ಬಾಲಿವುಡ್ ಖ್ಯಾತ ನಟರಾದ ಅಕ್ಷಯ್ ಕುಮಾರ್ ಮತ್ತು ಶಾರುಖ್ ಖಾನ್ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಕಷ್ಟು ಸಿನಿಮಾದಲ್ಲಿ ನಟಿಸಿದ್ದಾರೆ. ಮಾತ್ರವಲ್ಲದೆ, ಹಿಟ್ ಸಿನಿಮಾದ ಮೂಲಕ ಪರೇಕ್ಷಕರನ್ನ ಮನರಂಜಿಸುತ್ತಾ ಬಂದಿದ್ದಾರೆ. ಬಹುಸಂಖ್ಯಾ ಅಭಿಮಾನಿಗಳನ್ನು ಈ ಇಬ್ಬರೂ ನಟರು ಸಂಪಾದಿಸಿದ್ದಾರೆ. ಅಕ್ಷಯ್ ಕುಮಾರ್ ವರ್ಷಕ್ಕೆ ಮೂರು-ನಾಲ್ಕು ಸಿನಿಮಾದಲ್ಲಿ ನಟಿಸುತ್ತಾರೆ. ಇನ್ನು ಶಾರುಖ್ ಖಾನ್ ಕಳೆದ ಎರಡು ವರ್ಷಗಳಿಂದ ಬಣ್ಣ ಹಚ್ಚಿಲ್ಲ. ಸತತ ಸೋಲಿನಿಂದಾಗಿ ಕೊಂಚ ಬಿಡುವು ತೆಗೆದುಕೊಂಡಿದ್ದಾರೆ. ಹಾಗಂದ ಮಾತ್ರಕ್ಕೆ ಶಾರುಖ್ ಸಿನಿಮಾದಿಂದ ಹೊರಗುಳಿದಿಲ್ಲ. ಈಗಲೂ ಬೇಡಿಕೆಯ ನಟರಾಗಿ ಗುರುತಿಸಿಕೊಂಡಿದ್ದಾರೆ.
ಶಾರುಖ್ ಖಾನ್ ಮತ್ತು
ಅಕ್ಷಯ್ ಕುಮಾರ್ ಒಂದೇ ಸಿನಿಮಾದಲ್ಲಿ ನಟಿಸಿದರೆ ಹೇಗಿರಬಹುದು? ಹೀಗೊಂದು ಆಸೆ ಅಭಿಮಾನಿಗಳಲ್ಲಿದೆ. ಇಬ್ಬರನ್ನು ಒಂದೇ ಸಿನಿಮಾದಲ್ಲಿ ನೋಡಲು ಅಭಿಮಾನಿಗಳು ಕಾದುಕುಳಿತ್ತಿದ್ದಾರೆ. ಆದರೆ ಇಬರಿಬ್ಬರು ಒಟ್ಟಿಗೆ ಸಿನಿಮಾ ಮಾಡಲು ಸಾಧ್ಯವಿಲ್ಲವಂತೆ. ಹೀಗಂತ ಬೇರಾರು ಹೇಳಿಲ್ಲ. ಸ್ವತಃ ನಟ ಶಾರುಖ್ ಖಾನ್ ಹೇಳಿದ್ದಾರೆ. ಈ ಹಿಂದೆ ಸಂದರ್ಶನವೊಂದರಲ್ಲಿ ಶಾರುಖ್ ಖಾನ್ ಈ ಮಾತನ್ನು ಹೇಳಿದ್ದಾರೆ. ಸಂದರ್ಶನಗಾರ ಶಾರುಖ್ ಬಳಿ ನೀವು ಅಕ್ಷಯ್ ಕುಮಾರ್ ಜೊತೆ ಸಿನಿಮಾ ಮಾಡಲು ಬಯಸುತ್ತೀರಾ? ಎಂದು ಕೇಳುತ್ತಾರೆ. ಇದಕ್ಕೆ ಶಾರುಖ್, ನಾನು ಏನು ಹೇಳಲಿ... ನಾನು ಬೆಳಗ್ಗೆ ಬೇಗ ಏಳುವುದಿಲ್ಲ. ಹಾಗಾಗಿ ಅವರ ಜೊತೆ ಕೆಲಸ ಮಾಡಲು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.
ಅಕ್ಷಯ್ ಸೆಟ್ಗೆ ಬಂದರೆ ಹೆಚ್ಚು ತಮಾಷೆ ಮಾಡುತ್ತಾರೆ. ಆದರೆ ನನ್ನ ಮತ್ತ ಅಕ್ಷಯ್ ಟೈಮಿಂಗ್ ಬೇರೆ ಬೇರೆಯಾಗಿರುತ್ತದೆ. ನಾನು ಸೆಟ್ಗೆ ಹೋಗುವಾಗ ಅಕ್ಷಯ್ ಅವರದ್ದು ಶೂಟಿಂಗ್ ಮುಗಿದಿರುತ್ತದೆ. ಇಬ್ಬರ ಸಮಯ ಹೊಂದಾಣಿಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ಅಕ್ಷಯ್ ಕುಮಾರ್ ಲಕ್ಷ್ಮೀ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ