ಸ್ಟಾರ್ ನಟರ ಜನ್ಮದಿನ, ಸ್ಟಾರ್ ನಟರ ಸಿನಿಮಾ ರಿಲೀಸ್ ಆಗುವುದಕ್ಕೂ ಮೊದಲು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಕೌಂಟ್ಡೌನ್ ಆರಂಭಿಸುತ್ತಾರೆ. ಈಗ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿರುವ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾಗೂ ಕೌಂಟ್ಡೌನ್ ಟ್ರೆಂಡ್ ಆರಂಭವಾಗಿದೆ.
‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಇದೇ ಶುಕ್ರವಾರದಂದು (ಡಿ.27) ತೆರೆಗೆ ಬರುತ್ತಿದೆ. ಕನ್ನಡಿಗರ ಪಾಲಿಗೆ ಇದು ವಿಶೇಷ ಸಿನಿಮಾ. ‘ಕೆಜಿಎಫ್’ ತೆರೆಕಂಡ ಒಂದು ವರ್ಷದ ನಂತರ ಕನ್ನಡದ ಮತ್ತೊಂದು ಸಿನಿಮಾ ಇಷ್ಟು ಹೈಪ್ ಪಡೆದುಕೊಂಡು, ಇಷ್ಟು ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಹೀಗಾಗಿ, ಸಹಜವಾಗಿಯೇ ಸಿನಿಮಾ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಹುಟ್ಟುಕೊಂಡಿದೆ.
ಇನ್ನು, ಕೆಲ ಅಭಿಮಾನಿಗಳು ಸಿನಿಮಾ ರಿಲೀಸ್ಗೆ ಕೌಂಟ್ಡೌನ್ ಆರಂಭಿಸಿದ್ದಾರೆ. ಅಷ್ಟೇ ಅಲ್ಲ, ಚಿತ್ರದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಕೂಡ ಇದೇ ರೀತಿಯ ಪೋಸ್ಟ್ ಹಾಕಿದ್ದಾರೆ. ‘ಅವನೇ ಶ್ರೀಮನ್ನಾರಾಯಣ’ ಕಟ್ಔಟ್ ಎದುರು ನಿಂತು ಅವರು, ‘72 ಗಂಟೆ ಮಾತ್ರ’ ಎಂದು ಬರೆದುಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ