ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ (Akanksha Dubey) ಭಾನುವಾರ ವಾರಣಾಸಿಯ ಹೋಟೆಲ್ ಕೊಠಡಿಯಲ್ಲಿ (Hotel Room) ಆತ್ಮಹತ್ಯೆಮಾಡಿಕೊಂಡಿದ್ದಾರೆ. ನಟಿಯ (Actress) ವಯಸ್ಸು 25. ವರದಿಗಳ ಪ್ರಕಾರ, ಆಕಾಂಕ್ಷಾ ಸಾರಾನಾಥ್ ಪ್ರದೇಶದ ತನ್ನ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಯ ಬಗ್ಗೆ ಪೊಲೀಸರು (Police) ನಟಿಯ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯಂತೆ ಕಂಡರೂ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಆಕಾಂಕ್ಷಾ ಸಿನಿಮಾ ಶೂಟಿಂಗ್‌ಗಾಗಿ ವಾರಣಾಸಿಗೆ ಬಂದಿದ್ದರು ಎನ್ನಲಾಗಿದೆ. ಒಂದು ದಿನದ ಹಿಂದೆ, ಶನಿವಾರ ರಾತ್ರಿ, ಆಕಾಂಕ್ಷಾ ತನ್ನ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ತನ್ನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ, ಪ್ರೇಮಿಗಳ ದಿನದಂದು ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ತನ್ನ ರಿಲೇಷನ್ಶಿಪ್ ಅಧಿಕೃತಗೊಳಿಸಿ ಸುದ್ದಿ ಮಾಡಿದರು.
ಸಹನಟ ಸಮರ್ ಸಿಂಗ್ ಜೊತೆಗಿನ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಹ್ಯಾಪಿ ವ್ಯಾಲೆಂಟೈನ್ಸ್ ಡೇ' ಎಂದು ಬರೆದಿದ್ದರು. ಆಕಾಂಕ್ಷಾ ಅಕ್ಟೋಬರ್ 21, 1997 ರಂದು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಜನಿಸಿದರು. ಅವರು ಚಿಕ್ಕ ವಯಸ್ಸಿನಿಂದಲೂ ನೃತ್ಯ ಮತ್ತು ನಟನೆಯನ್ನು ಇಷ್ಟಪಡುತ್ತಿದ್ದರು.
ಆದ್ದರಿಂದ ಅವರು ತಮ್ಮ ಕಿರು ನೃತ್ಯ ಮತ್ತು ನಟನೆಯ ವೀಡಿಯೊಗಳನ್ನು ಹಂಚಿಕೊಳ್ಳುವ ಮೂಲಕ ಟಿಕ್‌ಟಾಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು.
ಇದನ್ನೂ ಓದಿ: Saba Azad: 49 ವರ್ಷದ ಹೃತಿಕ್ ರೋಷನ್ ಗರ್ಲ್ಫ್ರೆಂಡ್ ಸಬಾ ವಯಸ್ಸೆಷ್ಟು ಗೊತ್ತಾ?
ಭೋಜ್‌ಪುರಿ ಚಲನಚಿತ್ರೋದ್ಯಮದ ಡ್ರೀಮ್ ಗರ್ಲ್ ಎಂದು ಕರೆಯಲಾಗುವ ನಟಿ, ಮಿರ್ಜಾಪುರದ ವಿಂಧ್ಯಾಚಲದಿಂದ ಬಂದವರು. ಅವರು ಮೇರಿ ಜಂಗ್ ಮೇರಾ ಫೈಸ್ಲಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. ನಂತರ ಅವರು ಮುಜ್ಸೆ ಶಾದಿ ಕರೋಗಿ (ಭೋಜ್‌ಪುರಿ), ವೀರೋನ್ ಕೆ ವೀರ್, ಫೈಟರ್ ಕಿಂಗ್, ಮತ್ತು ಕಸಮ್ ಪೈಡಾ ಕರ್ನೆ ಕೆಐ 2 ಸೇರಿದಂತೆ ಹಲವಾರು ಚಲನಚಿತ್ರಗಳಲ್ಲಿ ನಟಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ