ಸಹಜ ಸುಂದರಿ ಸಾಯಿ ಪಲ್ಲವಿ ಹಾಗೂ ಟಾಲಿವುಡ್ ಹಂಕ್ ರಾಣಾ ದಗ್ಗುಬಾಟಿ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ವಿರಾಟ ಪರ್ವಂ. ವಿರಾಟ ಪರ್ವಂ ಸಿನಿಮಾ ಪ್ರಕವಾದಾಗಿನಿಂದ ಸಿನಿಮಾ ನಾಯಕಿಯ ಆಯ್ಕೆ ಕುರಿತಾಗಿ ಸಾಕಷ್ಟು ಚರ್ಚೆಯಲ್ಲಿತ್ತು. ಈ ಸಿನಿಮಾದಲ್ಲಿ ರಾಣಾ ಜೊತೆ ರಶ್ಮಿಕಾ ಮಂದಣ್ಣ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ. ನಂತರದಲ್ಲಿ ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರ ಹೆಸರು ಕೇಳಿಬಂತರು. ನಕ್ಸಲ್ ಹಿನ್ನಲೆಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ವೇಣು ಉಡುಗುಡಲ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆದಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಅದರಲ್ಲೂ ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಅವರನ್ನು ಪಕ್ಕಾ ಹಳ್ಳಿ ಹುಡುಗಿಯಂತೆ ಚಿತ್ರೀಕರಿಸಲಾಗಿದ್ದು, ಅವರ ದೇಸಿ ಲುಕ್ ಪ್ರೇಕ್ಷಕರಿಗೆ ತುಂಬಾ ಇಷ್ಟವಾಗಿತ್ತು. ಈಗ ಇದೇ ಚಿತ್ರತಂಡ ಅಭಿಮಾನಿಗಳಿಗೆ ಹೊಸ ಅಪ್ಡೇಟ್ ಕೊಟ್ಟಿದೆ.
ಈಗಾಗಲೇ ಟಾಲಿವುಡ್ ಹಾಗೂ ಬಾಲಿವುಡ್ನಲ್ಲಿ ನಕ್ಸಲ್ ಹಿನ್ನಲೆಯಲ್ಲಿ ನಿರ್ಮಾಣಗೊಂಡಿರುವ ಸಾಕಷ್ಟು ಸಿನಿಮಾಗಳು ಬಂದಿವೆ. ಟಾಲಿವುಡ್ನಲ್ಲಿ ನಕ್ಸಲ್ ಹೋರಾಟದ ಜೊತೆ ಲವ್ ಸ್ಟೋರಿ ಇರುವ ಚಿತ್ರಗಳಿಗೇನೂ ಕಡಿಮೆ ಇಲ್ಲ. ಇಂತಹದ್ದೇ ಸಿನಿಮಾಗಳ ಲಿಸ್ಟ್ಗೆ ಸೇರಲಿದೆ ಈ ವಿರಾಟ ಪರ್ವಂ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡಿದೆ.
View this post on Instagram
View this post on Instagram
View this post on Instagram
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ