ಇಂದು ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ (Puneeth Rajkumar Birthday), ಜೊತೆಗಿರದ ಜೀವ ಎಂದೆಂದೂ ಜೀವಂತ ಎನ್ನುವ ಘೋಷಣೆಗಳಲ್ಲೂ ಎಲ್ಲೆಡೆ ಮೊಳಗಿದೆ. ಅಪ್ಪು ಜನ್ಮದಿನವನ್ನು ಅಭಿಮಾನಿಗಳು ಹಬ್ಬದಂತೆ ಆಚರಿಸುತ್ತಿದ್ದಾರೆ. ಅಪ್ಪು ನೆನಪಿನಲ್ಲಿ ರಾಜ್ಯದಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಪ್ಪು ಸಾವು ಕರುನಾಡಿಗೆ ದೊಡ್ಡ ಆಘಾತವಾಗಿತ್ತು. ಪುನೀತ್ (Puneeth) ಸಾವಿನಿಂದ ದೊಡ್ಮನೆ ಶೋಕಸಾಗರದಲ್ಲಿ ಮುಳುಗಿತ್ತು. ಹುಟ್ಟುಹಬ್ಬದ ದಿನ ಪುನೀತ್ ನೆನೆದ ಕುಟುಂಬಸ್ಥರು, ನಮ್ಮ ಮನದಲ್ಲಿ ಅಪ್ಪು ಅಮರ ಎನ್ನುತ್ತಿದ್ದಾರೆ. ಪವರ್ ಸ್ಟಾರ್ ಪ್ರೀತಿಯ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅಪ್ಪು ನೆನಪಿನಲ್ಲಿ ವಿಡಿಯೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಅಪ್ಪು ಫೋಟೋವಿನ ವಿಡಿಯೋ ಹಂಚಿಕೊಂಡ ಅಶ್ವಿನಿ
ಪುನೀತ್ ಸಾವು ಅಶ್ವಿನಿ ಅವರಿಗೆ ಇಂದಿಗೂ ಅರಗಿಸಿಕೊಳ್ಳಲಾಗದ ಆಘಾತವಾಗಿದೆ. ಅಪ್ಪು ನಿಧನದ ಬಳಿಕ ಮಕ್ಕಳು ಹಾಗೂ ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಅಶ್ವಿನಿ ಹೊತ್ತಿದ್ದಾರೆ. ಇದೀಗ ಅಭಿಮಾನಿಗಳ ನೆಚ್ಚಿನ ಪವರ್ ಸ್ಟಾರ್ ಹುಟ್ಟುಹಬ್ಬವನ್ನು ಅಶ್ವಿನಿ ಕೂಡ ತುಂಬು ಹೃದಯದಿಂದ ಅಪ್ಪಿಕೊಂಡಿದ್ದಾರೆ. ಎಂದಿಗೂ ತಮ್ಮ ಭಾವನೆಗಳನ್ನು ಹೊರಹಾಕದ ಅಶ್ವಿನಿ ಅವರು ಇಂದು ಅಪ್ಪು ಚಿಕ್ಕವಯಸ್ಸಿನ ಫೋಟೋಗಳು ಹಾಗೂ ಫ್ಯಾಮಿಲಿ ಫೋಟೋಗಳನ್ನು ಒಳಗೊಂಡ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
View this post on Instagram
ಅಪ್ಪು ನೆನಪು ಎಂದಿಗೂ ಅಮರ ಎಂದ್ರು ಶಿವಣ್ಣ
ಪುನೀತ್ ಹುಟ್ಟುಹಬ್ಬದ ಹಿನ್ನೆಲೆ ಶಿವರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಜೊತೆಗಿನ ಒಡನಾಟದ ಬಗ್ಗೆ ನೆನೆದು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಜೊತೆಗಿನ ಭಾವನಾತ್ಮಕ ಪೋಸ್ಟ ಹಂಚಿಕೊಂಡಿದ್ದಾರೆ.
ಹತ್ತಿರದಿಂದ ನೋಡಿದ ನಾನೇ ಪುನೀತ
‘ಅಪ್ಪು, ನೀನು ಹುಟ್ಟಿದಾಗ ನಮ್ಮಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನಿನ್ನ ಕಣ್ಣಲ್ಲಿದ್ದ ಹೊಳಪು ನೀನು ಪವರ್ ಸ್ಟಾರ್ ಆಗೋದನ್ನು ಆಗಕೇ ಹೇಳುತ್ತಾ ಇತ್ತು. ನೀನು ನಕ್ಕರೆ ಎಲ್ಲರೂ ನಗ್ತಾ ಇದ್ರು. ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡ್ತಾ ಇದ್ರು. ಮನೆಗೆ ಬಂದ ಅತಿಥಿ ನೆಂಟರುಗಳಿಗೆಲ್ಲ ನೀನೇ ಬೇಕು. ಅಂತಹ ಪುಟ್ಟ ಅಪ್ಪು ಮಿಂಚಿನಂತೆ ತೆರೆಯ ಮೇಲೆ ಬಂದು, ಹೆಮ್ಮರವಾಗಿ, ಕೋಟ್ಯಾಂತರ ಜನರಿಗೆ ನೆರಳಾಗಿದ್ದನ್ನು ಹತ್ತಿರದಿಂದ ನೋಡಿದ ನಾನೇ ಪುನೀತ’ ಎಂದು ಪತ್ರ ಆರಂಭಿಸಿದ್ದಾರೆ ಶಿವಣ್ಣ.
ನೀನು ಹುಟ್ಟಿದ್ದೇ ಒಂದು ಉತ್ಸವ
‘ನಿನ್ನನು ಎತ್ತಿ ಆಡಿಸಿದ ಅಣ್ಣನಾಗಿ, ನಿನ್ನ ಜೊತೆ ಕೂಡಿ ಆಡಿದ ಸ್ನೇಹಿತನಾಗಿ, ನಿನ್ನ ಕೆಲಸಗಳನ್ನು ಮೆಚ್ಚಿ ಅಪ್ಪಿಕೊಂಡ ಕನ್ನಡಿಗರಾಗಿ, ಹಬ್ಬಯಾವುದೇ ಆಗಿದ್ರೂ ನಿನ್ನ ಹೆಸರಲ್ಲಿ ಪಟಾಕಿ ಹಚ್ಚುವ ಅಭಿಮಾನಿಗಳಲ್ಲಿ ಒಬ್ಬನಾಗಿ ಹೇಳ್ತಾ ಇದೀನಿ – ನೀನು ಹುಟ್ಟಿದ್ದೇ ಒಂದು ಉತ್ಸವ, ನೀನು ಬೆಳೆದಿದ್ದು ಇತಿಹಾಸ, ನಿನ್ನ ಜೀವನ ಒಂದು ದಂತಕಥೆ, ನಿನ್ನ ನೆನಪುಗಳು ಎಂದಿಗೂ ಅಮರ. ಹುಟ್ಟು ಹಬ್ಬದ ಶುಭಾಶಯಗಳು ಅಪ್ಪು’ ಎಂದು ಬರೆದಿರುವ ಫೋಸ್ಟ್ ಹಂಚಿಕೊಂಡಿದ್ದಾರೆ.
View this post on Instagram
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ