ನೂರಾರು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ಸಿನಿಪ್ರಿಯರನ್ನು ರಂಜಿಸಿರುವ ಸ್ಯಾಂಡಲ್ವುಡ್ನ (Sandalwood) ಹಿರಿಯ ನಟಿ ಲೀಲಾವತಿ (Leelavathi). ಕೆಲವು ದಿನಗಳ ಹಿಂದೆಯಷ್ಟೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಬಚ್ಚಲ ಮನೆಗೆ ಹೋಗಿದ್ದಾಗ ಕಾಲು ಜಾರಿ ಬಿದ್ದು ಸೊಂಟಕ್ಕೆ ಗಾಯ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಲಾಯಿತು. ಸದ್ಯ ಆಸ್ಪತ್ರೆಯಿಂದ ಮನೆಗೆ ಬಂದಿರುವ ಲೀಲಾವತಿ ಅವರು ಕೆಲ ತಿಂಗಳು ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ತಿಳಿಸಿದ್ದರು. ಅಂತೆಯೇ ಮನೆಗೆ ಬಂದ ನಂತರ ವಿಶ್ರಾಂತಿ ಪಡೆಯುತ್ತಿರುವ ನಟಿಯ ಮನೆಗೆ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಭೇಟಿ ನೀಡುತ್ತಾ ಅವರ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಹೌದು, ಈ ಹಿಂದೆ ನಟಿ ಸುಧಾರಾಣಿ, ಮಾಳವೀಕಾ ಅವಿನಾಶ್ ಹಾಗೂ ಶ್ರುತಿ ಅವರು ಭೇಟಿ ಕೊಟ್ಟು ಆರೋಗ್ಯದ ಬಗ್ಗೆ ವಿಚಾರಿಸಿದ್ದರು. ಈಗ ನಟಿಯರಾದ ಭಾರತಿ ವಿಷ್ಣುವರ್ಧನ್, ಹೇಮಾ ಚೌಧರಿ ಹಾಗೂ ಶ್ರುತಿ ಅವರು ಲೀಲಾವತಿ ಅವರ ಮನೆಗೆ ಹೋಗಿದ್ದಾರೆ.
ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಹೇಮಾ ಚೌಧರಿ ಹಾಗೂ ಶ್ರುತಿ ಅವರು ನಟಿ ಲೀಲಾವತಿ ಅವರ ಮನೆಗೆ ಹೋಗಿದ್ದಾರೆ. ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ನಟಿಯ ಆರೋಗ್ಯ ವಿಚಾರಿಸಿ, ಅವರೊಂದಿಗೆ ಸಂತೋಷವಾಗಿ ಕಾಲ ಕಳೆದಿದ್ದಾರೆ.
ಲೀಲಾವತಿ ಅವರಿಗೆ ಮೊದಲು ಶಾಲು ಹೊದಿಸಿ ಸನ್ಮಾನ ಮಾಡಲಾಯಿತು. ನಂತರ ಅವರ ಮನೆಯಲ್ಲೇ ಅಡುಗೆ ಮಾಡಿ, ಅವರಿಗೆ ಉಣ ಬಡಿಸಿದ್ದಾರೆ. ಅದರಲ್ಲೂ ಶ್ರುತಿ ಅವರು ರುಚಿಕರವಾದ ಬಿರಿಯಾನಿ ಮಾಡಿದ್ದು, ಎಲ್ಲರೂ ಒಟ್ಟಿಗೆ ಕುಳಿದು ಅದನ್ನು ಸವಿಸಿದ್ದಾರೆ. ನಂತರ ನಗುತ್ತಾ, ಹಳೇ ನೆನಪುಗಳನ್ನು ಮೆಲುಕ ಹಾಕುತ್ತಾ ಖುಷಿಯಿಂದ ಕೆಲ ಸಮಯ ಕಳೆದಿದ್ದಾರೆ.
ಇದನ್ನೂ ಓದಿ: Radhika Apte Birthday Special: ರಹಸ್ಯ ವಿವಾಹದಿಂದ ಎಂಎಂಸ್ ಲೀಕ್ ವಿವಾದದವರಗೆ..!
ಇನ್ನು, ಸ್ಯಾಂಡಲ್ವುಡ್ನ ಹಿರಿಯ ನಟಿಯಾಗಿರುವ ಲೀಲಾವತಿ ಅವರು ಒಂಟಿಯಲ್ಲ. ಇಡೀ ಚಿತ್ರರಂಗವೇ ಅವರೊಂದಿಗೆ ಇದೆ ಎಂದು ಈ ಸೆಲೆಬ್ರಿಟಿಗಳು ಮನವರಿಕೆ ಮಾಡಿಕೊಡುತ್ತಿದ್ದಾರೆ. ಆಗಾಗ ಕೆಲವರು ಅವರ ಮನೆಗೆ ಭೇಟಿ ಕೊಟ್ಟು, ಅವರೊಂದಿಗೆ ಸಮಯ ಕಳೆಯುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಐಷಾರಾಮಿ ಅಪಾರ್ಟ್ಮೆಂಟ್ ಖರೀದಿಸಿದ Deepika Padukone..!
ಲೀಲಾವತಿ ಅವರು ಆಸ್ಪತ್ರೆಯಿಂದ ಮನೆಗೆ ಮರಳಿದ ಕೂಡಲೇ ನಟಿ ಸುಧಾರಾಣಿ, ಶ್ರುತಿ ಹಾಗೂ ಮಾಳವೀಕಾ ಅವರು ಲೀಲಾವತಿ ಅವರನ್ನು ಭೇಟಿ ಮಾಡಿದ್ದರು. ಅವರೊಂದಿಗೆ ಕಳೆದ ಸಂತಸದ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು, ಆ ಫೋಟೋಗಳನ್ನು ಶ್ರುತಿ ಹಾಗೂ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು.
ಲೀಲಾವತಿ ಅಮ್ಮ, ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಕಲಾವಿದೆ ಇವರು. ನೂರಾರು ಸಿನಿಮಾಗಳಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳ ಮೂಲಕ ನಮ್ಮೆಲ್ಲರನ್ನು ರಂಜಿಸಿದ್ದಾರೆ. ಲೀಲಾವತಿ ಎನ್ನುವುದು ದುರ್ಗಾದೇವಿಯ ಮತ್ತೊಂದು ಹೆಸರು,.ಕನ್ನಡದಲ್ಲಿ ಲೀಲಾ ಎನ್ನುವ ಪದಕ್ಕೆ ಮತ್ತೊಂದು ಅರ್ಥ ವಿನೋದ. ಲೀಲಾವತಿ ಅಮ್ಮ ದುರ್ಗೆಯ ಅವತಾರವಾದರು. ಜೀವನದ ಎಲ್ಲ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಇಂದು ಎಲ್ಲ ಹೆಣ್ಣುಮಕ್ಕಳಿಗೆ ಮಾದರಿಯಾಗಿ ನಿಂತಿದ್ದಾರೆ. ಅವರು ವಾಸವಿರುವ ಊರಿನಲ್ಲಿ ಬಡಜನರಿಗಾಗಿ ಆಸ್ಪತ್ರೆ ಕಟ್ಟಿಸಿದ್ದಾರೆ. ಹಸು ಕರುಗಳಿಗೆ ನೀರಿನ ಟ್ಯಾಂಕ್ ಕಟ್ಟಿಸಿ ಅವುಗಳಿಗೆ ಮೇವು ನೀಡಿದ್ದಾರೆ. ಎಷ್ಟೋ ಜನರಿಗೆ ಊಟ ನೀಡಿ ಸಹಾಯ ಮಾಡುತ್ತಾ ಇರುವ ಇವರನ್ನು ಅನ್ನಪೂರ್ಣೇಶ್ವರಿಯ ಸ್ವರೂಪ ಎಂದು ಕರೆಯುವುದೋ ಅಥವಾ ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅದೆಲ್ಲವನ್ನು ಭೂಮಿ ತಾಯಿಯ ಹಾಗೆ ತನ್ನಲ್ಲಿಯೇ ಹೊತ್ತು, ತಾಳ್ಮೆಯಿಂದ ಎಲ್ಲವನ್ನು ಸಹಿಸಿ, ಲೀಲಾಜಾಲವಾಗಿ ನಿಭಾಯಿಸಿರವ ಇವರನ್ನು ಭೂಮಿ ತಾಯಿಯ ಸ್ವರೂಪ ಎಂದು ಕರೆಯುವುದೋ ಎಂದು ಸುಧಾರಾಣಿ ಬರೆದುಕೊಂಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ