ಬೆಂಗಳೂರು; ಡ್ರಗ್ಸ್ ಪೆಡ್ಲರ್ಗಳ ಜೊತೆ ಸಂಪರ್ಕ ಹೊಂದಿದ್ದರು ಎಂಬ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಇಂದು ಸಂಜಯ್ ಗಾಂಧಿ ಆಸ್ಪತ್ರೆಗೆ ಸೇರಿಸಲಾಗಿದೆ.
ಇದೇ ಆರೋಪದ ಮೇಲೆ ನಟಿ ರಾಗಿಣಿ ಅವರೊಂದಿಗೆ ಮತ್ತೋರ್ವ ನಟಿಯಾದ ಸಂಜನಾ ಗಲ್ರಾಣಿ ಅವರನ್ನು ಬಂಧಿಸಲಾಗಿತ್ತು. ಕಳೆದ ವಾರ ಸಂಜನಾ ಆರೋಗ್ಯದ ಸಮಸ್ಯೆಯ ಕಾರಣದಿಂದ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ರಾಗಿಣಿ ಕೂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.
ಇದನ್ನು ಓದಿ: ಡಿಬಾಸ್ ದರ್ಶನ್-ಪವನ್ ಕಲ್ಯಾಣ್ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ಪ್ರಣೀತಾ ಸುಭಾಷ್..!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ