ಲಾಕ್ಡೌನ್ ಸಡಿಲಗೊಂಡ ನಂತರ ಇದೇ ಬಾಗಿಲು ತೆರೆದ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ ಶೇ 50 ಸೀಟಿಂಗ್ಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಅಂದರೆ ಇಂದಿನಿಂದ ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ ಶೇ 100ರಷ್ಟು ಪ್ರೇಕ್ಷಕರು ಈಗ ಸಿನಿಮಾ ವೀಕ್ಷಿಸಬಹುದಾಗಿದೆ. ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ಎಲ್ಲಾ ಸೀಟ್ಗಳನ್ನ ಭರ್ತಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ಮಾಹಿತಿ ಮತ್ತು ಪ್ರಸರಣ ಇಲಾಖೆ ಮೊನ್ನೆ ಅಂದರೆ ಶನಿವಾರ (ಜ30) ಸಂಜೆಯ ನಂತರ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಲ್ಲಿ ಈ ಅಂಶ ಇದೆ. ಇದರಿಂದಾಗಿ ಚಿತ್ರರಂಗ ನಿರಾಳಗೊಂಡಿದೆ. ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಸರ್ಕಾರ ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಿಸಿತು. ಹಲವು ಅಂಗಡಿ ಮುಂಗಟ್ಟುಗಳು ಸೇರಿದಂತೆ ಸಿನಿಮಾ ಥಿಯೇಟರ್ಗಳನ್ನೂ ಮುಚ್ಚಲಾಯಿತು. ಕೆಲ ತಿಂಗಳ ಬಳಿಕ ಅನೇಕ ವಾಣಿಜ್ಯ ಚಟುವಟಿಕೆಗಳು ಪುನಾರಂಭಗೊಂಡರೂ ಚಿತ್ರಮಂದಿರಗಳಿಗೆ ಬಾಗಿಲು ತೆರೆಯುವ ಅವಕಾಶ ನೀಡಿರಲಿಲ್ಲ. ಅಕ್ಟೋಬರ್ ತಿಂಗಳ ಆರಂಭದಲ್ಲಿ ಶೇ. 50ರ ಸೀಟಿಂಗ್ಗೆ ಅವಕಾಶ ನೀಡಿ ಸಿನಿಮಾ ಪ್ರದರ್ಶನಕ್ಕೆ ಅನುಮತಿ ನೀಡಲಾಗಿತ್ತು.
ಸಿನಿಮಾ ಮಂದಿರಗಳಲ್ಲಿ ಶೇ 50ರಷ್ಟು ಪ್ರೇಕ್ಷಕರಿಗೆ ಮಾತ್ರ ಸಿನಿಮಾ ನೋಡಲು ಅವಕಾಶ ನೀಡಿದ್ದ ಕಾರಣದಿಂದ ದೊಡ್ಡ ದೊಡ್ಡ ಸ್ಟಾರ್ಗಳ ಸಿನಿಮಾಗಳನ್ನು ರಿಲೀಸ್ ಮಾಡಲು ನಿರ್ಮಾಪಕರು ಹಿಂದೆ ಮುಂದೆ ನೋಡುತ್ತಿದ್ದರು. ಆದರೆ ಈಗ ಸ್ಟಾರ್ ನಟರ ಸಿನಿಮಾಗಳ ರಿಲೀಸ್ ದಿನಾಂಕ ಪ್ರಕಟವಾಗಿದೆ. ಜೊತೆಗೆ ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಬಾಗಿಲು ತೆರೆದಿವೆ.
ಇನ್ನು ಲಾಕ್ಡೌನ್ ಸಡಿಗೊಂಡು ಸಿನಿಮಾ ಪ್ರದರ್ಶನ ಆರಂಭವಾದರೂ ಸಹ ಜನ ಮಾತ್ರ ಊಹಿಸಿದ ಮಟ್ಟದಲ್ಲಿ ಚಿತ್ರ ವೀಕ್ಷಣೆಗೆ ಬರುತ್ತಿಲ್ಲ. ಇಲ್ಲಿಯವರೆಗೂ ಯಾವುದೇ ಹೊಸ ಸಿನಿಮಾ ರಿಲೀಸ್ ಆದರೂ ಚಿತ್ರಮಂದಿರ ತುಂಬಿದ್ದು ಅಲ್ಲೊಂದು ಇಲ್ಲೊಂದು ಮಾತ್ರ. ಹೀಗಿರುವಾಗ ಪೂರ್ಣ ಪ್ರಮಾಣದಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ ಸಿಕ್ಕಿರುವ ಹಿನ್ನಲೆಯಲ್ಲಿ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿರಲಿದೆ ಅನ್ನೋದು ಊಹಿಸಲು ಸಾಧ್ಯವಿಲ್ಲ.
ಇದನ್ನೂ ಓದಿ: ಮಾದಕ ನೋಟದಿಂದಲೇ ಮತ್ತೇರಿಸುತ್ತಿರುವ ಸ್ಯಾಂಡಲ್ವುಡ್ ನಟಿ ನಿತ್ಯಾ ಮೆನನ್..!
ನಿನ್ನೆಯ ವರೆಗೆ ಒಬ್ಬ ಪ್ರೇಕ್ಷಕನ ಪಕ್ಕದಲ್ಲಿ ಒಂದು ಆಸನವನ್ನು ಖಾಲಿ ಬಿಡಬೇಕಾಗಿತ್ತು. ಆದರೆ ಇಂದಿನಿಂದ ಎಲ್ಲ ಆಸನಗಳಲ್ಲೂ ಪ್ರೇಕ್ಷಕರು ಒಟ್ಟಿಗೆ ಕುಳಿತು ಸಿನಿಮಾ ನೋಡಬಹುದಾಗಿದೆ. ಆದರೆ, ಚಿತ್ರಮಂದಿರಗಳಲ್ಲಿ ಕೊರೋನಾ ಸೋಂಕು ಹರಡುವ ಅಪಾಯ ಹೆಚ್ಚಿದ್ದು, ಅದಕ್ಕಾಗಿ ಕಡ್ಡಾಯವಾಗಿ ಮಾರ್ಗಸೂಚಿಯಲ್ಲಿ ತಿಳಿಸಿರುವ ಹಲವು ಮುಂಜಾಗ್ರತಾ ಕ್ರಮಗಳನ್ನು ಚಿತ್ರಮಂದಿರಗಳ ಸಿಬ್ಬಂದಿ ಹಾಗೂ ಪ್ರೇಕ್ಷಕರು ಪಾಲಿಸಲೇಬೇಕಾಗಿದೆ.
ಇದನ್ನೂ ಓದಿ: Happy Birthday Brahmanandam: 65ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಟಾಲಿವುಡ್ನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ..!
ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಶೇ 100ರಷ್ಟು ಪ್ರೇಕ್ಷಕರಿಗೆ ಸಿನಿಮಾ ವೀಕ್ಷಿಸಲು ಕೇಂದ್ರ ಸರ್ಕಾರ ಅನುಮತಿ ನೀಡುವಂತೆ ಕೆಲವು ನಿರ್ದೇಶಕರು ಹಾಗೂ ನಿರ್ಮಾಪಕರು ಒತ್ತಾಯಿಸುತ್ತಿದ್ದರು. ಆಗ, ಸಾಕಷ್ಟು ಮಂದಿ ಕೊರೋನಾ ಸೋಂಕಿನ ಭೀತಿ ಕಡಿಮೆಯಾಗುವರೆಗೂ ಪೂರ್ಣ ಪ್ರಮಾಣ ಸೀಟಿಂಗ್ ವ್ಯವಸ್ಥೆಗೆ ಅನುಮತಿ ನೀಡಬಾರದು ಎಂದಿದ್ದರು. ಅಲ್ಲದೆ ಒತ್ತಾಯಿಸುತ್ತಿದ್ದ ಸಿನಿರಂಗದವರನ್ನು ತರಾಟೆಗೆ ತೆಗೆದುಕೊಂಡಿದ್ದರು.
View this post on Instagram
ಥಿಯೇಟರ್ಗಳಲ್ಲಿ ಆಗಮನ ಮತ್ತು ನಿರ್ಗಮನ ದ್ವಾರಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆಯನ್ನ ಕಡ್ಡಾಯವಾಗಿ ಮಾಡಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಆರೋಗ್ಯ ಸೇತು ಆಪ್ ಬಳಸಲು ಉತ್ತೇಜಿಸಬೇಕು. ಆನ್ಲೈನ್ ಟಿಕೆಟ್ ಬುಕಿಂಗ್ಗೆ ಹೆಚ್ಚು ಒತ್ತು ನೀಡಬೇಕು. ಪ್ರತೀ ಶೋ ಬಳಿಕ ಆಡಿಟೋರಿಯಂ ಸ್ಯಾನಿಟೈಸ್ ಮಾಡಬೇಕು. ಇವೇ ಮುಂತಾದ ಹಲವು ಅಂಶಗಳು ಮಾರ್ಗಸೂಚಿಯಲ್ಲಿವೆ. ಹವಾ ನಿಯಂತ್ರಿತ ಚಿತ್ರಮಂದಿರಗಳಲ್ಲಿ ಎಸಿ ನಿಯಮಿತವಾಗಿರಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ