Amitabh Bachchan Health: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಿತಾಭ್​ ಆರೋಗ್ಯ ಹೇಗಿದೆ?; ವೈದ್ಯರು ಹೇಳಿದ್ದಿಷ್ಟು

ಅಮಿತಾಭ್ ಐಸಿಯುನಲ್ಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇದು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಈ ವಿಚಾರವಾಗಿ ಆಸ್ಪತ್ರೆ ವೈದ್ಯರು ಸ್ಪಷ್ಟನೆ ನೀಡಿದ್ದಾರೆ.


Updated:July 13, 2020, 2:05 PM IST
Amitabh Bachchan Health: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಿತಾಭ್​ ಆರೋಗ್ಯ ಹೇಗಿದೆ?; ವೈದ್ಯರು ಹೇಳಿದ್ದಿಷ್ಟು
ಅಮಿತಾಭ್​ ಬಚ್ಚನ್​
  • Share this:
ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್ ಬಚ್ಚನ್ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಐಶ್ವರ್ಯಾ ರೈ ಹಾಗೂ ಆರಾಧ್ಯ ಬಚ್ಚನ್ಗೂ ಕೊರೋನಾ ಸೋಂಕು ಇರುವುದು ಖಚಿತವಾಗಿತ್ತು. ಈ ಮಧ್ಯೆ 77 ವರ್ಷದ ಅಮಿತಾಭ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

"ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ ಪರೀಕ್ಷೆ ನಡೆಯುತ್ತಿದೆ. ಅದರ ಫಲಿತಾಂಶ ಬರಬೇಕಿದೆ. ಕಳೆದ 10 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ,” ಎಂದು ಅಮಿತಾಭ್ ಬಚ್ಚನ್ ಟ್ವೀಟ್ ಮಾಡಿದ್ದರು. ಇದಾದ ಬೆನ್ನಲ್ಲೇ ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾ ಬಚ್ಚನ್ಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಸದ್ಯ, ಐಶ್ವರ್ಯಾ ಹಾಗೂ ಆರಾಧ್ಯ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಅಭಿಷೇಕ್ ಹಾಗೂ ಅಮಿತಾಭ್ ಆಸ್ಪತ್ರೆಯಲ್ಲಿ ಇದ್ದಾರೆ.

ಅಮಿತಾಭ್ ಐಸಿಯುನಲ್ಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇದು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಈ ವಿಚಾರವಾಗಿ ಆಸ್ಪತ್ರೆ ವೈದ್ಯರು ಸ್ಪಷ್ಟನೆ ನೀಡಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಏರುಪೇರು ಆಗಿಲ್ಲ, ಅವರನ್ನು ಐಸಿಯುನಲ್ಲಿ ಇಟ್ಟಿಲ್ಲ ಎಂದಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಾ.ಅಬ್ದುಲ್ ಸಮದ್ ಅನ್ಸಾರಿ, ಅಮಿತಾಭ್ ಬಚ್ಚನ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಕೊರೋನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿದೆ. ಅಭಿಷೇಕ್ ಕೂಡ ಚೆನ್ನಾಗಿದ್ದಾರೆ, ಎಂದು ತಿಳಿಸಿದ್ದಾರೆ.

ಅಮಿತಾಭ್ಗೆ ಕೊರೋನಾ ವೈರಸ್ ಇರುವ ವಿಚಾರ ತಿಳಿದು ಐದು ದಿನ ಕಳೆದಿದೆ. ಸಾಮಾನ್ಯವಾಗಿ ಕೊರೋನಾ 10-12 ದಿನಕ್ಕೆ ತನ್ನ ಅಸಲಿ ಪ್ರಭಾವ ತೋರಿಸುತ್ತದೆ. ಕೆಲವರಿಗೆ ಏನು ಆಗದೆಯೂ ಇರಬಹುದು, ಎಂದಿದ್ದಾರೆ.
Published by: Rajesh Duggumane
First published: July 13, 2020, 2:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading