ಸ್ಯಾಂಡಲ್ವುಡ್ನ ಲವ್ ಬರ್ಡ್ಸ್ಗಳ ಪಟ್ಟಿ ಸೇರಿದ ನಟಿ ಹರಿಪ್ರಿಯಾ (Haripriya) ಹಾಗೂ ನಟ ವಸಿಷ್ಠ ಸಿಂಹ (Vasishta Simha) ಹಸೆಮಣೆ ಏರಲು ದಿನಾಂಕ ಫಿಕ್ಸ್ ಆಗಿದೆ. ಹೊಸ ವರ್ಷದ ಆರಂಭದಲ್ಲೇ ಹೊಸ ಜೀವನಕ್ಕೆ ಕಾಲಿಡಲು ಜೋಡಿ ರೆಡಿಯಾಗಿದೆ ಜನವರಿ 26 ರಂದು ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿವಾಹ ಜರುಗಲಿದೆ. ಮದುವೆ ದಿನಾಂಕವನ್ನು ಸಂಸದ ಪ್ರತಾಪ್ ಸಿಂಹ ತಮ್ಮ ಫೇಸ್ ಬುಕ್ ಅಕೌಂಟ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ವಸಿಷ್ಠ ಸಿಂಹ, ಹರಿಪ್ರಿಯಾ ಜೋಡಿಗೆ ಪ್ರತಾಪ್ ಸಿಂಹ ಸಾಥ್
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಗಣಪತಿ ಸಚ್ಚಿದಾನಂದ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ವಸಿಷ್ಠ ಸಿಂಹ, ಹರಿಪ್ರಿಯಾ ಜೋಡಿಗೆ ಪ್ರತಾಪ್ ಸಿಂಹ ಸಾಥ್ ನೀಡಿದ್ದಾರೆ.
ಸಿಂಹ-ಪ್ರಿಯಾ ಮದುವೆ ಡೇಟ್ ಘೋಷಿಸಿದ ಪ್ರತಾಪ್ ಸಿಂಹ
ವಸಿಷ್ಠ ಸಿಂಹ, ಹರಿಪ್ರಿಯಾ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ವಿಚಾರಗಳನ್ನು ಮಾತ್ರವಲ್ಲ ತಮ್ಮ ವೈಯಕ್ತಿಕ ವಿಚಾರಗಳನ್ನು ಸಹ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ತಾರೆ. ಆದ್ರೆ ಮದುವೆ ದಿನಾಂಕ ಬಗ್ಗೆ ಈ ಜೋಡಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಮದುವೆ ದಿನಾಂಕವನ್ನು ಸಂಸದ ಪ್ರತಾಪ್ ಸಿಂಹ ಪೋಸ್ಟ್ ಮಾಡುವ ಮೂಲಕ ಸಿಂಹ-ಪ್ರಿಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ
ಸೆಲೆಬ್ರೆಟಿಗಳು ಅದ್ಧೂರಿ ವಿವಾಹವಾಗೋದು ಕಾಮನ್, ಸಾಮಾನ್ಯವಾಗಿ ಸಿನಿಮಾ ಸ್ಟಾರ್ ಗಳು ದೊಡ್ಡ ದೊಡ್ಡ ಕಲ್ಯಾಣ ಮಂಟಪ, ರೆಸಾರ್ಟ್ ಗಳಲ್ಲಿ ವಿವಾಹವಾಗ್ತಾರೆ. ಆದ್ರೆ ನಮ್ಮ ವರಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ.
ಹೊಸ ವರ್ಷ ಆರಂಭದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡ್ತಿರುವ ಈ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ. ಜೊತೆ ನಟ-ನಟಿಯರು ಸಹ ಬೆಸ್ಟ್ ವಿಶಸ್ ತಿಳಿಸಿದ್ದಾರೆ.
ಡಿಸೆಂಬರ್ 3 ರಂದು ನಿಶ್ಚಿತಾರ್ಥ
ಡಿಸೆಂಬರ್ 3 ರಂದು ಹರಿಪ್ರಿಯಾ ನಿವಾಸದಲ್ಲಿ ಇಬ್ಬರಿಗೂ ನಿಶ್ಚಿತಾರ್ಥ ನಡೆದಿತ್ತು. ಕುಟುಂಬಸ್ಥರು, ಸ್ನೇಹಿತರು ಮಾತ್ರ ಈ ನಿಶ್ಚಿತಾರ್ಥದಲ್ಲಿ (Engagement) ಭಾಗವಹಿಸಿದ್ದರು. ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಹರಿಪ್ರಿಯಾ ಅಧಿಕೃತವಾಗಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ರು. ಬಳಿಕ ವಸಿಷ್ಠ ಸಿಂಹ ತನ್ನ ಪ್ರೀತಿ ಹುಡುಗಿ ಹರಿಪ್ರಿಯಾ ಜೊತೆ ಇಯರ್ ಎಂಡ್ಗೆ ಹಾಲಿ ಡೇ ಟ್ರಿಪ್ ಹೋಗಿದ್ರು. ಈ ಜೋಡಿ ಮಲ್ಪೆಯಲ್ಲಿ ಸನ್ ಸೆಟ್ ನೋಡಿ ಎಂಜಾಯ್ ಮಾಡಿದ್ದರು.
View this post on Instagram
ಮಲ್ಪೆ ಸಮುದ್ರದ ದಡದಲ್ಲಿ ಮುದ್ದಾದ ಜೋಡಿ
ಸ್ಯಾಂಡಲ್ವುಡ್ನ ತಾರಾ ಜೋಡಿಗಳ ಲಿಸ್ಟ್ಗೆ ಹರಿಪ್ರಿಯಾ ಹಾಗೂ ವಶಿಷ್ಠ ಸಿಂಹ ಕೂಡ ಸೇರ್ಪಡೆಗೊಳ್ಳುತ್ತಿದ್ದಾರೆ. ಬ್ಯುಟಿಫುಲ್ ಜೋಡಿ ಇದೀಗ ಕರಾವಳಿಯ ಕಡಲತೀರದಲ್ಲಿ ಸನ್ ಸೆಟ್ ನೋಡಿ ಖುಷಿ ಪಟ್ಟಿದ್ದರು. ಮಲ್ಪೆ ಬೀಚ್ನಲ್ಲಿ ಕೈ ಕೈ ಹಿಡಿದು ಓಡಾಡಿದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ, ವಿಡಿಯೋ ಕೂಡ ಮಾಡಿದ್ದಾರೆ. ಈ ವಿಡಿಯೋಗೆ ಸುಂದರವಾದ ಸಾಂಗ್ ಸೆಟ್ ಮಾಡಿ ವಸಿಷ್ಠ ಸಿಂಹ ನಮ್ಮ ಇನ್ಸ್ಟಾ ಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ