ಸ್ಯಾಂಡಲ್ವುಡ್ನಲ್ಲಿ (Sandalwood) ಹೈವೋಲ್ಟೇಜ್ ಕರೆಂಟ್ ‘ಪವರ್ ಸ್ಟಾರ್ (Power Star) ಎಂದು ಪ್ರಸಿದ್ದಿ ಪಡೆದ ಪುನೀತ್ ರಾಜ್ಕುಮಾರ್ (Puneeth Rajkumar). ಕೋಟ್ಯಂತರ ಅಭಿಮಾನಿಗಳ ಮನಗೆದ್ದವರು, ಹೇಗೆ ಮನುಷ್ಯ ದೇವರಾಗಬಲ್ಲ ಎಂಬುದನ್ನ ತೋರಿಸಿದವರು ಎಂದರೆ ತಪ್ಪಾಗಲಾರದು. ಅಭಿಮಾನಿಗಳ ಯುವರತ್ನ ನಮ್ಮನ್ನಗಲಿ ಸುಮಾರು 5 ತಿಂಗಳಾಗುತ್ತಿದೆ. ಈ 5 ತಿಂಗಳಲ್ಲಿ ಅಭಿಮಾನಿಗಳು ಅವರನ್ನು ನೆನೆಯದ ದಿನವಿಲ್ಲ, ಅವರ ಆರಾಧನೆಯನ್ನು ಮಾಡುತ್ತಲೇ ಬಂದಿದ್ದಾರೆ. ಮೊನ್ನೆ ಸಹ ಮಾರ್ಚ್ 17ರಂದು ಅಪ್ಪು ಜನ್ಮದಿನವನ್ನು ಮತ್ತು ಜೇಮ್ಸ್ ಬಿಡುಗಡೆಯನ್ನು ಹಬ್ಬದ ರೀತಿ ಆಚರಿಸಿ ಸಂಭ್ರಮಿಸಿದ್ದಾರೆ. ಆದರೂ ಸಹ ಅವರಿಲ್ಲ ಎನ್ನುವ ನೋವು ಅಭಿಮಾನಿಗಳನ್ನು ಕಾಡಿದೆ.
ಇನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದ್ದು, ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ 102ನೇ ಘಟಿಕೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಪರವಾಗಿ ಅವರ ಪತ್ನಿ ಅಶ್ವಿನಿ ಅವರು ಗೌರವ ಡಾಕ್ಟರೇಟ್ ಅನ್ನು ಸ್ವೀಕಾರ ಮಾಡಿದ್ದಾರೆ. ಈ ಸಮಾರಂಭದಲ್ಲಿ ಮಾತನಾಡಿದ ಅಶ್ವಿನಿ ಅವರು ಪುನೀತ್ ರಾಜ್ಕುಮಾರ್ ಮತ್ತು ಪಾರ್ವತಮ್ಮ ರಾಜ್ಕುಮಾರ್ ಪರವಾಗಿ ವಿಶ್ವವಿದ್ಯಾನಿಲಯಕ್ಕೆ ಪ್ರತಿ ವರ್ಷ ಎರಡು ಚಿನ್ನದ ಪದಕ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇಬ್ಬರ ನೆನಪಿನಲ್ಲಿ ಪದಕ ಘೋಷಣೆ
ಬ್ಯುಸಿನೆಸ್ ಮ್ಯಾನೇಜ್ಮೆಂಟ್ (ಎಂಬಿಎ) ವಿಷಯದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗೆ ಪಾರ್ವತಮ್ಮ ರಾಜ್ಕುಮಾರ್ ಅವರ ಹೆಸರಿನಲ್ಲಿ ಒಂದು ಚಿನ್ನದ ಪದಕ ಹಾಗೂ ಲಲಿತಕಲಾ ವಿಷಯದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗೆ ಪುನೀತ್ ರಾಜ್ಕುಮಾರ್ ಅವರ ಹೆಸರಿನಲ್ಲಿ ಒಂದು ಚಿನ್ನದ ಪದಕ, ಹೀಗೆ ಎರೆಡು ಚಿನ್ನದ ಪದಕ ನೀಡುವುದಾಗಿ ಅಶ್ವಿನಿ ಹೇಳಿದ್ದು, ಈ ವಿಚಾರವನ್ನು ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: Puneeth Rajkumar: ಅಪ್ಪು ಹುಟ್ಟುಹಬ್ಬಕ್ಕೂ ಮುನ್ನ ಡಬಲ್ ಗಿಫ್ಟ್! `ಪವರಿಸಮ್’ - `ಮಹಾನುಭಾವ’ ಸಾಂಗ್ ರಿಲೀಸ್
ಇನ್ನು ಸಮಾರಂಭದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರ ಬಾಲ್ಯ ದಿನಗಳು, ಅವರು ಅಭಿನಯಿಸಿದ ಹಲವು ಚಿತ್ರಗಳ ತುಣುಕುಗಳನ್ನು ಎಲ್ಇಡಿ ಸ್ಕ್ರೀನ್ನಲ್ಲಿ ಪ್ರದರ್ಶಿಸಲಾಯಿತು. ಮತ್ತೊಂದು ವಿಶೇಷ ಎಂದರೆ ಮೈಸೂರು ವಿಶ್ವವಿದ್ಯಾನಿಲಯವು ವರನಟ ಡಾ. ರಾಜ್ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ನೀಡಿತ್ತು. ಈಗ ಪುನೀತ್ ರಾಜ್ಕುಮಾರ್ ಅವರಿಗೆ ಡಾಕ್ಟರೇಟ್ ನೀಡುವ ಕಾರ್ಯಕ್ರಮದಲ್ಲಿ ಡಾ. ರಾಜ್ಕುಮಾರ್ ಕುಟುಂಬದ ಬಹುತೇಕ ಸದಸ್ಯರು ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ರಾಜ್ ಕುಟುಂಬಸ್ಥರು ಭಾಗಿ
ರಾಘವೇಂದ್ರ ರಾಜ್ಕುಮಾರ್, ಅವರ ಪತ್ನಿ ಮಂಗಳಾ, ಯುವ ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಅವರ ಸಹೋದರಿ ಲಕ್ಷ್ಮೀ ಗೋವಿಂದರಾಜು, ಧನ್ಯಾ ರಾಮ್ಕುಮಾರ್, ವಿನಯ್ ರಾಜ್ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದನ್ನೂ ಓದಿ:ಬ್ಯಾಡ ಬ್ಯಾಡ ಅಂದ್ರೂ ಮಾತು ಕೇಳದ ವಿಜಯ್.. ರಾಕಿಭಾಯ್ಗೆ ಸವಾಲ್ ಹಾಕಿಯೇ ಬಿಟ್ಟ `ಬೀಸ್ಟ್’!
‘ಇನ್ನು ಮೊನ್ನೆಯಷ್ಟೇ ಅಪ್ಪು ಅಭಿನಯದ ಕೊನೆಯ ಚಿತ್ರ ಜೇಮ್ಸ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ನೆಚ್ಚಿನ ನಟನನ್ನ ಕೊನೆಯ ಬಾರಿ ತೆರೆಯ ಮೇಲೆ ಕಣ್ತುಂಬಿಕೊಂಡಿದ್ದಾರೆ. ಜೇಮ್ಸ್ ಸಿನಿಮಾದಲ್ಲಿ ಅಪ್ಪು ಅಬ್ಬರ ಕಂಡು ಎಲ್ಲರು ದಂಗಾಗಿ ಹೋಗಿದ್ದಾರೆ. ಅಪ್ಪು ಅಭಿನಯದಲ್ಲೇ ಬೆಸ್ಟ್ ಪರ್ಫಾಮೆನ್ಸ್ ಅಂತಿದ್ದಾರೆ ಅಭಿಮಾನಿಗಳು. ಈ ಕ್ಷಣದಲ್ಲಿ ನಮ್ಮ ಜೊತೆ ಬಾಸ್ ಇಲ್ಲ ಎಂದು ಕಣ್ಣೀರು ಹಾಕಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ