Sushant Singh Rajput Death: ಬಾಲಿವುಡ್​ ನಟ ಸುಶಾಂತ್ ಸಿಂಗ್ ರಜಪೂತ್ ನಿಧನ; ಮುಂಬೈನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Sushant Singh Suicide: ಬಾಲಿವುಡ್​ ನಟ ಇರ್ಫಾನ್​ ಖಾನ್​ ಸಾವಿನ ಬೆನ್ನಲ್ಲೇ ಮತ್ತೋರ್ವ ನಟ ಸಾವನ್ನಪ್ಪಿರುವುದು ಬಾಲಿವುಡ್​ ಮಂದಿಗೂ ಆಘಾತ ಉಂಟುಮಾಡಿದೆ.

ಸುಶಾಂತ್ ಸಿಂಗ್ ರಜಪೂತ್

ಸುಶಾಂತ್ ಸಿಂಗ್ ರಜಪೂತ್

  • Share this:
ಬಾಲಿವುಡ್​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಹಲವಾರು ಬಾಲಿವುಡ್ ಸಿನಿಮಾದಲ್ಲಿ ನಟಿಸಿದ್ದ ಸುಶಾಂತ್ ಸಿಂಗ್ ಸಾವು ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ. ಆತ್ಮಹತ್ಯೆಗೆ ಖಿನ್ನತೆಯೇ ಕಾರಣ ಎನ್ನಲಾಗುತ್ತಿದೆ. ಬಾಲಿವುಡ್​ ನಟ ಇರ್ಫಾನ್​ ಖಾನ್​ ಸಾವಿನ ಬೆನ್ನಲ್ಲೇ ಮತ್ತೋರ್ವ ನಟ ಸಾವನ್ನಪ್ಪಿರುವುದು ಬಾಲಿವುಡ್​ ಮಂದಿಗೂ ಆಘಾತ ಉಂಟುಮಾಡಿದೆ.

34 ವರ್ಷದ ಸುಶಾಂತ್ ಸಿಂಗ್ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಅವರ ಮನೆಯ ಕೆಲಸದವರು ಬಂದು ನೋಡಿದಾಗ ಈ ವಿಷಯ ಗೊತ್ತಾಗಿದೆ. ಬೆಡ್​ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸುಶಾಂತ್ ಸಿಂಗ್ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಳೆದ 6 ತಿಂಗಳಿನಿಂದ ಸುಶಾಂತ್ ಸಿಂಗ್ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸುಶಾಂತ್ ಸ್ನೇಹಿತರು ಪೊಲೀಸರಿಗೆ ತಿಳಿಸಿದ್ದಾರೆ.

ಧಾರಾವಾಹಿ ನಟನಾಗಿ ಅಭಿನಯವನ್ನು ಶುರು ಮಾಡಿದ್ದ ಸುಶಾಂತ್ ಸಿಂಗ್ ಬಳಿಕ ಸಾಲು ಸಾಲು ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದರು. ಕಾಯ್ ಪೋ ಚೆ, ಶುದ್ಧ ದೇಸಿ ರೊಮ್ಯಾನ್ಸ್, ಪಿಕೆ, ಎಂ.ಎಸ್. ಧೋಣಿ, ರಾಬ್ಟಾ, ಕೇದಾರನಾಥ್ ಮುಂತಾದ ಹಿಟ್ ಸಿನಿಮಾಗಳಲ್ಲಿ ಸುಶಾಂತ್ ಸಿಂಗ್ ನಾಯಕನಾಗಿ ಅಭಿನಯಿಸಿದ್ದರು.
First published: