HOME » NEWS » Entertainment » ACTOR SACNCHARI VIJAY HEALTH CONDITION STILL SERIOUS HERE IS UPDATE ABOUT HIS HEALTH AE

Sanchari Vijay: ನಟ ಸಂಚಾರಿ ವಿಜಯ್ ಸ್ಥಿತಿ ಮತ್ತಷ್ಟು ಗಂಭೀರ: ಕೆಲವೇ ನಿಮಿಷಗಳಲ್ಲಿ ಹೆಲ್ತ್​ ಬುಲೆಟಿನ್​ ಬಿಡುಗಡೆ..!

Sanchari Vijay Health Update: ನಿನ್ನೆ ಶಸ್ತ್ರಚಿಕಿತ್ಸೆ ಮಾಡಿದ ನಂತರ ವಿಜಯ್​ ಅವರ ಸ್ಥಿತಿ ಸ್ಥಿರವಾಗಿತ್ತು ಎಂದು ಹೇಳಲಾಗಿತ್ತು ಆದರೆ ಇಂದು ಬೆಳಿಗ್ಗೆ 5 ಗಂಟೆಗೆ ಬ್ರೈನ್​ ಸ್ಟ್ರೋಕ್​ ಆಗಿದ್ದು, ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

Anitha E | news18-kannada
Updated:June 14, 2021, 10:53 AM IST
Sanchari Vijay: ನಟ ಸಂಚಾರಿ ವಿಜಯ್ ಸ್ಥಿತಿ ಮತ್ತಷ್ಟು ಗಂಭೀರ: ಕೆಲವೇ ನಿಮಿಷಗಳಲ್ಲಿ ಹೆಲ್ತ್​ ಬುಲೆಟಿನ್​ ಬಿಡುಗಡೆ..!
ನಟ ಸಂಚಾರಿ ವಿಜಯ್​
  • Share this:
ನಟ ಸಂಚಾರಿ ವಿಜಯ್ ಅವರು ಅಪಘಾತದಲ್ಲಿ ಗಾಯಗೊಂಡಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಮೊನ್ನೆ ರಾತ್ರಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸಂಚಾರಿ ವಿಜಯ್​ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸಡೆ ಪಡೆಯುತ್ತಿದ್ದಾರೆ. ಅವರ ಮೆದುಳಿಗೆ ಹಾಗೂ ಬಲ ತೊಡೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದು, ಅವರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ. ಇನ್ನು ನಿನ್ನೆಯೇ ಅವರಿಗೆ ಶಸಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಸದ್ಯಕ್ಕೆ ವೆಂಟಿಲೇಟರ್ ಸಹಾಯದಲ್ಲಿದ್ದಾರೆ ವಿಜಯ್​. ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, 36 ತಾಸು ಕಳೆದರೂ ಚೇತರಿಸಿಕೊಂಡಿಲ್ಲವಂತೆ. ಹೃದಯಬಡಿತದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಹಾಗೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರಂತೆ ನಟ ಸಂಚಾರಿ ವಿಜಯ್. 

ನಿನ್ನೆ ಶಸ್ತ್ರಚಿಕಿತ್ಸೆ ಮಾಡಿದ ನಂತರ ವಿಜಯ್​ ಅವರ ಸ್ಥಿತಿ ಸ್ಥಿರವಾಗಿತ್ತು ಎಂದು ಹೇಳಲಾಗಿತ್ತು ಆದರೆ ಇಂದು ಬೆಳಿಗ್ಗೆ 5 ಗಂಟೆಗೆ ಬ್ರೈನ್​ ಸ್ಟ್ರೋಕ್​ ಆಗಿದ್ದು, ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಮೆದುಳಿಗೆ ಸರಬರಾಜಾಗುತ್ತಿರುವ ರಕ್ತ ಸಂಚಾರದಲ್ಲಿ ಅಡಚಣೆಯಿಂದಾಗಿ ಪಾರ್ಶ್ವವಾಯು ಉಂಟಾಗಿ ಮೆದುಳಿನ ಚಟುವಟಿಕೆಯನ್ನೇ ಕುಂಠಿತಗೊಳಿಸುತ್ತದೆ.

Sanchari Vijay Health: National Award Winner Actor Sanchari Vijay Admitted to Bengaluru Hospital ICU after Road Accident.
ಸಂಚಾರಿ ವಿಜಯ್


ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕೋಮದಲ್ಲಿರೋ ಸಂಚಾರಿ ವಿಜಯ್ ಅವರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ. ಬೈಕ್ ಓಡಿಸುತ್ತಿದ್ದ ನವೀನ್ ಅವರ ಸ್ಥಿತಿಯೂ ಗಂಭೀರವಾಗಿದೆಯಂತೆ. ಸದ್ಯ ಇಬ್ಬರಿಗೂ ಚಿಕಿತ್ಸೆ ಮುಂದುವರೆಯುತ್ತಿದೆ. ಇಂದು ಬೆಳಿಗ್ಗೆ 11 ಘಂಟೆಗೆ ಮತ್ತೊಂದು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಲಿರುವ ಆಸ್ಪತ್ರೆಯ ವೈದ್ಯರು, ಸುದ್ದಿಗೋಷ್ಠಿ ಸಹ ಮಾಡಲಿದ್ದಾರೆ. ನ್ಯೂರೋ ಸರ್ಜನ್ ಡಾ. ಅರುಣ್ ನಾಯಕ್ ಸುದ್ದಿಗೋಷ್ಠಿಯಲ್ಲಿ ವಿಜಯ್​ ಅವರ ಆರೋಗ್ಯ ಸ್ಥಿತಿ ಕುರಿತಾಗಿ ಮಾಹಿತಿ ನೀಡಲಿದ್ದಾರೆ.

ಇದನ್ನೂ ಓದಿ: Sushanth Singh: ಸುಶಾಂತ್ ಸಿಂಗ್​ ರಜಪೂತ್​ ಮೊದಲ ವರ್ಷದ ಪುಣ್ಯ ಸ್ಮರಣೆ: ನಟನನ್ನು ಸ್ಮರಿಸಿದ ಅಭಿಮಾನಿಗಳು-ಸೆಲೆಬ್ರಿಟಿಗಳು

ಗೆಳೆಯ ನವೀನ್ ಜೊತೆ ಸಂಚಾರಿ ವಿಜಯ್ ಶನಿವಾರ ರಾತ್ರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಜೆಪಿ ನಗರ 7ನೇ ಹಂತದಲ್ಲಿ ಅಪಘಾತ ಸಂಭವಿಸಿದೆ. ಗೆಳೆಯ ನವೀನ್​ಗೂ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊನ್ನೆ ರಾತ್ರಿ 11 ಗಂಟೆಗೆ ಈ ಅವಘಡ ಸಂಭವಿಸಿದೆ. ಮಳೆ ಜೋರಾಗಿದ್ದ ಕಾರಣ ತಿವೇಗವಾಗಿ ಬೈಕ್​ ಓಡಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಲ್ಲದೆ ಹೆಲ್ಮೆಟ್​ ಹಾಕದ ಕಾರಣಕ್ಕೆ ತಲೆಗೆ ತೀವ್ರವಾಗಿ ಪೆಟ್ಟಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಇನ್ನು ನಿನ್ನೆ ನಿರ್ದೇಶಕ ಮನ್ಸೊರೆ ಅವರು ಸಹ ವಿಜಯ್​ ಅವರ ಆರೋಗ್ಯ ಸ್ಥಿತಿ ಕುರಿತಾಗಿ ಪೋಸ್ಟ್​ ಮಾಡಿದ್ದರು. ಅಲ್ಲದೆ ಅಭಿಮಾನಿಗಳು ಹಾಗೂ ಸಿನಿ ರಂಗದ ಸಹ ಕಲಾವಿದರು ವಿಜಯ್​ ಬೇಗ ಗುಣಮುಖರಾಗಿ ಬರಲೆಂದು ಪ್ರಾರ್ಥಿಸುತ್ತಿದ್ದಾರೆ.

ಸದ್ಯಕ್ಕೆ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕ‌ವಾಗಿದೆ. ನಾನು ಅವನಲ್ಲ ಅವಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಟ ಸಂಚಾರಿ ವಿಜಯ್, ಒಗ್ಗರಣೆ, ಕೃಷ್ಣ ತುಳಸಿ, ವಿಲನ್, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕಿಲ್ಲಿಂಗ್ ವೀರಪ್ಪನ್, ಅಲ್ಲಮ ಮುಂತಾದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್​ವುಡ್ ಹಿರಿಯ ನಿರ್ಮಾಪಕ-ವಿತರಕ ಕೆ ಸಿಎನ್ ಚಂದ್ರು ಇನ್ನಿಲ್ಲ

ಸದ್ಯಕ್ಕೆ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕ‌ವಾಗಿದೆ. ನಾನು ಅವನಲ್ಲ ಅವಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಟ ಸಂಚಾರಿ ವಿಜಯ್, ಒಗ್ಗರಣೆ, ಕೃಷ್ಣ ತುಳಸಿ, ವಿಲನ್, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕಿಲ್ಲಿಂಗ್ ವೀರಪ್ಪನ್, ಅಲ್ಲಮ ಮುಂತಾದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಕನ್ನಡ ಮಾತ್ರವಲ್ಲದೆ ಹಲವು ತಮಿಳು ಸಿನಿಮಾಗಳಲ್ಲೂ ಸಂಚಾರಿ ವಿಜಯ್ ನಟಿಸಿದ್ದಾರೆ. ಮೊದಲ ಅಲೆಯಿಂದಾಗಿ ಆಗಿದ್ದ ಲಾಕ್​ಡೌನ್​ ತೆರೆವುಗೊಂಡ ನಂತರ ರಿಲೀಸ್ ಆಗಿದ್ದ ಸಿನಿಮಾ ಆಕ್ಟ್ 1978 ಚಿತ್ರದಲ್ಲೂ ನಟಿಸಿದ್ದಾರೆ. 2011ರಲ್ಲಿ ತೆರೆಕಂಡ ರಂಗಪ್ಪ ಹೋಗ್ಬಿಟ್ನಾ ಚಿತ್ರದ ಮೂಲಕ ಸಂಚಾರಿ ವಿಜಯ್​ ಸಿನಿರಂಗಕ್ಕೆ ಕಾಲಿಟ್ಟರು.

ನ್ಯೂಸ್18 ಕನ್ನಡ ಕಳಕಳಿ

ಕೊರೋನಾ ಪಾಸಿಟಿವ್ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: Anitha E
First published: June 14, 2021, 10:37 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories