ಹೃದಯಾಘಾತದಿಂದ ಅಸ್ವಸ್ಥಗೊಂಡಿದ್ದ ತೆಲುಗು ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನ (Nandamuri Taraka Ratna) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆತರಲಾಗಿದೆ. ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಇದೀಗ ನಂದಮೂರಿ ತಾರಕರತ್ನ ಅವರ ಆರೋಗ್ಯದ ಬಗ್ಗೆ ನಾರಾಯಣ ಹೃದಯಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ನಂದಮೂರಿ ತಾರಕ ರತ್ನ ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ಹೆಲ್ ಬುಲೆಟ್ನಲ್ಲಿ ತಿಳಿಸಿದೆ.
ಹೆಲ್ ಬುಲೆಟ್ ಬಿಡುಗಡೆ
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರು ತಾರಕರತ್ನ ಅವರ ಆರೋಗ್ಯ ಸ್ಥಿತಿ ಸದ್ಯಕ್ಕೆ ಕೊಂಚ ಕ್ರಿಟಿಕಲ್ ಆಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾರಾಯಣ ಹೃದಯಾಲಯದ ವೈದ್ಯರು ಹಲವು ಟೆಸ್ಟ್ ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ನಾರಾಯಣ ಹೃದಯಾಲಯ ಆಸ್ಪತ್ರೆಯ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನಲ್ಲಿ ವೈದ್ಯರು ತಿಳಿಸಿದ್ದಾರೆ.
#TarakaRatna health bulletin.#TarakaRatnaHealthUpdate #NandamuriTarakaRatna pic.twitter.com/jDrbcBJOks
— Venkatesh V (@Venkatesh_ET) January 28, 2023
ನಟ ತಾರಕರತ್ನ ಅವರ ಆರೋಗ್ಯ ಸ್ಥಿತಿ ಗಂಭೀರ
ತಾರಕರತ್ನ ಅವರು ತೀವ್ರ ಹೃದಯಘಾತಕ್ಕೆ ಒಳಗಾಗಿದ್ದು, ಹೃದಯದ ರಕ್ತ ನಾಳಗಳು ಬ್ಲಾಕ್ ಆಗಿವೆ. ಇದ್ದರಿಂದ ತಾರಕರತ್ನ ಅವರ ಆರೋಗ್ಯ ಸ್ಥಿತಿ ಕೊಂಚ ಗಂಭೀರವಾಗಿದೆ. ಬ್ಲಾಕ್ ಆಗಿರುವ ರಕ್ತನಾಳಗಳನ್ನು ಸರಿಪಡಿಸಲು ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದ್ದಾರೆ. ಇಂಟ್ರಾ ಅಯೋರ್ಟಿಕ್ ಪಂಪ್ (ಎಬಿಪಿ) ಹಾಗೂ ವ್ಯಾಸೋಆ್ಯಕ್ಟಿವ್ ನೆರವಿನಿಂದ ಚಿಕಿತ್ಸೆ ನೀಡಲಾಗಿದೆ.
ರಕ್ತನಾಳಗಳಿಗೆ ಸ್ಟಂಟ್ ಅಳವಡಿಕೆ
ಆ್ಯಂಜಿಯೋಪ್ಲಾಸ್ಟಿ ಮೂಲಕ ಹಾನಿಯಾದ ರಕ್ತನಾಳಗಳಿಗೆ ಸ್ಟಂಟ್ ಹಾಕಲಾಗಿದೆ. ಆದ್ರೆ, ಸ್ಟಂಟ್ ಅಳವಡಿಕೆ ನಡುವೆಯೂ ರಸ್ತಸ್ರಾವ ನಿಲ್ಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ನುರಿತ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ ಎಂದು ನಾರಾಯಣ ಹೃದಯಾಲಯ ಆಸ್ಪತ್ರೆ ಹೆಲ್ತ್ ಬುಲೆಟ್ನಲ್ಲಿ ತಿಳಿಸಿದೆ
ಪಾದಯಾತ್ರೆಯ ವೇಳೆ ಕುಸಿದು ಬಿದ್ದ ತಾರಕರತ್ನ
ಆರ್‌ಆರ್‌ಆರ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಅವರ ಸೋದರ ಸಂಬಂಧಿಯೂ ಆಗಿರುವ ನಟ ನಂದಮೂರಿ ತಾರಕ ರತ್ನ ಅವರು ಶುಕ್ರವಾರ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ರಾಜಕೀಯ ಪಾದಯಾತ್ರೆಯ ವೇಳೆ ಕುಸಿದುಬಿದ್ದಿದ್ದರು. ಅವರಿಗೆ ಹೃದಯಾಘಾತವಾಗಿದ್ದು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.
ಇದನ್ನೂ ಓದಿ: Nandamuri Taraka Ratna: ನಂದಮೂರಿ ತಾರಕ ರತ್ನಗೆ ಹೃದಯಾಘಾತ! ಪಾದಯಾತ್ರೆ ವೇಳೆ ಕುಸಿದು ಬಿದ್ದ ನಟ ತೀವ್ರ ಅಸ್ವಸ್ಥ
ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಅವರು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರಿಗೆ ಸಾಧ್ಯವಾದಷ್ಟು ಕಾಳಜಿ ವಹಿಸಿದ್ದಾರೆ. ಚಿಂತೆ ಮಾಡಲು ಏನೂ ಇಲ್ಲ. ವೈದ್ಯರು ಕೂಡ ಬೆಂಗಳೂರಿಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ ಎಂದಿದ್ದರು.
ತಾರಕರತ್ನ ಅವರು ಪ್ರಸ್ತುತ ಐಸಿಯುನಲ್ಲಿದ್ದಾರೆ ಎಂದು ವರದಿ ತಿಳಿಸಿದೆ. ರತ್ನ ಅವರು ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ತಾರಕ ರತ್ನ ಅವರಿಗೆ ಆಂಜಿಯೋಗ್ರಾಮ್ ಮಾಡಿ ಹೃದಯಕ್ಕೆ ಸ್ಟೆಂಟ್ ಹಾಕಲಾಗಿದೆ ಎಂದು ವರದಿಯಾಗಿದೆ. ಅಗತ್ಯವಿದ್ದರೆ ಚಾಪರ್ ಮೂಲಕ ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎನ್ನಲಾಗಿತ್ತು.
39 ವರ್ಷ ವಯಸ್ಸಿನ ನಟ 2002 ರ ತೆಲುಗು ಸಿನಿಮಾ ಒಕಾಟೊ ನಂಬರ್ ಕುರ್ರಾಡು ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಅವರು ತಾರಕ್, ಭದ್ರಿ ರಾಮುಡು, ಮನಮಂತ ಮತ್ತು ರಾಜಾ ಚೆಯ್ಯಿ ವೇಷದಂತಹ ಸಿನಿಮಾಗಳ ಮೂಲಕ ಫೇಮಸ್ ಆದರು. ಅವರು ಇತ್ತೀಚೆಗೆ ಡಿಸ್ನಿ+ ಹಾಟ್‌ಸ್ಟಾರ್‌ನ ತೆಲುಗು ವೆಬ್ ಸಿರೀಸ್ 9 ಅವರ್ಸ್‌ನಲ್ಲಿ ಕಾಣಿಸಿಕೊಂಡರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ