ಬಾಲಿವುಡ್ ನಟ ಅಜಯ್ ದೇವಗನ್ ದಂಪತಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ನಟಿ ಕಾಜಲ್ ಮತ್ತು ಅಜಯ್ ದೇವಗನ್ ದಂಪತಿ ಸುಬ್ರಹ್ಮಣ್ಯ ಸ್ವಾಮಿಗೆ ಆಶ್ಲೇಷ ಮತ್ತು ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ನಂತರ ಮಠದ ಗುರುಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು.
ನಟ ಅಜಯ್ ದೇವಗನ್ ಮೈದಾನ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಡಿಸೆಂಬರ್ 11,2020ರಂದು ತೆರೆಗೆ ಬರಲಿದೆ. ಇನ್ನು ತಮಿಳಿನಲ್ಲಿ ತೆರೆಕಂಡಿದ್ದ ಕಾರ್ತಿ ಅಭಿನಯದ ‘ಕೈದಿ‘ ಸಿನಿಮಾ ಹಿಂದಿಗೆ ರಿಮೇಕ್ ಆಗುತ್ತಿದೆ. ಈ ಸಿನಿಮಾದಲ್ಲಿ ನಟ ಅಜಯ್ ದೇವಗನ್ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ. ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್‘ ಸಿನಿಮಾದಲ್ಲಿ ಎನ್ಟಿಆರ್ ಪಾತ್ರದಲ್ಲಿ ಅಜಯ್ ದೇವಗನ್ ಕಾಣಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಆ್ಯಕ್ಷನ್ ಕಿಂಗ್ ಜಾಕಿಜಾನ್ಗೆ ಕೊರೊನಾ ವೈರಸ್ ತಗುಲಿರುವುದು ನಿಜವಾ? ಇಲ್ಲಿದೆ ಮಾಹಿತಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ