Avatara Purushaನಾಗಿ ಹತ್ತು ಅವತಾರಗಳಲ್ಲಿ ಕಾಣಿಸಿಕೊಂಡಿರುವ ನಟ ಶರಣ್: 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್​

ವೆಬ್​ ಸರಣಿಗೆ ಅಂತ ಮಾಡಿದ್ದ ಸ್ಟೋರಿ ಈಗ ಸಿನಿಮಾ ಆಗಿದೆ. ಅದೇ ಅವತಾರ ಪುರುಷ. ಎರಡು ಭಾಗಗಳಲ್ಲಿ ನಿರ್ಮಾಣವಾಗಿರುವ ಸಿನಿಮಾ ಡಿಸೆಂಬರ್​ನಲ್ಲಿ ಭಾಗ 1 ತೆರೆಗೆ ಬರಲಿದೆ.

ಸಿಂಪಲ್ ಸುನಿ ನಿರ್ದೇಶನದ ಅವತಾರ ಪುರುಷ ಸಿನಿಮಾದಲ್ಲಿ ಶರಣ್ ಹಾಗೂ ಆಶಿಕಾ ರಂಗನಾಥ್​

ಸಿಂಪಲ್ ಸುನಿ ನಿರ್ದೇಶನದ ಅವತಾರ ಪುರುಷ ಸಿನಿಮಾದಲ್ಲಿ ಶರಣ್ ಹಾಗೂ ಆಶಿಕಾ ರಂಗನಾಥ್​

  • Share this:
ಪುಷ್ಕರ್ ಫಿಲಂಸ್ ಲಾಂಛನದಲ್ಲಿ ಪುಷ್ಕರ್ ಮಲ್ಲಿಕಾರ್ಜುನ ನಿರ್ಮಿಸಿರುವ "ಅವತಾರ ಪುರುಷ"  (Avatara Purusha) ಚಿತ್ರ ಇದೇ ಡಿಸೆಂಬರ್ 10 (Releasing In December 10th) ರಂದು ಬಿಡುಗಡೆಯಾಗುತ್ತಿದೆ. ಸ್ಯಾಂಡಲ್​ವುಡ್​ ಅಧ್ಯಕ್ಷ ಶರಣ್​ (Sharan) ನಾಯಕನಾಗಿ ಹಾಗೂ ಅವರಿಗೆ ನಾಯಕಿಯಾಗಿ ಆಶಿಕಾ ರಂಗನಾಥ್​ (Ashika Ranganath) ನಟಿಸಿದ್ದಾರೆ. ಸಿಂಪಲ್​ ಸುನಿ (Simple Suni) ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಎರಡು ಭಾಗಗಳಲ್ಲಿ ನಿರ್ಮಿಸಲಾಗಿರುವ ಈ ಸಿನಿಮಾ ಅದರ ಮೊದಲ ಭಾಗ ಡಿಸೆಂಬರ್​ನಲ್ಲಿ ರಿಲೀಸ್​ ಆಗಲಿದೆ. 

ಈಗಾಗಲೇ ಸಿನಿಮಾ ಕೆಲಸಗಳನ್ನು ಮುಗಿಸಿ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರ ತಂಡ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿತ್ತು. ಇದರಲ್ಲಿ ಸಿನಿಮಾದ ನಿರ್ಮಾಪಕರು, ನಿರ್ದೇಶಕ ಹಾಗೂ ಕಲಾವಿದರು ಭಾಗಿಯಾಗಿದ್ದರು.
View this post on Instagram


A post shared by Sharaan (@realsharaan)


'ನಾನು ಈವರೆಗೂ ಈ ರೀತಿಯ ಚಿತ್ರ ಮಾಡಿಲ್ಲ. ನನ್ನ ಈವರೆಗಿನ ಸಿನಿಪಯಣದಲ್ಲೇ ದೊಡ್ಡ ಬಜೆಟ್​ನ‌ ಚಿತ್ರವಿದು. ಇಂತಹ ಅದ್ದೂರಿ ಚಿತ್ರ ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಪುಷ್ಕರ್ ಅವರ ಧೈರ್ಯ ಮೆಚ್ಚಲೇಬೇಕು. ಇನ್ನೂ ನಿರ್ದೇಶಕ‌ ಸಿಂಪಲ್ ಸುನಿ‌, ಅವರ ಹೆಸರಿನಲ್ಲ ಮಾತ್ರ ಸಿಂಪಲ್ ಇಲ್ಲ. ಸಿಂಪಲೆಸ್ಟ್ ಸುನಿ ಅವರು. ಅವರ ಕಾರ್ಯವೈಖರಿ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಇನ್ನೂ ನಾಯಕಿ ಆಶಿಕಾ ರಂಗನಾಥ್ ಸೇರಿದಂತೆ ಈ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ‌ ಸೊಗಸಾಗಿ ‌ಮೂಡಿಬಂದಿದೆ. ನಾನು ಸುಮಾರು ಹತ್ತು ಅವತಾರಗಳಲ್ಲಿ ಕಾಣಿಸಬಹುದು. ಇದೇ ಡಿಸೆಂಬರ್ ಹತ್ತರಂದು "ಅವತಾರ ಪುರುಷ" ನ ಆಗಮನವಾಗಲಿದೆ ನೋಡಿ ಹಾರೈಸಿ' ಎಂದಿದ್ದಾರೆ ನಾಯಕ ಶರಣ್.

ಇದನ್ನೂ ಓದಿ: Happy Birthday Sharan: ಹುಟ್ಟುಹಬ್ಬದ ಸಂಭ್ರಮದಲ್ಲಿ ಶರಣ್​: ಸ್ಯಾಂಡಲ್​ವುಡ್ ಅಧ್ಯಕ್ಷನ ಅಪರೂಪದ ಫೋಟೋಗಳು..!

'ಎಲ್ಲರೊಡನೆ ಉತ್ತಮ ಬಾಂಧವ್ಯ ಬೆಸೆದ ಸಿನಿಮಾ "ಅವತಾರ ಪುರುಷ". ಈ ತಂಡದಲ್ಲಿ ಎಲ್ಲರೂ ಒಂದೇ ಕುಟುಂಬದವರ ಹಾಗೆ ಇದ್ದೆವು. ಶರಣ್ ಹಾಗೂ ಸುನಿ ಅವರ ಕಾಂಬಿನೇಶನಲ್ಲಿ ಈ ಚಿತ್ರ ಹೇಗೆ ಬರಬಹುದು? ಎಂಬ ಕುತೂಹಲ ಇದೆ. ನಾನು ಚಿತ್ರ ನೋಡುವ ಕಾತುರದಲ್ಲಿದ್ದೀನಿ. ನಿರ್ದೇಶಕ ಸುನಿ ಹಾಗೂ ನಿರ್ಮಾಪಕ ಪುಷ್ಕರ್ ಅವರ ಸರಳತೆ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಒಟ್ಟಿನಲ್ಲಿ ಉತ್ತಮ ಸಿನಿಮಾದಲ್ಲಿ ಅಭಿನಯಿಸಿದ ತೃಪ್ತಿಯಿದೆ. ಜನರು ಕೂಡ ಮೆಚ್ಚಿ ಕೊಳ್ಳುತ್ತಾರೆ ಎಂಬ ಭರವಸೆಯಿದೆ' ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ ನಟಿ ಆಶಿಕಾ ರಂಗನಾಥ್.

ಎರಡು ಭಾಗಗಳಲ್ಲಿ ನಿರ್ಮಾಣವಾಗಿರುವ ಅವತಾರ ಪುರುಷ ಸಿನಿಮಾ

'ನಾನು ವೆಬ್ ಸಿರೀಸ್​ಗೆ ಅಂತ ಮಾಡಿದ ಕಥೆಯಿದು. ಪುಷ್ಕರ್ ಅವರು ಈ ಕಥೆ ಕೇಳಿ, ವೆಬ್ ಸಿರೀಸ್ ಬೇಡ . ಸಿನಿಮಾ ಮಾಡೋಣ ಅಂದರು. ಎರಡು ಭಾಗಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಮೊದಲ ಭಾಗ ಡಿಸೆಂಬರ್ 10ರಂದು ಬಿಡುಗಡೆಯಾಗಲಿದೆ. ಎರಡನೇ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದೆ. ನಿರ್ದೇಶಕನಿಗೆ ಸಿನಿಮಾ ಬಗ್ಗೆ ತನ್ನದೇ ಆದ ಒಂದು ಇಮೇಜಿನೇಶನ್ ಇರುತ್ತದೆ. ಆದರೆ, ಊಹೆಗೂ ಮೀರಿ ಅವತಾರ ಪುರುಷ ಚಿತ್ರ ಮೂಡಿ ಬಂದಿದೆ. ಶರಣ್ - ಆಶಿಕಾ ರಂಗನಾಥ್ ಅವರ ಜೋಡಿ ನೋಡುಗರನ್ನು ಮೋಡಿ ಮಾಡಲಿದೆ' ಎಂದಿದ್ದಾರೆ ನಿರ್ದೇಶಕ ಸಿಂಪಲ್ ಸುನಿ.

350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಅವತಾರ ಪುರುಷ ಭಾಗ 1 ರಿಲೀಸ್​

'ನನ್ನ ಪ್ರಕಾರ "ಆಪ್ತಮಿತ್ರ" ನಂತರ ಕನ್ನಡದಲ್ಲಿ ಬರುತ್ತಿರುವ ಸಿನಿಮಾ "ಅವತಾರ ಪುರುಷ". ಹತ್ತು, ಹದಿನೈದು ವರ್ಷಗಳಲ್ಲಿ ಈ ರೀತಿಯ ಸಿನಿಮಾ ಬಂದಿಲ್ಲ ಅನಿಸುತ್ತದೆ. ನಾಯಕ ಶರಣ್, ನಾಯಕಿ ಆಶಿಕಾ ರಂಗನಾಥ್ ಹಾಗೂ ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಎಲ್ಲ ಕಲಾವಿದರ ಸಹಕಾರದಿಂದ ಈ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಡಿಸೆಂಬರ್ ಹತ್ತರಂದು ಸುಮಾರು 350ಕ್ಕೂ ಅಧಿಕ ಚಿತ್ರಮಂದಿರದಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಭಾಗ 1 ಬಿಡುಗಡೆಯಾದ ನೂರನೇ ದಿನಕ್ಕೆ ಸರಿಯಾಗಿ ಈ ಚಿತ್ರದ ಎರಡನೇ ಭಾಗ ಕೂಡ ಬಿಡುಗಡೆಯಾಗಲಿದೆ' ಎಂದು ಸಂತಸ ವ್ಯಕ್ತಪಡಿಸಿದ್ದಾರೆ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನ.

ಇದನ್ನೂ ಓದಿ: ಡಿಸೆಂಬರ್​ನಲ್ಲಿ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದ್ದಾನೆ Avatara Purusha

ಶ್ರೀನಗರ ಕಿಟ್ಟಿ, ಸಾಯಿಕುಮಾರ್, ಭವ್ಯ, ಸುಧಾರಣಿ, ಮುಂತಾದ ಅನುಭವಿ ಕಲಾವಿದರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಚೆಂಡೂರ್ ನಟನೆಯೊಂದಿಗೆ ಸ್ಕ್ರಿಪ್ಟ್ ವರ್ಕ್​ನಲ್ಲೂ ನೆರವಾಗಿದ್ದಾರಂತೆ. ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಉತ್ತಮವಾಗಿ ಮೂಡಿಬಂದಿದ್ದು, ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಅವತಾರ ಪುರುಷ ನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎನ್ನಬಹುದು.
Published by:Anitha E
First published: