ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಫೇಸ್ಬುಕ್ನಲ್ಲಿ ಈ ಹಿಂದೆ ಪೋಸ್ಟ್ ಮಾಡಿದ್ದ ಸ್ಯಾಂಡಲ್ವುಡ್ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ. ಬಿಗ್ ಬಾಸ್ ಸೀಸನ್ 3ಯಲ್ಲಿ ಭಾಗವಹಿಸಿದ್ದ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದ್ದ ಜಯಶ್ರೀ ರಾಮಯ್ಯ ನೇಣಿಗೆ ಶರಣಾಗಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಗೊಲ್ಲರಹಟ್ಟಿಯ ಪ್ರಗತಿ ಬಡಾವಣೆಯಲ್ಲಿರುವ ಸಂಧ್ಯಾ ಕಿರಣ ವೃದ್ಧಾಶ್ರಮದಲ್ಲಿ ನೇಣಿಗೆ ಶರಣಾಗಿದ್ದಾರೆ. ಮಾರನಾಯಕನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ, ಸ್ಥಳಕ್ಕೆ ಬಂದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೆಲ ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಯಶ್ರೀ ಕಳೆದ ವರ್ಷ 2020ರ ಜೂನ್ 24ರಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಫೇಸ್ಬುಕ್ ಲೈವ್ನಲ್ಲಿ ಬಂದಾಗ ಹೇಳಿದ್ದರು. ಆ ಸಮಯದಲ್ಲಿ ನಟ ಕಿಚ್ಚ ಸುದೀಪ್ ಅವರಿಗೆ ಸಾಂತ್ವನ ಹೇಳಿದ್ದರು. ಅಲ್ಲದೆ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರಂತೆ.
ಆರಂಭದಲ್ಲಿ ಖಾಸಗಿ ಕಂಪೆನಿಯಲ್ಲಿ ಎಚ್ಆರ್ ಆಗಿದ್ದ ಜಯಶ್ರೀ, ಮಾಡೆಲಿಂಗ್ ಕ್ಷೇತದ ಕಡೆಗೆ ಆಕರ್ಷಿತರಾಗಿದ್ದರು. ಬಳಿಕ ಬಿಗ್ ಬಾಸ್ಗೂ ಕಾಲಿಟ್ಟರು. ನಂತರ ಜಯಶ್ರೀ ನಟನೆ ಕಡೆಗೆ ಗಮನಹರಿಸಿದ್ದರು.
ಇದನ್ನೂ ಓದಿ: Ramya: ಮೃಗಾಲಯ-ಸಫಾರಿಗಳಿಗೆ ಹೋಗುವುದನ್ನು ನಿಲ್ಲಿಸಿ ಎಂದ ರಮ್ಯಾ: ವನ್ಯಜೀವಿಗಳ ಪರ ದನಿ ಎತ್ತಿದ ನಟಿ..!
ಕಳೆದ ವರ್ಷ ಅಂದರೆ 2020ರ ಜುಲೈ ತಿಂಗಳಿನಿಲ್ಲಿ ಜಯಶ್ರೀ ತಮ್ಮ ಫೇಸ್ಬುಕ್ನಲ್ಲಿ ಒಂದು ಪೋಸ್ಟ್ ಮಾಡಿದ್ದರು. ಆ ಪೋಸ್ಟ್ ಅಂದು ಅವರ ಅಭಿಮಾನಿಗಳನ್ನು ಆತಂಕಕ್ಕೆ ದೂಡಿತ್ತು. ನಾನು ಎಲ್ಲವನ್ನೂ ತೊರೆಯುತ್ತೇನೆ ಎಂದು ಪೋಸ್ಟ್ ಮಾಡಿದ್ದರು. ಅಯ್ಯೋ ನಟಿಗೆ ಏನಾಯ್ತೋ ಎಂದು ಅಭಿಮಾನಿಗಳು ಆತಂಕದಲ್ಲಿರುವಾಗಲೇ, ಜಯಶ್ರೀ ನಾನು ಸೇಫ್ ಆಗಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ