• Home
 • »
 • News
 • »
 • entertainment
 • »
 • Roopesh Shetty: ನಾನು ಗಡಿನಾಡು ಕನ್ನಡಿಗ ಎಂದಿದ್ದ ರೂಪೇಶ್ ಶೆಟ್ಟಿ ಕುಟುಂಬಕ್ಕೆ ಬೆದರಿಕೆ; ಮಂಗಳೂರಿನಲ್ಲಿ ಕೇಸ್ ದಾಖಲು

Roopesh Shetty: ನಾನು ಗಡಿನಾಡು ಕನ್ನಡಿಗ ಎಂದಿದ್ದ ರೂಪೇಶ್ ಶೆಟ್ಟಿ ಕುಟುಂಬಕ್ಕೆ ಬೆದರಿಕೆ; ಮಂಗಳೂರಿನಲ್ಲಿ ಕೇಸ್ ದಾಖಲು

ರೂಪೇಶ್ ಶೆಟ್ಟಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದವರ ವಿರುದ್ಧ ದೂರು

ರೂಪೇಶ್ ಶೆಟ್ಟಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದವರ ವಿರುದ್ಧ ದೂರು

ರೂಪೇಶ್ ಶೆಟ್ಟಿ, ನಾನು ಗಡಿನಾಡು ಕನ್ನಡಿಗ ಎಂದಿದ್ದಕ್ಕೆ, ರೂಪೇಶ್ ಪೋಷಕರಿಗೆ ಕೆಲವರು ಬೆದರಿಕೆ ಒಡ್ಡಿದ್ದಾರಂತೆ. ಅದಕ್ಕೆ ಅವರು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್​ಗೆ ದೂರು ನೀಡಿದ್ದಾರೆ.

 • News18 Kannada
 • Last Updated :
 • Karnataka, India
 • Share this:

  ಕಲರ್ಸ್ ಕನ್ನಡದಲ್ಲಿ (Colors Kannada) ಪ್ರತಿದಿನ 9.30ಕ್ಕೆ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ (Reality Show) ಬಿಗ್ ಬಾಸ್ (Bigg Boss) ಪ್ರಸಾರವಾಗ್ತಿದೆ. ಹೀಗಾಗಲೇ ಬಿಗ್ ಬಾಸ್ 8 ಸೀಸನ್‍ಗಳು ಯಶಸ್ವಿಯಾಗಿ ಮುಗಿದಿವೆ. ಬಿಗ್ ಬಾಸ್ ಸೀನ್ 09 ವಿಶೇಷವಾಗಿದೆ. ಈ ಬಾರಿ ಬಿಗ್ ಬಾಸ್‍ಗೆ 9 ಜನ ನವೀನರು, 9 ಜನ ಪ್ರವೀಣರು ಎಂಟ್ರಿ ಆಗಿದ್ದರು. ಪ್ರವೀಣರು ಅಂದ್ರೆ ಹೀಗಾಗಲೇ ಹಳೇ ಸೀಸನ್ ಗಳಲ್ಲಿ ಇದ್ದವರು. ಅದರಲ್ಲಿ ಹೆಚ್ಚು ಖ್ಯಾತಿ ಹೊಂದಿದವರು. ವಾದ ಮಾಡುವಂತವರೇ ಹೆಚ್ಚಾಗಿ ಸೆಲೆಕ್ಟ್ ಆಗಿದ್ದರು. ಓಟಿಟಿಯಿಂದ (OTT) ಬಿಗ್ ಬಾಸ್‍ಗೆ ಸಾನ್ಯಾ ಐಯ್ಯರ್, ರೂಪೇಶ್ ಶೆಟ್ಟಿ (Rupesh Shetty), ಆರ್ಯವರ್ಧನ್ ಗುರೂಜಿ, ರಾಕೇಶ್ ಅಡಿಗ ಬಂದಿದ್ದಾರೆ. ರೂಪೇಶ್ ಶೆಟ್ಟಿ ಕನ್ನಡ ರಾಜ್ಯೋತ್ಸವದ (Kannada Rajyotsava) ದಿನ ಗಡಿ ನಾಡು ಕನ್ನಡಿಗ ಎಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.


  ಮಂಗಳೂರಿನ ರೂಪೇಶ್ ಶೆಟ್ಟಿ
  ರೂಪೇಶ್ ಶೆಟ್ಟಿ ಮಂಗಳೂರಿನವರು. ಅದಕ್ಕೆ ಅಲ್ಲಿಯ ಅಭಿಮಾನಿಗಳು ಹೆಚ್ಚು ಇದ್ರು. ಅವರ ಮಾತು, ಆಟ ಎಲ್ಲವನ್ನೂ ಇಷ್ಟ ಪಡ್ತಾ ಇದ್ರು. ರೂಪೇಶ್ ಶೆಟ್ಟಿ ಓಟಿಟಿಯಿಂದ ಇಲ್ಲಿಯ ತನಕ ಬಂದಿದ್ದಾರೆ. ಎಷ್ಟೋ ಬಾರಿ ನಾಮಿನೇಟ್ ಆಗದಾಗ ಜನ ಸೇ ಮಾಡಿ ಉಳಿಸಿದ್ದಾರೆ. ಈಗ ರೂಪೇಶ್ ಶೆಟ್ಟಿಗೆ ಸಂಕಷ್ಟ ಎದುರಾಗಿದೆ.


  ಗಡಿನಾಡ ಕನ್ನಡಿಗ ಎಂದಿದ್ದ ರೂಪೇಶ್ ಶೆಟ್ಟಿ
  ಬಿಗ್ ಬಾಸ್ ಸೀಸನ್ 9 ರಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ದಿನ, ರೂಪೇಶ್ ಶೆಟ್ಟಿ, ನಾನು ಗಡಿನಾಡ ಕನ್ನಡಿಗ ಅಂತ ಹೇಳಿದ್ದರು. ತುಳುನಾಡಿನಲ್ಲಿ ಹೆಸರು ಗಳಿಸಿ, ಈಗ ಗಡಿನಾಡ ಕನ್ನಡಿಗ ಅಂತ ಹೇಳಿರುವುದು ತುಳು ಪ್ರೇಮಿಗಳು ಬೇಸರಗೊಂಡಿದ್ದರು. ಹಲವು ತುಳುವರು ರೂಪೇಶ್ ಶೆಟ್ಟಿ ವಿರುದ್ಧ ನಿಂತಿದ್ದಾರೆ.


  ಇದನ್ನೂ ಓದಿ: BBK Season 09: ಸಾನ್ಯಾ ಅಯ್ಯರ್ ಮಡಿಲಲ್ಲಿ ಮಲಗಿ ಜೋರಾಗಿ ಅತ್ತ ರೂಪೇಶ್


  ರೂಪೇಶ್ ಶೆಟ್ಟಿ ಕುಟುಂಬಕ್ಕೆ ಬೆದರಿಕೆ
  ರೂಪೇಶ್ ಶೆಟ್ಟಿ, ನಾನು ಗಡಿನಾಡು ಕನ್ನಡಿಗ ಎಂದಿದ್ದಕ್ಕೆ, ರೂಪೇಶ್ ಪೋಷಕರಿಗೆ ಕೆಲವರು ಬೆದರಿಕೆ ಒಡ್ಡಿದ್ದಾರಂತೆ. ಅದಕ್ಕೆ ಅವರು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ದೂರು ನೀಡಿದ್ದಾರೆ. ರೂಪೇಶ್ ಶೆಟ್ಟಿ ಕುಟುಂಬದವರು ಆತಂಕದಲ್ಲಿದ್ದಾರೆ.  ರೂಪೇಶ್ ಶೆಟ್ಟಿ ಕನ್ನಡ ರಾಜ್ಯೋತ್ಸವದ ದಿನ ಗಡಿ ನಾಡು ಕನ್ನಡಿಗ ಎಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.


  ರೂಪೇಶ್ ಶೆಟ್ಟಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದವರ ವಿರುದ್ಧ ದೂರು


  ರೂಪೇಶ್ ಶೆಟ್ಟಿ ಹೇಳಿದ್ದೇನು?
  'ನಾನು ಕಲಿತದ್ದು ಕನ್ನಡ ಮೀಡಿಯಂನಲ್ಲಿ. ಆದರೆ ನಾನು ಗಡಿನಾಡ ಕನ್ನಡಿಗ. ನಾನು ಹುಟ್ಟಿದ್ದು ಮಂಗಳೂರಿನಿಂದ 30 ಕಿ.ಮೀ ದೂರದ ಕೇರಳದ ಕಾಸರಗೋಡಿನಲ್ಲಿ. ನಾವು ಗಡಿನಾಡ ಕನ್ನಡಿಗರು. ಕನ್ನಡ ಕಲಿಯಲು ಆಸೆ ಇದ್ದರೂ ಅಲ್ಲಿ ಕಲಿಯೋದು ಕಷ್ಟ. ಅಲ್ಲಿ ಶಾಲೆಯಲ್ಲಿ ಕನ್ನಡ ಕಲಿಸೋ ಮಾಸ್ಟರ್ ಇಲ್ಲ. ಆದರೆ ನಾನು ಕೇರಳದಲ್ಲಿ ಇದ್ದರೂ ಕನ್ನಡ ಮೀಡಿಯಂನಲ್ಲಿ ಕಲಿತಿದ್ದು. ಅಷ್ಟು ಆತ್ಮವಿಶ್ವಾಸವನ್ನು ಕನ್ನಡ ಕಲಿಸಿ ಅಲ್ಲಿನ ಶಿಕ್ಷಕರು ನಮಗೆ ಕೊಟ್ಟಿದ್ದಾರೆ' ಎಂದು ಹೇಳಿದ್ದರು.


  ರೂಪೇಶ್ ಶೆಟ್ಟಿ


  ಇದನ್ನೂ ಓದಿ: BBK Season 09: ದಿವ್ಯಾ ಫೇಕ್ ಎಂದ ರಾಜಣ್ಣ, ಕಣ್ಣೀರಿಟ್ಟ ಉರುಡುಗ!


  ನಮ್ಮ ಬೆಂಬಲ ತುಳುವನಿಗೆ ಹೊರತು, ಗಡಿನಾಡ ಕನ್ನಡಿಗನಿಗೆ ಅಲ್ಲ ಅನ್ನೋ ಪೋಸ್ಟ್ ಕೂಡ ಹರಿದಾಡಿದೆ. ಜೊತೆಗೆ ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ರೂಪೇಶ್ ಶೆಟ್ಟಿಯನ್ನ ಗಡಿನಾಡಿಗೆ ಓಡಿಸಬೇಕು ಅಂತ ಪೋಸ್ಟ್  ಹಾಕಲಾಗಿದೆ.

  Published by:Savitha Savitha
  First published: