Explained: ಅಂದು ಅಣ್ಣಾವ್ರು-ಇಂದು ಸುದೀಪ್​! ಹಳೆಯ ದಿನಗಳನ್ನು ನೆನಪಿಸಿದ ಹಿರಿಯ ಪತ್ರಕರ್ತ

ಈ ನಡುವೆ ಹಿರಿಯ ಸಿನಿಮಾ ಪತ್ರಕರ್ತ ಗಣೇಶ್ ಕಾಸರಗೋಡು, ಈ ಹಿಂದಿವಾಲಾಗಳು ದಕ್ಷಿಣ ಭಾರತದ ನಟರ ವಿರುದ್ಧ, ಭಾಷೆಯ ವಿರುದ್ಧ ತಮ್ಮ ಅಸಹನೆ ವ್ಯಕ್ತಪಡಿಸಿರುವುದು ಇದು ಮೊದಲೇನಲ್ಲ ಎಂದಿದ್ದಾರೆ. 

ಡಾ.ರಾಜ್​​ಕುಮಾರ್​, ಕಿಚ್ಚ ಸುದೀಪ್​

ಡಾ.ರಾಜ್​​ಕುಮಾರ್​, ಕಿಚ್ಚ ಸುದೀಪ್​

  • Share this:
ಭಾರತದ ರಾಷ್ಟ್ರ ಭಾಷೆ (Indian National Language) ಯ ಬಗ್ಗೆ ಸೂಪರ್ ಸ್ಟಾರ್ ಕಿಚ್ಚ ಸುದೀಪ್ (Kiccha Sudeep ) ಅವರ ಕಾಮೆಂಟ್‌ಗೆ ಅಜಯ್ ದೇವಗನ್ (Ajay Devgan) ಟ್ವಿಟರ್ (Twitter) ನಲ್ಲಿ ಪ್ರತಿಕ್ರಿಯೆ ನೀಡಿದ್ದರು. ಹಿಂದಿ ನಮ್ಮ ರಾಷ್ಟ್ರಭಾಷೆಯಲ್ಲ ಎಂದು ಸುದೀಪ್ ಹೇಳಿದ ಮಾತಿಗೆ, ಹಾಗಾದರೆ ಹಿಂದಿ (Hindi) ಭಾಷೆಯಲ್ಲೇಕೆ ನಿಮ್ಮ ಚಿತ್ರಗಳನ್ನು ಡಬ್ (Dub) ಮಾಡುತ್ತೀರಿ ಎಂದು ಸಂಪೂರ್ಣ ಹಿಂದಿಯಲ್ಲಿಯೇ ಬರೆದ ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದರು. ಆದರೆ, ಅಜಯ್ ದೇವಗನ್ ಅವರ ಟ್ವೀಟ್ ಗೆ  (Tweet) ಸುದೀಪ್ ಕೂಡ ತಕ್ಕ ಉತ್ತರ ನೀಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಯಾಯ್ತು. ಪ್ರತಿಯೊಬ್ಬ ಕನ್ನಡಿಗನು ಕಿಚ್ಚ ಸುದೀಪ್​ ಹೇಳಿದ್ದು ಸರಿ ಎಂದು ಅವರ ಬೆಂಬಲಕ್ಕೆ ನಿಂತಿದ್ದಾರೆ. ಸಿಎಂ ಬಸವರಾಜ್​ ಬೊಮ್ಮಾಯಿ (CM Basavaraj Bommai) , ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಕಿಚ್ಚ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಹಿಂದಿವಾಲಾಗಳು ಹಳೆಯ ದಿನ ನೆನೆದ ಹಿರಿಯ ಪತ್ರಕರ್ತ!

ಈ ನಡುವೆ ಹಿರಿಯ ಸಿನಿಮಾ ಪತ್ರಕರ್ತ ಗಣೇಶ್ ಕಾಸರಗೋಡು, ಈ ಹಿಂದಿವಾಲಾಗಳು ದಕ್ಷಿಣ ಭಾರತದ ನಟರ ವಿರುದ್ಧ, ಭಾಷೆಯ ವಿರುದ್ಧ ತಮ್ಮ ಅಸಹನೆ ವ್ಯಕ್ತಪಡಿಸಿರುವುದು ಇದು ಮೊದಲೇನಲ್ಲ ಎಂದಿದ್ದಾರೆ. ಡಾ ರಾಜ್‌ಕುಮಾರ್ ಬಗ್ಗೆ ಹಿಂದಿಯ ಖ್ಯಾತ ನಟರೊಬ್ಬರ ಕುಮ್ಮಕ್ಕಿನಿಂದ ಹಿಂದಿ ಪತ್ರಿಕೆಯೊಂದು ಹೀನವಾಗಿ ವರದಿ ಮಾಡಿದ್ದು, ಆ ನಂತರ ಆದ ಬೆಳವಣಿಗೆಗಳ ಬಗ್ಗೆ ಗಣೇಶ್ ಕಾಸರಗೋಡು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

1943ರ ಕಥೆ ಬಿಚ್ಚಿಟ್ಟ ಗಣೇಶ್​ ಕಾಸರಗೋಡು!

''ಇದು 1983ನೇ ಇಸವಿಯ ಸ್ಟೋರಿ. ಗೋಕಾಕ್ ಚಳುವಳಿ ಪರಾಕಾಷ್ಠೆ ತಲುಪಿದ ಸಂದರ್ಭ. ಕನ್ನಡಿಗರ ಆರಾಧ್ಯ ದೈವ ರಾಜಕುಮಾರ್ ಅವರನ್ನು ಇದ್ದಕ್ಕಿದ್ದಂತೆಯೇ ಮುಂಬಯಿಯ ಪತ್ರಿಕೆಯೊಂದು "ಮಿನಿ ಹಿಟ್ಲರ್" ಎಂದು ಆರೋಪಿಸಿತು! ಆ ಪತ್ರಿಕೆಯ ಹಿಂದೆ ಬಾಲಿವುಡ್ ಬಾದ್'ಷಾ ಅಮಿತಾಬ್ ಬಚ್ಚನ್ ಇದ್ದನೆಂಬ ಗುಸುಗುಸು ಸುದ್ದಿ ಹರಡಿತು. ಸುದ್ದಿ ಕಾಡ್ಗಿಚ್ಚಾಯಿತು. ಇಡಿಯ ಕರ್ನಾಟಕ ಹೊತ್ತಿ ಉರಿಯಿತು....ಇದಕ್ಕೆಲ್ಲಾ ಕಾರಣವಾದುದೊಂದು ವರದಿ. ಆ ವರದಿ ಪ್ರಕಟವಾದದ್ದು "ಚಿತ್ರದೀಪ" ಎಂಬ ಹೆಸರಿನ ಸಿನೆಮಾ ಪತ್ರಿಕೆಯಲ್ಲಿ.'

ಗೋಕಾಕ್​ ಚಳುವಳಿ ವೇಳೆ ಬೇರೆ ಭಾಷೆ ಸಿನಿಮಾಗಳಿಗೆ ಸಮಸ್ಯೆ!

''ಡಾ.ರಾಜಕುಮಾರ್ ಹೀಗೆ ಕನ್ನಡದ ಗೋಕಾಕ್ ದಂಡಯಾತ್ರೆಗೆ ಹೊರಟಾಗ ಕೆಲವು ಪರಭಾಷಾ ಚಿತ್ರಗಳಿಗೆ ತೊಂದರೆ, ಕಿರಿ ಕಿರಿಯುಂಟಾದದ್ದು ನಿಜ. ಹಿಂದಿ ಮಾತ್ರವಲ್ಲ ತಮಿಳು, ತೆಲುಗು, ಮಲಯಾಳಂ ಚಿತ್ರಗಳಿಗೂ ತೊಂದರೆಯಾಯಿತು. ಕನ್ನಡಕ್ಕಾಗಿ ಹೊರಾಡುವುದೆಂದರೆ ಪರಭಾಷಾ ಚಿತ್ರಗಳನ್ನು ಧಿಕ್ಕರಿಸುವುದೆಂದರ್ಥವಲ್ಲ. ಆದರೆ ಅನಿವಾರ್ಯವಾಗಿ ಇಂಥಾ ಪ್ರಸಂಗಗಳು ನಡೆದು ಬಿಡುತ್ತವೆ. ಇದಕ್ಕೆ ಇಡಿಯ ಹೋರಾಟದ ನೇತೃತ್ವ ವಹಿಸಿದವರೇ ಕಾರಣ ಎಂಬ ತೀರ್ಮಾನಕ್ಕೆ ಬರುವುದು ನ್ಯಾಯ ಸಮ್ಮತವಲ್ಲ. ಕನ್ನಡ ಚಿತ್ರಗಳಿಗೆ ಸಿಗದ ಥಿಯೇಟರುಗಳ ಮೇಲೆ ಚಳುವಳಿಗಾರರು ಕಣ್ಣಿಟ್ಟಿದ್ದರಲ್ಲಿ ಆಶ್ಚರ್ಯವಿಲ್ಲ. ಆದರೆ ಈ ನಡುವೆ ಬೆಂಕಿಗೆ ತುಪ್ಪ ಸುರಿಸುವಂಥಾ ಕೆಲವು ಘಟನೆಗಳು ನಡೆದೇ ಹೋದುವು. ಅಮಿತಾಬ್ ಬಚ್ಚನ್ ಚಿತ್ರ ತೆರೆ ಕಾಣಬೇಕಿದ್ದ ಚಿತ್ರ ಮಂದಿರವೊಂದರಲ್ಲಿ ಡಾ.ರಾಜಕುಮಾರ್ ಅವರ ಚಿತ್ರ ತೆರೆ ಕಂಡದ್ದೇ ಈ ಎಲ್ಲ ಅನಾಹುತಗಳಿಗೆ ಕಾರಣವಾಯಿತು. ಇದು ಉದ್ದೇಶ ಪೂರ್ವಕವಾಗಿ ನಡೆದದ್ದಲ್ಲ. ಅಮಿತಾಬ್ ಬಚ್ಚನ್ ಚಿತ್ರದ ರೀಲುಗಳು ಬಾರದಿರುವುದಕ್ಕೋ ಅಥವಾ ಬೇರೆ ಯಾವುದೋ ಕಾರಣಕ್ಕೋ ರಾಜ್ ಚಿತ್ರ ಆ ಥಿಯೇಟರ್'ನಲ್ಲಿ ತೆರೆ ಕಂಡದ್ದು ನಿಜ. ಗಲಾಟೆ, ದೊಂಬಿ ಶುರುವಾದದ್ದೇ ಇಲ್ಲಿಂದ''

ಡಾ.ರಾಜಕುಮಾರ್ ಖ್ಯಾತಿ ಉತ್ತುಂಗಕ್ಕೇರಿತ್ತು

''ಗೋಕಾಕ್ ಚಳುವಳಿ ಮುಗಿಲು ಮುಟ್ಟಿದ ದಿನಗಳವು. ಡಾ.ರಾಜಕುಮಾರ್ ಖ್ಯಾತಿ ಉತ್ತುಂಗಕ್ಕೇರಿತ್ತು. ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮಾಡಿ ಕನ್ನಡ ಭಾಷಾ ಜಾಗೃತಿಯುಂಟು ಮಾಡಿದ ವೀರ ಕನ್ನಡಿಗನೆನ್ನುವ ಹಿರಿಮೆ. ಇಡಿಯ ಕನ್ನಡ ಚಿತ್ರರಂಗವೇ ಈ ಹಿರಿಯಣ್ಣನ ಜೊತೆ ಗೋಕಾಕ್ ಚಳುವಳಿಗೆ ಹೆಗಲು ಕೊಟ್ಟಿತ್ತು. ಊರಿಂದೂರಿಗೆ ಪ್ರಯಾಣಿಸುತ್ತಿರುವಾಗ ಜನಜಾತ್ರೆ. ಅದೊಂದು ವೈಭವದ ದಿನಗಳು. ರಾಜಕುಮಾರ ಅಂದರೆ ಮನೆ ಮಾತು. ಹರಸಲು, ಮಾತಾಡಿಸಲು, ಮೈ ಮುಟ್ಟಲು ಬಂದು ಸೇರುವ ಮಂದಿ "ಅಣ್ಣಾವ್ರ"ನ್ನು ದೇವರೆಂದು ನಂಬಿದ ದಿನಗಳವು. ಕೆಲವರಿಗೆ "ಅಣ್ಣ", ಕೆಲವರಿಗೆ "ಕಣ್ಮಣಿ", ಇನ್ನೂ ಕೆಲವರಿಗೆ ಸಾಕ್ಷಾತ್ "ದೇವ್ರು"

''ಇಂಥಾ ಹೊತ್ತಿನಲ್ಲೇ ಹಿಂದಿ ಚಿತ್ರರಂಗದ ಪ್ರಾತಿನಿಧಿಕ ಪತ್ರಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾದ "ಟ್ರೇಡ್ ಗೈಡ್" ಪತ್ರಿಕೆಯಲ್ಲೊಂದು ಸುದ್ದಿ ಪ್ರಕಟವಾಯಿತು. ಅದೊಂದು ಸ್ಫೋಟಕ ಸುದ್ದಿ. ಆದರೆ ಆ ಪತ್ರಿಕೆಗೆ ಓದುಗರೇ ಇರಲಿಲ್ಲ. ಏಕೆಂದರೆ ಅದು ಹಿಂದಿ ಚಿತ್ರರಂಗದ ವ್ಯಾವಹಾರಿಕ ಪತ್ರಿಕೆ! ಇಂಥಾದ್ದೊಂದು ಪತ್ರಿಕೆ ಪ್ರಕಟವಾಗುತ್ತಿದೆ ಎನ್ನುವ ಬಗ್ಗೆ ಯಾರಿಗೂ ಮಾಹಿತಿ ಇರಲಿಲ್ಲ! ಅದು ಹಿಂದಿ ಚಿತ್ರರಂಗದ ಇಂಗ್ಲೀಷ್ ಪತ್ರಿಕೆ. ಬಾಲಿವುಡ್'ನ ಆಗುಹೋಗು, ಲಾಭ ನಷ್ಟಗಳ ಲೆಕ್ಕಾಚಾರವನ್ನು ಒಪ್ಪಿಸುವ ಉದ್ಯಮದ ಪತ್ರಿಕೆ. ಹೀಗಾಗಿ ಜನ ಸಾಮಾನ್ಯರಿಗೆ ಅದು ಬೇಕಾಗಿರಲಿಲ್ಲ''

ಇದನ್ನೂ ಓದಿ: Ajay Devgn ವಿರುದ್ಧ 'ದಳಪತಿ' ಗರಂ, ಕಿಚ್ಚನ ಕೆಚ್ಚಿನ ನುಡಿಗೆ ಕುಮಾರಸ್ವಾಮಿ ಸಾಥ್​!

ಅಣ್ಣಾವ್ರನ್ನು ಹಿಟ್ಲರ್​ ಎಂದಿದ್ದ ಹಿಂದಿ ಪತ್ರಿಕೆ!

''ಆ ಕಾಲವೂ ಕೂಡಿ ಬಂತೆನ್ನಿ! "ಟ್ರೇಡ್ ಗೈಡ್" ಎಂಬ ಈ ಪುಟ್ಟ ಪತ್ರಿಕೆ, ಹೆಚ್ಚು ಸರ್ಕ್ಯುಲೇಶನ್ ಇಲ್ಲದ ಪತ್ರಿಕೆ ಮುಂದೆ ಯಾವ ಮಟ್ಟದಲ್ಲಿ ಸುದ್ದಿ ಮಾಡಿತೆಂದರೆ ಅದನ್ನು ವಿವರಿಸಲು ಪದಗಳಿಲ್ಲ! ಇಷ್ಟಕ್ಕೂ ಆ ಪತ್ರಿಕೆಯಲ್ಲಿ ಪ್ರಕಟವಾದದ್ದಾದರೂ ಏನು? "ರಾಜಕುಮಾರ್: ಮಿನಿ ಹಿಟ್ಲರ್" ಎನ್ನುವ ಟೈಟಲ್'ನಲ್ಲಿ ಪ್ರಕಟವಾದ ಸುದ್ದಿ ಹೀಗಿತ್ತು : "ಗೋಕಾಕ್ ವರದಿ ಜಾರಿ ಹಿನ್ನೆಲೆಯಲ್ಲಿ ನಡೆದ ಚಳುವಳಿಯ ನೇತೃತ್ವ ವಹಿಸಿದ್ದ ಡಾ.ರಾಜಕುಮಾರ್ ಪರಭಾಷಾ ಚಿತ್ರಗಳಿಗೆ ಕಂಟಕಪ್ರಾಯರಾಗಿದ್ದಾರೆ ಮತ್ತು ಅವರು ಸಾಕ್ಷಾತ್ ಮಿನಿ ಹಿಟ್ಲರ್ ಥರ ವರ್ತಿಸುತ್ತಿದ್ದಾರೆ...." ಎನ್ನುವುದು ಆ "ಟ್ರೇಡ್ ಗೈಡ್" ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯ ಸಾರ. ನಂತರ ತಿಳಿದು ಬಂದ ಅಚ್ಚರಿ ಹುಟ್ಟಿಸುವ ವಿಷಯವೆಂದರೆ ಈ ಸುದ್ದಿಯ ಹಿನ್ನೆಲೆಯಲ್ಲಿ ಮುಂಬಯಿ ಬಾದ್'ಷಾ ಅಮಿತಾಬ್ ಬಚ್ಚನ್ ಇದ್ದಾರೆ ಎನ್ನುವುದು! ಇದಕ್ಕೂ ಒಂದು ಕಾರಣವಿದೆ : "ಟ್ರೇಡ್ ಗೈಡ್" ಪತ್ರಿಕೆಗೂ ಅಮಿತಾಬನಿಗೂ ಅವಿನಾಭಾವ ಸಂಬಂಧವಿದೆ ಮತ್ತು ಈ ಸಂಬಂಧದಿಂದಾಗಿಯೇ ಪರೋಕ್ಷವಾಗಿ ಅದೇ ಅಮಿತಾಬನೇ ನಮ್ಮ ರಾಜಕುಮಾರ್ ವಿರುದ್ಧ ಎತ್ತಿ ಕಟ್ಟಲೆಂದೇ ಈ ಸುದ್ದಿಯನ್ನು ಬರೆಸಿದ್ದಾನೆ ಎನ್ನುವ ವದಂತಿ ಕೂಡಾ ಹರಡಿತು''

ಗೋಕಾಕ್ ಚಳವಳಿ ಸಂದರ್ಭ ಪರಭಾಷೆ ಚಿತ್ರಗಳಿಗೆ ಸಮಸ್ಯೆ!

''ಡಾ.ರಾಜಕುಮಾರ್ ಹೀಗೆ ಕನ್ನಡದ ಗೋಕಾಕ್ ದಂಡಯಾತ್ರೆಗೆ ಹೊರಟಾಗ ಕೆಲವು ಪರಭಾಷಾ ಚಿತ್ರಗಳಿಗೆ ತೊಂದರೆ, ಕಿರಿ ಕಿರಿಯುಂಟಾದದ್ದು ನಿಜ. ಹಿಂದಿ ಮಾತ್ರವಲ್ಲ ತಮಿಳು, ತೆಲುಗು, ಮಲಯಾಳಂ ಚಿತ್ರಗಳಿಗೂ ತೊಂದರೆಯಾಯಿತು. ಕನ್ನಡಕ್ಕಾಗಿ ಹೊರಾಡುವುದೆಂದರೆ ಪರಭಾಷಾ ಚಿತ್ರಗಳನ್ನು ಧಿಕ್ಕರಿಸುವುದೆಂದರ್ಥವಲ್ಲ. ಆದರೆ ಅನಿವಾರ್ಯವಾಗಿ ಇಂಥಾ ಪ್ರಸಂಗಗಳು ನಡೆದು ಬಿಡುತ್ತವೆ. ಇದಕ್ಕೆ ಇಡಿಯ ಹೋರಾಟದ ನೇತೃತ್ವ ವಹಿಸಿದವರೇ ಕಾರಣ ಎಂಬ ತೀರ್ಮಾನಕ್ಕೆ ಬರುವುದು ನ್ಯಾಯ ಸಮ್ಮತವಲ್ಲ. ಕನ್ನಡ ಚಿತ್ರಗಳಿಗೆ ಸಿಗದ ಥಿಯೇಟರುಗಳ ಮೇಲೆ ಚಳುವಳಿಗಾರರು ಕಣ್ಣಿಟ್ಟಿದ್ದರಲ್ಲಿ ಆಶ್ಚರ್ಯವಿಲ್ಲ. ಆದರೆ ಈ ನಡುವೆ ಬೆಂಕಿಗೆ ತುಪ್ಪ ಸುರಿಸುವಂಥಾ ಕೆಲವು ಘಟನೆಗಳು ನಡೆದೇ ಹೋದುವು. ಅಮಿತಾಬ್ ಬಚ್ಚನ್ ಚಿತ್ರ ತೆರೆ ಕಾಣಬೇಕಿದ್ದ ಚಿತ್ರ ಮಂದಿರವೊಂದರಲ್ಲಿ ಡಾ.ರಾಜಕುಮಾರ್ ಅವರ ಚಿತ್ರ ತೆರೆ ಕಂಡದ್ದೇ ಈ ಎಲ್ಲ ಅನಾಹುತಗಳಿಗೆ ಕಾರಣವಾಯಿತು. ಇದು ಉದ್ದೇಶ ಪೂರ್ವಕವಾಗಿ ನಡೆದದ್ದಲ್ಲ. ಅಮಿತಾಬ್ ಬಚ್ಚನ್ ಚಿತ್ರದ ರೀಲುಗಳು ಬಾರದಿರುವುದಕ್ಕೋ ಅಥವಾ ಬೇರೆ ಯಾವುದೋ ಕಾರಣಕ್ಕೋ ರಾಜ್ ಚಿತ್ರ ಆ ಥಿಯೇಟರ್'ನಲ್ಲಿ ತೆರೆ ಕಂಡದ್ದು ನಿಜ. ಗಲಾಟೆ, ದೊಂಬಿ ಶುರುವಾದದ್ದೇ ಇಲ್ಲಿಂದ''

ಬಚ್ಚನ್​ ಪೊಸ್ಟರ್​​ಗಳಿಗೆ ಬೆಂಕಿ ಹಚ್ಚದ್ದ ಕನ್ನಡಿಗರು!

''ಇದನ್ನೆಲ್ಲ ಇಟ್ಟುಕೊಂಡು "ಚಿತ್ರದೀಪ" ಪತ್ರಿಕೆ ಒಂದು ವರದಿಯನ್ನು ಪ್ರಕಟಿಸಿದ್ದೇ ತಡ ಕನ್ನಡದ ಹೋರಾಟಗಾರರಿಗೆ ಒಂದು ಪ್ರಬಲ ಅಸ್ತ್ರ ದೊರೆತಂತಾಯಿತು.. "ಚಿತ್ರದೀಪ" ಮಾರುಕಟ್ಟೆಗೆ ಹೋಯಿತು. ಅಲ್ಲೋಲ ಕಲ್ಲೋಲ. ಕರ್ನಾಟಕದಾದ್ಯಂತ ಹರಡಿಕೊಂಡಿದ್ದ ರಾಜ್ ಅಭಿಮಾನಿಗಳ ಸಂಘದ ಕಾರ್ಯಕರ್ತರು ರೊಚ್ಚಿಗೆದ್ದರು. ತಮ್ಮ "ದೊರೆ"ಯನ್ನು ಈ ರೀತಿ ಹೀಯಾಳಿಸಲು ಆ "ಹಿಂದಿದೊರೆ"ಗೆ ಹೇಗಾದರೂ ಧೈರ್ಯ ಬಂತೋ ಎನ್ನುವ ಉದ್ವೇಗ. ಕ್ರಮೇಣ ಅಲ್ಲಲ್ಲಿ ಚಳುವಳಿಯ ರೂಪುರೇಷೆ ಕಾಣಿಸಿಕೊಂಡಿತು. ಕನ್ನಡ ಸಂಘಟನೆಗಳು ರಾಜ್ ಅಭಿಮಾನಿಗಳ ಸಂಘದ ಜೊತೆ ಕೈ ಜೋಡಿಸಿದುವು. ಆಗ ತಾನೇ ಗೋಕಾಕ್ ವರದಿ ಜಾರಿಯ ವಿಷಯದಲ್ಲಿ ಕರ್ನಾಟಕದಾದ್ಯಂತ ಕನ್ನಡದ ಕಹಳೆ ಊದಿದ ರಾಜ್ ಪರವಾಗಿ ಇಡಿಯ ಕರ್ನಾಟಕದ ಕನ್ನಡಿಗರು ಎದ್ದು ನಿಂತರು. ಅಮಿತಾಬನ ಪೋಸ್ಟರ್'ಗಳಿಗೆ ಸೆಗಣಿ ಹಚ್ಚಲಾಯಿತು! ಬ್ಯಾನರ್ ಚಿಂದಿಯಾದುವು"

ಇದನ್ನೂ ಓದಿ: ಮುದ್ದಾಗಿ ಸಲಾಂ ರಾಕಿ ಭಾಯ್ ಎಂದ ಐರಾ, ಮಗಳ ವಿಡಿಯೋ ಕಂಡು ಯಶ್​ ಫುಲ್​ ಖುಷ್​!

ಅಂದು ಅಣ್ಣಾವ್ರು - ಇಂದು ಕಿಚ್ಚ ಸುದೀಪ್​!

''ಅಂದಹಾಗೆ, ಈಗಲೂ ನಡೆಯುತ್ತಿರುವುದೇನು? ಅದೇ ಭಾಷಾ ವೈಷಮ್ಯ, ಅದೇ ಗಡಿ ತಂಟೆ, ಅದೇ ಗಲಭೆ, ಅದೇ ಗೊಂದಲ. ಬದಲಾಗೋದು ಯಾವಾಗ? ಹಿಂದಿಯ ಅಜಯ್ ದೇವಗನ್ ಎಂಬ ನಟ ಸುಮ್ಮನೇ ಇರಲಾರದೇ ಮೈಮೇಲೆ ಇರುವೆ ಬಿಟ್ಟುಕೊಂಡಿದ್ದಾನೆ! ನಮ್ಮ ಅಭಿಮಾನದ ನಟ ಸುದೀಪ್ ಠಕ್ಕರ್ ಕೊಟ್ಟಿದ್ದಾರೆ. ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮುಂದೇನಾಗುವುದೋ ಕಾದು ನೋಡಬೇಕಾಗಿದೆ. ಕೊನೆಯಲ್ಲಿ ಒಂದು ಪುಟ್ಟ ಮಾಹಿತಿ ನಿಮಗಾಗಿ : ಅಂದು "ಚಿತ್ರದೀಪ" ಪತ್ರಿಕೆಯಲ್ಲಿ "ಟ್ರೇಡ್ ಗೈಡ್" ಪತ್ರಿಕೆಯ ಸ್ಫೋಟಕ ಸುದ್ದಿಯನ್ನು ಕನ್ನಡಕ್ಕೆ ಅನುವಾದ ಮಾಡಿ ಪ್ರಕಟಿಸಿದ್ದು ಬೇರೆ ಯಾರೂ ಅಲ್ಲ, ಅಂದಿನ ಯುವ ಪತ್ರಕರ್ತರಾದ ಮತ್ತು ಇಂದಿನ ಹಿರಿಯ ಪತ್ರಕರ್ತರಾದ ಗಣೇಶ್ ಕಾಸರಗೋಡು ಹಾಗೂ ಬಿ.ಎನ್.ಸುಬ್ರಹ್ಮಣ್ಯ''
Published by:Vasudeva M
First published: