HOME » NEWS » Entertainment » CM YEDIYURAPPA ANNOUNCES KARNATAKA FILM CITY AT COST OF RS 500 CRORE ZP

ರಾಕಿಂಗ್ ಸ್ಟಾರ್ ಯಶ್ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ

ಯಶ್ ಅವರ ಮನವಿಗೆ ಸ್ಪಂದಿಸಿರುವ ಸಿಎಂ ಬಿಸ್​ವೈ, 500 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಅತ್ಯುತ್ತಮ ಫಿಲಂ ಸ್ಟುಡಿಯೋ ನಿರ್ಮಿಸುವುದಾಗಿ ಘೋಷಿಸಿದ್ದಾರೆ.

news18-kannada
Updated:March 5, 2020, 3:31 PM IST
ರಾಕಿಂಗ್ ಸ್ಟಾರ್ ಯಶ್ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ
Yash-BSY
  • Share this:
ರಾಜ್ಯದಲ್ಲೇ ಸುಸಜ್ಜಿತ ಫಿಲಂ ಸಿಟಿ ನಿರ್ಮಿಸಬೇಕು ಎಂಬುದು ಚಿತ್ರರಂಗದ ಬಹುದಿನಗಳ ಕನಸು. ಈ ಕನಸನ್ನು ನನಸು ಮಾಡಲು ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ.  

12ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ಸಹ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಫಿಲಂ ಸ್ಟುಡಿಯೋ ಬಗ್ಗೆ ಮನವಿ ಮಾಡಿದ್ದರು.  ಸಿನಿಮೋತ್ಸವದಲ್ಲಿ ಮಾತನಾಡಿದ ಯಶ್, ''ಮುಖ್ಯಮಂತ್ರಿಗಳೇ...ನಮಗೊಂದು ಅತ್ಯುತ್ತಮ ಫಿಲಂ ಸ್ಟುಡಿಯೋ ನಿರ್ಮಿಸಿ ಕೊಡಿ..ಇಡೀ ಜಗತ್ತು ತಿರುಗಿ ನೋಡುವಂತೆ ಮಾಡುತ್ತೇವೆ. ನಮ್ಮ ಹುಡುಗರಿಗೆ ಶಕ್ತಿಯಿದೆ. ಸ್ವಲ್ಪ ಹುರಿದುಂಬಿಸಬೇಕು'' ಎಂದು ಹೇಳಿದ್ದರು.

ಇದೀಗ ಯಶ್ ಅವರ ಮನವಿಗೆ ಸ್ಪಂದಿಸಿರುವ ಸಿಎಂ ಬಿಸ್​ವೈ, 500 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಅತ್ಯುತ್ತಮ ಫಿಲಂ ಸ್ಟುಡಿಯೋ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಇಂದು ನಡೆದ ಬಜೆಟ್​ ಮಂಡನೆಯಲ್ಲಿ ಬರೋಬ್ಬರಿ 500 ಕೋಟಿ ರೂ.ಗಳ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಜಾಗತಿಕ ಗುಣಮಟ್ಟದ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಯಡಿಯೂರಪ್ಪನವರು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ರಾಮನಗರದಲ್ಲಿ ಬೃಹತ್ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮಾತನಾಡಿದ್ದರು. ಹಾಗೆಯೇ ಮಾಜಿ ಸಿಎಂ ಸಿದ್ಧರಾಮಯ್ಯನವರು ಮೈಸೂರು ಭಾಗದಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡಲು ನಿರ್ಧರಿಸಿತ್ತು. ಆದರೆ ಆ ಬಳಿಕ ನಡೆದ ರಾಜಕೀಯ ಬೆಳವಣಿಗೆಗಳಿಂದ ಈ ಯೋಜನೆಯನ್ನು ಕೈಬಿಡಲಾಗಿತ್ತು.

ಇದೀಗ ಸಿಎಂ ಯಡಿಯೂರಪ್ಪನವರು ಬಜೆಟ್​ನಲ್ಲಿ 500 ಕೋಟಿ ವೆಚ್ಚದಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಇದಕ್ಕಾಗಿ ಈಗಾಗಲೇ ಸರ್ಕಾರ ಹೊಸ ಜಾಗದ ಹುಡುಕಾಟಕ್ಕೆ ಮುಂದಾಗಿದೆ. ಮುಖ್ಯಮಂತ್ರಿಗಳ ಈ ಘೋಷಣೆಯಿಂದ ಕನ್ನಡ ಚಿತ್ರರಂಗದ ಸುದೀರ್ಘ ಕನಸು ಈಡೇರುವುದು ಕನ್ಫರ್ಮ್ ಆಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸ್ಯಾಂಡಲ್​ವುಡ್ ಮಂದಿ ಇತರೆ ರಾಜ್ಯಗಳ ಫಿಲಂ ಸ್ಟುಡಿಯೋಗಳನ್ನು ಅವಲಂಭಿಸುವುದು ಕೊನೆಗೊಳ್ಳಲಿದೆ.
Youtube Video

 
First published: March 5, 2020, 3:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories