟ ತಾರಕರತ್ನ ಅವರ ಆರೋಗ್ಯ ಸ್ಥಿತಿ ಗಂಭೀರ
ತಾರಕರತ್ನ ಅವರು ತೀವ್ರ ಹೃದಯಘಾತಕ್ಕೆ ಒಳಗಾಗಿದ್ದು, ಹೃದಯದ ರಕ್ತ ನಾಳಗಳು ಬ್ಲಾಕ್ ಆಗಿವೆ. ಇದ್ದರಿಂದ ತಾರಕರತ್ನ ಅವರ ಆರೋಗ್ಯ ಸ್ಥಿತಿ ಕೊಂಚ ಗಂಭೀರವಾಗಿದೆ. ಬ್ಲಾಕ್ ಆಗಿರುವ ರಕ್ತನಾಳಗಳನ್ನು ಸರಿಪಡಿಸಲು ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದ್ದಾರೆ. ಇಂಟ್ರಾ ಅಯೋರ್ಟಿಕ್ ಪಂಪ್ (ಎಬಿಪಿ) ಹಾಗೂ ವ್ಯಾಸೋಆ್ಯಕ್ಟಿವ್ ನೆರವಿನಿಂದ ಚಿಕಿತ್ಸೆ ನೀಡಲಾಗಿದೆ.
ರಕ್ತನಾಳಗಳಿಗೆ ಸ್ಟಂಟ್ ಅಳವಡಿಕೆ
ಆ್ಯಂಜಿಯೋಪ್ಲಾಸ್ಟಿ ಮೂಲಕ ಹಾನಿಯಾದ ರಕ್ತನಾಳಗಳಿಗೆ ಸ್ಟಂಟ್ ಹಾಕಲಾಗಿದೆ. ಆದ್ರೆ, ಸ್ಟಂಟ್ ಅಳವಡಿಕೆ ನಡುವೆಯೂ ರಸ್ತಸ್ರಾವ ನಿಲ್ಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ನುರಿತ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ ಎಂದು ನಾರಾಯಣ ಹೃದಯಾಲಯ ಆಸ್ಪತ್ರೆ ಹೆಲ್ತ್ ಬುಲೆಟ್ನಲ್ಲಿ ತಿಳಿಸಿದೆ
ಪಾದಯಾತ್ರೆಯ ವೇಳೆ ಕುಸಿದು ಬಿದ್ದ ತಾರಕರತ್ನ
ಆರ್‌ಆರ್‌ಆರ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಅವರ ಸೋದರ ಸಂಬಂಧಿಯೂ ಆಗಿರುವ ನಟ ನಂದಮೂರಿ ತಾರಕ ರತ್ನ ಅವರು ಶುಕ್ರವಾರ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ರಾಜಕೀಯ ಪಾದಯಾತ್ರೆಯ ವೇಳೆ ಕುಸಿದುಬಿದ್ದಿದ್ದರು. ಅವರಿಗೆ ಹೃದಯಾಘಾತವಾಗಿದ್ದು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.
ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಅವರು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರಿಗೆ ಸಾಧ್ಯವಾದಷ್ಟು ಕಾಳಜಿ ವಹಿಸಿದ್ದಾರೆ. ಚಿಂತೆ ಮಾಡಲು ಏನೂ ಇಲ್ಲ. ವೈದ್ಯರು ಕೂಡ ಬೆಂಗಳೂರಿಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ ಎಂದಿದ್ದರು.
39 ವರ್ಷ ವಯಸ್ಸಿನ ನಟ 2002 ರ ತೆಲುಗು ಸಿನಿಮಾ ಒಕಾಟೊ ನಂಬರ್ ಕುರ್ರಾಡು ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಅವರು ತಾರಕ್, ಭದ್ರಿ ರಾಮುಡು, ಮನಮಂತ ಮತ್ತು ರಾಜಾ ಚೆಯ್ಯಿ ವೇಷದಂತಹ ಸಿನಿಮಾಗಳ ಮೂಲಕ ಫೇಮಸ್ ಆದರು. ಅವರು ಇತ್ತೀಚೆಗೆ ಡಿಸ್ನಿ+ ಹಾಟ್‌ಸ್ಟಾರ್‌ನ ತೆಲುಗು ವೆಬ್ ಸಿರೀಸ್ 9 ಅವರ್ಸ್‌ನಲ್ಲಿ ಕಾಣಿಸಿಕೊಂಡರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ