ಬಾಲಿವುಡ್ ಹೀರೋ ಸುಶಾಂತ್ ಸಿಂಗ್ ರಜಪೂತ್ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನುವ ವಿಚಾರ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ಎಲ್ಲರೂ ಶಾಕ್ಗೆ ಒಳಗಾಗಿದ್ದಾರೆ. ವಿಚಿತ್ರ ಎಂದರೆ ಸೋಮವಾರವಷ್ಟೇ ಸುಶಾಂತ್ ಸಿಂಗ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದರು!
ದಿಶಾ ಸಾಲಿಯನ್ ಈ ಮೊದಲು ಸುಶಾಂತ್ ಸಿಂಗ್ ಅವರ ಮ್ಯಾನೇಜರ್ ಆಗಿದ್ದರು. ನಂತರ ನಟ ವರುಣ್ ಶರ್ಮಾ ಅವರ ಬಳಿ ದಿಶಾ ಮ್ಯಾನೇಜರ್ ಆಗಿ ಕೆಲಸ ಮಾಡಲು ಆರಂಭಿಸಿದ್ದರು. ಆದರೆ, ಸೋಮವಾರ ಇವರು ತಾವು ವಾಸವಿದ್ದ ಕಟ್ಟಡದ 14ನೇ ಅಂತಸ್ತಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಮುಂಬೈನ ಮಲಾಡ್ನಲ್ಲಿರುವ ಮನೆಯಲ್ಲಿ ತಾವು ಮದುವೆ ಆಗುವ ಹುಡುಗನ ಜೊತೆ ದಿಶಾ ಉಳಿದುಕೊಂಡಿದ್ದರು. ಆದರೆ, ಏಕಾಏಕಿ ಅವರು ಮನೆಯಿಂದ ಕಟ್ಟಡದಿಂದ ಜಿಗಿದು ಬಿಟ್ಟಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಅವರ ಸಾವಿಗೆ ಸುಶಾಂತ್ ಕೂಡ ಬೇಸರ ವ್ಯಕ್ತಪಡಿಸಿದ್ದರು. ಇದಾದ ಆರೇ ದಿನಕ್ಕೆ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನ; ಮುಂಬೈನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
34 ವರ್ಷದ ಸುಶಾಂತ್ ಸಿಂಗ್ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಅವರ ಸ್ನೇಹಿತರು ಸುಶಾಂತ್ ಅವರನ್ನು ಭೇಟಿಯಾಗಲು ಬಂದಾಗ ಮನೆಯ ಬಾಗಿಲು ಹಾಕಿತ್ತು. ಬಾಗಿಲು ಒಡೆದು ನೋಡಿದಾಗ ಈ ವಿಷಯ ಗೊತ್ತಾಗಿದೆ. ಬೆಡ್ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸುಶಾಂತ್ ಸಿಂಗ್ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಳೆದ 6 ತಿಂಗಳಿನಿಂದ ಸುಶಾಂತ್ ಸಿಂಗ್ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸುಶಾಂತ್ ಸ್ನೇಹಿತರು ಪೊಲೀಸರಿಗೆ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ