Gaalipata 2: ಭಟ್ರು ಜೊತೆ ಗಣಿ ಬಿಟ್ಟ ಗಾಳಿಪಟ-2 ಸೂಪರ್​ ಹಿಟ್​; ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಕಲೆಕ್ಷನ್​

ರಾಜ್ಯದಲ್ಲಿ 700 ಶೋ, ಹೊರ ರಾಜ್ಯಗಳಲ್ಲಿ 200, ವಿದೇಶಗಳಲ್ಲಿ 250 ಶೋ ಸೇರಿ ಮೊದಲ ದಿನವೇ 1000ಕ್ಕೂ ಅಧಿಕ ಶೋಗಳಲ್ಲಿ 'ಗಾಳಿಪಟ'-2 ಪ್ರದರ್ಶನ ಕಂಡದೆ. ಪ್ರೀಮಿಯರ್‌ ಶೋಗಳ ಕಲೆಕ್ಷನ್ ಕೂಡ ಸೇರಿ ಮೊದಲ ದಿನ ಅಂದಾಜು 15 ಕೋಟಿ ರೂ. ಅಧಿಕ ಕಲೆಕ್ಷನ್ ಮಾಡಿರುವ ಸಾಧ್ಯತೆಯಿದೆ.

ಗಾಳಿಪಟ 2

ಗಾಳಿಪಟ 2

  • Share this:
ನಿರ್ದೇಶಕ ಯೋಗರಾಜ್ ಭಟ್ (Director Yogaraj Bhat )​​ ಹಾಗೂ ಗೋಲ್ಡನ್​​ ಸ್ಟಾರ್ ಗಣೇಶ್ (Golden Star Ganesh) ಕಾಂಬಿನೇಷನ್​ ​ ತೆರೆ ಮೇಲೆ ಮತ್ತೆ ಮೋಡಿ ಮಾಡಿದೆ. ಆಗಸ್ಟ್​ 12 ರಂದು ಕರ್ನಾಟಕ ಸೇರಿದಂತೆ, ಹೊರ ರಾಜ್ಯ ಹಾಗೂ ದೇಶ ವಿದೇಶಗಳಲ್ಲೂ ಗಾಳಿಪಟ-2 ಚಿತ್ರ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣ್ತಿದೆ. ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ (Box Office) ಗಾಳಿಪಟ-2 ಚಿತ್ರದ ಕಲೆಕ್ಷನ್​ ಸಖತ್ ಆಗಿಯೇ ಸದ್ದು ಮಾಡಿದೆ. ಗಣೇಶ್​ ನಟನೆ ಎಲ್ಲಾ ಚಿತ್ರಗಳಿಂತ ಈ ಚಿತ್ರವೇ ಮೊದಲ ದಿನ ಹೆಚ್ಚು ಕಲೆಕ್ಷನ್​ (Collection) ಮಾಡಿದ್ದು, ಗೋಲ್ಡನ್​​ ಸ್ಟಾರ್​ ಕೆರಿಯರ್​ನಲ್ಲಿ ಗೋಲ್ಡನ್​ ಡೇಸ್​ ಶುರುವಾಗಿದೆ ಎಂದು ಹೇಳಲಾಗ್ತಿದೆ. ‘ಗಾಳಿಪಟ 2’ ಮೊದಲ ದಿನವೇ ಸರಾಸರಿ 1000 ಪ್ರದರ್ಶನಗಳನ್ನು ಕಾಣುವ ಮೂಲಕ ಗಣೇಶ್‌ ಅವರ ಹಿಂದಿನ ಚಿತ್ರಗಳ ದಾಖಲೆಯನ್ನು ಮುರಿದಿದೆ. 

ಗಣಿ ಈಸ್ ಬ್ಯಾಕ್ ಅಂತಿದ್ದಾರೆ ಅಭಿಮಾನಿಗಳು

ಗಾಳಿಪಟ-2 ನೋಡಿದ ಜನರು ಕೂಡ ಗಣೇಶ್​ ನಟನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾದಲ್ಲಿ ಮೊದಲ ಮೊದಲು ಜನರನ್ನು ನಕ್ಕು ನಗಿಸಿ  ಭಾವುಕರನ್ನಾಗಿ ಮಾಡೋ ಗೋಲ್ಡನ್​ ಸ್ಟಾರ್​ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದು, ಗಣಿ ಈಸ್​ ಬ್ಯಾಕ್​ ಎನ್ನುತ್ತಿದ್ದಾ. 14 ವರ್ಷಗಳ ಹಿಂದೆ ಗಾಳಿಪಟ 175 ದಿನ ಪ್ರದರ್ಶನ ಕಂಡು ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ಗಾಳಿಪಟ-2 ಕೂಡ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ತೆರೆಕಂಡ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ.

ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಕಲೆಕ್ಷನ್

ರಾಜ್ಯದಲ್ಲಿ 700 ಶೋ, ಹೊರ ರಾಜ್ಯಗಳಲ್ಲಿ 200, ವಿದೇಶಗಳಲ್ಲಿ 250 ಶೋ ಸೇರಿ ಮೊದಲ ದಿನವೇ 1000ಕ್ಕೂ ಅಧಿಕ ಶೋಗಳಲ್ಲಿ 'ಗಾಳಿಪಟ'-2 ಪ್ರದರ್ಶನ ಕಂಡದೆ. ಪ್ರೀಮಿಯರ್‌ ಶೋಗಳ ಕಲೆಕ್ಷನ್ ಕೂಡ ಸೇರಿ ಮೊದಲ ದಿನ ಅಂದಾಜು 15 ಕೋಟಿ ರೂ. ಅಧಿಕ ಕಲೆಕ್ಷನ್ ಮಾಡಿರುವ ಸಾಧ್ಯತೆಯಿದೆ. ಗೋಲ್ಡನ್ ಸ್ಟಾರ್ ಗಣೇಶ್‌ ಸಿನಿಕರಿಯರ್‌ನಲ್ಲಿ ಇದು ಭಾರೀ ಓಪನಿಂಗ್ ಎನ್ನಬಹುದಾಗಿದೆ.



ಗಣೇಶ್​ಗೆ ದಿಗಂತ್​, ಪವನ್ ಸಾಥ್​

ಚಿತ್ರದಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್, ದೂದ್ ಪೇಡ ದಿಗಂತ್ ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇನ್ನು 'ಗಾಳಿಪಟ' ಚಿತ್ರದಲ್ಲಿ ನಟಿಸಿದ್ದ ರಾಜೇಶ್ ಕೃಷ್ಣನ್ ಬದಲು 'ಲೂಸಿಯ' ನಿರ್ದೇಶಕ ಪವನ್ ಕುಮಾರ್ ಅಭಿನಯಿಸಿದ್ದಾರೆ. ನಿರ್ದೇಶಕ ಪವನ್ ಕುಮಾರ್ ಈ ಹಿಂದೆ ಯೋಗರಾಜ್ ಭಟ್ಟರ 'ಮನಸಾರೆ' ಮತ್ತು 'ಪಂಚರಂಗಿ' ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿತ್ರದ ನಾಯಕಿಯರಾಗಿ ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಣೇಶ್‌ ಅವರ ಪುತ್ರ ವಿಹಾನ್‌ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾನೆ.

ಇದನ್ನೂ ಓದಿ; Gaalipata 2 Review: ಕಾಮಿಡಿಯೂ, ಎಮೋಷನ್​​ಗಳೂ - ಭಾವನೆಗಳ ಬಣ್ಣ ತುಂಬಿ ಹಾರಿದ ಗಾಳಿಪಟ!

ಈ ಸಿನಿಮಾದಲ್ಲಿ ಹಿರಿಯ ನಟ ಅನಂತ್ ನಾಗ್ ಅವರು ಕನ್ನಡ ಮೇಷ್ಟ್ರು ಪಾತ್ರದಲ್ಲಿ ನಟಿಸಿದ್ದಾರೆ. ಸಂತೋಷ್‌ ರೈ ಪಾತಾಜೆ ಸಿನಿಮಾಟೋಗ್ರಫಿಯಿರುವ ಈ ಚಿತ್ರದಲ್ಲಿ ಪದ್ಮಜಾ ರಾವ್‌, ಸುಧಾ​ ಬೆ​ಳ​ವಾಡಿ, ರಂಗಾ​ಯಣ ರಘು ಸೇರಿದಂತೆ ಮುಂತಾದವರು ನಟಿಸುತ್ತಿದ್ದಾರೆ.  ರಮೇಶ್‌ ರೆಡ್ಡಿ ಚಿತ್ರದ ನಿರ್ಮಾಪಕರು. 'ಗಾಳಿಪಟ 2' ಚಿತ್ರದ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕನ್ನು ಜೀ ಕನ್ನಡ ಮತ್ತು ಜೀ5 ಭಾರೀ ಮೊತ್ತಕ್ಕೆ ಖರೀದಿಸಿವೆ. ಮಾತ್ರವಲ್ಲದೇ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ.

ಇದನ್ನೂ ಓದಿ: KGF Chapter 2: ನಿಮ್ಮನೆ ಟಿವಿಯಲ್ಲಿ ಬರಲಿದೆ ಕೆಜಿಎಫ್ ಚಾಪ್ಟರ್-2!

ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ

ಸಿನಿಮಾ ನೋಡಿ ಬಂದ ಪ್ರೇಕ್ಷಕರ ಅಭಿಪ್ರಾಯ ತಿಳಿದು ಪ್ರತಿಕ್ರಿಯಿಸಿದ ನಟ ಗಣೇಶ್​​,  ನಾವು ಪಟ್ಟಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ ಎಂದ್ರು,  ಬೆಂಗಳೂರು, ಮೈಸೂರು ಭಾಗದಲ್ಲಿ ಮೊದಲ ದಿನವೇ ಶೇ.100ರಷ್ಟು ಹೌಸ್‌ ಫುಲ್‌ ಪ್ರದರ್ಶನಗಳನ್ನು ಕಂಡಿದೆ. ಇದು ಇಡೀ ‘ಗಾಳಿಪಟ 2’ ತಂಡದ ಗೆಲುವು ಎಂದಿದ್ದಾರೆ.
Published by:Pavana HS
First published: