“ಮನಮೋಹನ್ ಸಿಂಗ್ ಓರ್ವ ದುರ್ಬಲ ಪ್ರಧಾನಿಯಾಗಿದ್ದರು ಎಂಬುದನ್ನು ವರ್ಣಿಸಲು ಈ ಚಿತ್ರ ಮಾಡಲಾಗಿದೆ”- ಇದು ‘ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್’ ಚಿತ್ರವನ್ನು ನೋಡಿದ ಕೆಲವರ ಅಭಿಪ್ರಾಯ. ಈ ಬಗ್ಗೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಚಿತ್ರಕ್ಕೆ ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾಗಿದೆ.
ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲಾ, “2019ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ‘ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್’ ಚಿತ್ರವನ್ನು ಮಾಡಲಾಗಿದೆ. ಈ ಸಿನಿಮಾ ಮೂಲಕ ಜನರಿಗೆ ತಪ್ಪು ಮಾಹಿತಿ ರಾನೆಯಾಗುತ್ತಿದೆ” ಎಂದಿದ್ದಾರೆ.
ಈ ಚಿತ್ರ ಸಂಪೂರ್ಣವಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಜೀವನದ ಬಗ್ಗೆ ಇದೆ. ಆದಾಗ್ಯೂ ಈ ಬಗ್ಗೆ ಸಿಂಗ್ ಯಾವುದೇ ಹೇಳಿಕೆ ನೀಡಿಲ್ಲ. ಈ ವಿಚಾರದಲ್ಲಿ ಮನಮೋಹನ್ ಸಿಂಗ್ ಅಂತರ ಕಾಯ್ದುಕೊಂಡಿದ್ದಾರೆ. ನಿನ್ನೆ ಅನುಪಮ್ ಖೇರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಕೂಡ ಈಗ ವೈರಲ್ ಆಗಿದೆ.
ಇನ್ನು ಬಿಹಾರ ನ್ಯಾಯಾಲಯ ನಟ ಅನುಪಮ್ ಖೇರ್ ಸೇರಿ 13 ಮಂದಿ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ಆದೇಶ ನೀಡಿದೆ. ಇದು, ಚಿತ್ರಕ್ಕೆ ಮುಳುವಾಗಿ ಪರಿಣಮಿನಿಸಿದೆ.
ಸದ್ಯ ಈ ಚಿತ್ರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವಿಜಯ್ ರತ್ನಾಕರ್ ಗುಟ್ಲೆ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸಂಜಯ್ ಬಾರು ಬರೆದ 'ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್' ಪುಸ್ತಕ ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಈ ಚಿತ್ರದಲ್ಲಿ ಅನುಪಮ್ ಖೇರ್, ಅಕ್ಷಯ್ ಖನ್ನಾ ಮೊದಲಾದವರು ಬಣ್ಣ ಹಚ್ಚಿದ್ದಾರೆ.
ಇದನ್ನೂ ಓದಿ: 'ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್' ಚಿತ್ರಕ್ಕೆ ಕಂಟಕ; ತಂಡದ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ