ಇತ್ತೀಚೆಗೆ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಮತ್ತು ಬಿಗ್ಬಾಸ್ ಸ್ಪರ್ಧಿ ನಿವೇದಿತಾ ಗೌಡ ಪ್ರೀತಿಸಿ ಮದುವೆಯಾಗಿದ್ದರು. ಈ ಜೋಡಿಗಳು ಹನಿಮೂನ್ಗಾಗಿ ಆಂಸ್ಟರ್ಡ್ಯಾಮ್, ನೆದರ್ಲ್ಯಾಂಡ್ಗೆ ಹೋಗಿದ್ದಾರೆ. ಅಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸಾಮಾಜಿಕ ತಾಣಗಳಲ್ಲೂ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಮತ್ತೊಂದೆಡೆ ಜಗತ್ತಿನಾದ್ಯಂತ ಕೊರೊನಾ ಆವರಿಸುತ್ತಿದೆ. ಇತ್ತ ಭಾರತಕ್ಕೂ ಅದು ಕಾಲಿಟ್ಟಿದೆ. ಚೀನಾದಲ್ಲಂತೂ ಸಾವಿನ ಸಂಖ್ಯೆ ದಿನ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಭಾರತದಲ್ಲಿ 43 ಜನರಲ್ಲಿ ಕೊರೋನಾ ಸೋಂಕು ತಗುಲಿದವರು ಪತ್ತೆಯಾಗಿದ್ದಾರೆ. ಸಾಮಾಜಿಕ ತಾಣದಲ್ಲಿ ಪ್ರತಿ ದಿನ ಕೊರೊನಾ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಹನಿಮೂನ್ಗಾಗಿ ವಿದೇಶಕ್ಕೆ ತೆರಳಿದ್ದ ಚಂದನ್ ಮತ್ತು ನಿವೇದಿತಾ ಬಗ್ಗೆಯೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಸುತ್ತಿದ್ದಾರೆ.
ವಿದೇಶಕ್ಕೆ ತೆರಳಿ ವಾಪಾಸ್ ಆಗಿರುವ ಈ ನವ ದಂಪತಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತದೆಯಾ? ಎಂಬ ಚರ್ಚೆ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕೊರೊನಾ ಪರೀಕ್ಷೆ ಮಾಡಿಸಿ ಎಂದು ಸಲಹೆ ನೀಡುತ್ತಿದ್ದಾರಂತೆ. ಆದರೆ ಈ ಜೋಡಿ ಕೊರೊನಾ ಪರೀಕ್ಷೆ ಮಾಡಿಸುತ್ತಾರಾ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ: ಸ್ಟಾರ್ ನಟನ ಮದುವೆಗೂ ಕುತ್ತು ತಂದಿತೆ ಕೊರೊನಾ?
ಇದನ್ನೂ ಓದಿ: ಗಲ್ಲು ಶಿಕ್ಷೆಗೆ ಗುರಿಯಾದ ವಿಶ್ವದ ಏಕೈಕ ಅಂತರಾಷ್ಟ್ರೀಯ ಕ್ರಿಕೆಟಿಗ ಈತ!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ