ಒಂದು ಕಾಲದಲ್ಲಿ ನಟಿಯಾಗಿದ್ದ ಚಾರ್ಮಿ ಈಗ ಯಶಸ್ವಿ ನಿರ್ಮಾಪಕಿ. ಇಸ್ಮಾರ್ಟ್ ಶಂಕರ್ ಸಿನಿಮಾವನ್ನು ನಿರ್ಮಿಸಿದ್ದು, ಅದು ಬಾಕ್ಸಾಫಿಸ್ನಲ್ಲಿ ಸಖತ್ ಸದ್ದು ಮಾಡಿತ್ತು. ಈ ಸಿನಿಮಾಗೆ ಪೂರಿ ಜಗನ್ನಾಥ್ ನಿರ್ದೇಶಕರಾಗಿದ್ದಾರೆ. ಈಗ ಇದೇ ಜೋಡಿ ವಿಜಯ್ ದೇವರಕೊಂಡ ಜೊತೆ ಒಂದು ಸಿನಿಮಾ ಮಾಡುತ್ತಿದೆ. ಚಾರ್ಮಿ ಹಾಗೂ ಪೂರಿ ಜಗನ್ನಾಥ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ ಫೈಟರ್ಚಿತ್ರದಲ್ಲಿ ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟಿಸುತ್ತಿದ್ದಾರೆ. ಕೊರೋನಾ ಕಾರಣದಿಂದಾಗಿ ಈ ಸಿನಿಮಾದ ಚಿತ್ರೀಕರಣ ಸದ್ಯ ನಿಂತಿದೆ. ಈ ಸಿನಿಮಾವನ್ನು ಪೂರಿ ಜಗನ್ನಾಥ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಟಿ ಚಾರ್ಮಿ, ಆಗಾಗ ತಮ್ಮ ಸಿನಿಮಾ ಕುರಿತಾಗಿ ಪೋಸ್ಟ್ ಮಾಡುತ್ತಿರುತ್ತಾರೆ. ಈಗಲೂ ಸಹ ಪ್ರಭಾಸ್ ಕುರಿತಾಗಿ ಒಂದು ಆಸಕ್ತಿಕರ ಪೋಸ್ಟ್ ಹಂಚಿಕೊಂಡಿದ್ದಾರೆ ಚಾರ್ಮಿ.
ಚಾರ್ಮಿ ಪ್ರಭಾಸ್ ಅವರ ಒಂದು ಫೋಟೋ ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚಾರ್ಮಿ ಅವರ 9 ತಿಂಗಳ ಸಾಕು ನಾಯಿ ಜೊತೆ ಪ್ರಭಾಸ್ ತೆಗೆಸಿಕೊಂಡಿರುವ ಚಿತ್ರವನ್ನು ಚಾರ್ಮಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಫೋಟೋಗೆ ಚಾರ್ಮಿ ಸಖತ್ ಶೀರ್ಷಿಕೆ ಕೊಟ್ಟಿದ್ದಾರೆ. ಡಾರ್ಲಿಂಗ್ ವಿಥ್ ಮೈ 9 ಮಂಥ್ಸ್ ಒಲ್ಡ್ ಬೇಬಿ ಅಂತ ಚಾರ್ಮಿ ಬರೆದುಕೊಂಡಿದ್ದಾರೆ. ಇನ್ನು ಫೋಟೋ ಡಾರ್ಲಿಂಗ್ ಅಭಿಮಾನಿಗಳಿಗೆ ತುಂಬಾ ಇಷ್ಟವಾಗುತ್ತಿದೆ.
ಇನ್ನು ಪ್ರಭಾಸ್ ಸದ್ಯ ಇಟಲಿಯಲ್ಲಿ ರಾಧೆ ಶ್ಯಾಮ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ರಾಧೆ ಶ್ಯಾಮ್ ಸಿನಿಮಾವನ್ನು ರಾಧಾಕೃಷ್ಣ ಕುಮಾರ್ ನಿರ್ದೇಶಿಸುತ್ತಿದ್ದು, ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೆ ಈ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ.
ಇದರ ಜೊತೆಗೆ ಡಾರ್ಲಿಂಗ್, ನಾಗ್ ಅಶ್ವಿನ್ ನಿರ್ದೇಶನದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಅಮಿತಾಭ್ ಬಚ್ಚನ್ ಹಾಗೂ ದೀಪಿಕಾ ಪಡುಕೋಣೆ ಸಹ ನಟಿಸುತ್ತಿದ್ದಾರೆ.
ಇನ್ನು ಇದಾದ ನಂತರ ಪ್ರಭಾಸ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಲಿದ್ದಾರೆ. ಓಂರಾವತ್ ಅವರ ನಿರ್ದೇಶನದ ಆದಿಪುರುಷ್ ಸಿನಿಮಾದಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಪ್ರಭಾಸ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ