ರಕ್ತಪಾತದ ದೃಶ್ಯದಲ್ಲಿ ಮಾದಪ್ಪನ ಜಪ: ವಿವಾದದ ಸುಳಿಯಲ್ಲಿ `ಗರುಡ ಗಮನ ವೃಷಭ ವಾಹನ’

Garuda Gamana Vrishabha Vhana: ಇದೀಗ ಈ ಚಿತ್ರ ವಿವಾದ ಸುಳಿಯಲ್ಲಿ ಸಿಲುಕಿಕೊಂಡಿದೆ. ಸಿನಿಮಾದಲ್ಲಿ ರೌಡಿಸಂ, ಕೊಲೆ, ರಕ್ತಪಾತದ ಹಿನ್ನೆಲೆಯಲ್ಲಿ ಈ ಗೀತೆಗಳನ್ನು ಬಳಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಚಿತ್ರದಲ್ಲಿನ ರೌಡಿಸಂ ದೃಶ್ಯಕ್ಕೆ ಮಲೆ ಮಾದೇಶ್ವರನ ಬಗ್ಗೆ ಇರುವ ಹಾಡನ್ನು ಬಳಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.

ರಾಜ್​ ಬಿ ಶೆಟ್ಟಿ

ರಾಜ್​ ಬಿ ಶೆಟ್ಟಿ

  • Share this:
ಇತ್ತೀಚೆಗೆ ಬಿಡುಗಡೆಯಾದ ಕನ್ನಡದ 'ಗರುಡ ಗಮನ ವೃಷಭ ವಾಹನ' ಚಿತ್ರ ಸಾಕಷ್ಟು ಮೆಚ್ಚುಗೆಯನ್ನು ಪಡೆದುಕೊಂಡಿದೆ. ಚಿತ್ರ ರಿಲೀಸ್‌ಆದ ಬಳಿಕ ಕೆಲ ವರ್ಗದ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ಸು ಕಂಡಿದೆ. ಚಿತ್ರದ ಭಿನ್ನ ರೀತಿಯ ಪರಿಕಲ್ಪನೆ ಬಗ್ಗೆ ಚಿತ್ರರಂಗದಲ್ಲೂ ಟಾಕ್ ಕ್ರಿಯೇಟ್(Talk Create) ಆಗಿದೆ. ರಾಜ್​ ಬಿ. ಶೆಟ್ಟಿ (Raj B Shetty) ನಿರ್ದೇಶನ ಮಾಡಿರುವ ‘ಗರುಡ ಗಮನ ವೃಷಭ ವಾಹನ’ (Garuda Gamana Vrishabha Vahana) ಚಿತ್ರ ಸೂಪರ್​ ಹಿಟ್(Super Hit)​ ಆಗಿದೆ. ರಿಷಬ್​​ ಶೆಟ್ಟಿ(Rishab Shetty) ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ರೌಡಿಸಂ ಸಿನಿಮಾಗಳನ್ನು ಹೀಗೂ ಮಾಡಬಹುದು ಅಂತ ತೋರಿಸಿಕೊಟ್ಟಿದ್ದಾರೆ. ವಿದೇಶಗಳಲ್ಲೂ ಗರುಡ ಗಮನ ವೃಷಭ ವಾಹನ ಸಿನಿಮಾಗೆ ಡಿಮ್ಯಾಂಡ್(Demand)​ ಸಿಕ್ಕಿದೆ. ಬೇರೆ ಭಾಷೆಯ ಚಿತ್ರರಂಗದವರು ಈ ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿನ ‘ಸೋಜುಗಾದ ಸೂಜು ಮಲ್ಲಿಗೆ..’ ಗೀತೆಗೆ ಯೂಟ್ಯೂಬ್​ನಲ್ಲಿ ಮಿಲಿಯನ್​ಗಟ್ಟಲೆ ವೀವ್ಸ್​ ಸಿಗುತ್ತಿದೆ. ಅದರ ಬೆನ್ನಲ್ಲೇ ಇನ್ನೊಂದು ಹಾಡು ‘ಚಂದ್ರಚೂಡ ಶಿವಶಂಕರ ಪಾರ್ವತಿ’ ಲಿರಿಕಲ್ ವಿಡಿಯೋ ಕೂಡ ಬಿಡುಗಡೆ ಆಗಿದೆ.  ಇದೀಗ ಈ ಚಿತ್ರ ವಿವಾದ ಸುಳಿಯಲ್ಲಿ ಸಿಲುಕಿಕೊಂಡಿದೆ. ಸಿನಿಮಾದಲ್ಲಿ ರೌಡಿಸಂ, ಕೊಲೆ, ರಕ್ತಪಾತದ ಹಿನ್ನೆಲೆಯಲ್ಲಿ ಈ ಗೀತೆಗಳನ್ನು ಬಳಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಚಿತ್ರದಲ್ಲಿನ ರೌಡಿಸಂ ದೃಶ್ಯಕ್ಕೆ ಮಲೆ ಮಾದೇಶ್ವರನ ಬಗ್ಗೆ ಇರುವ ಹಾಡನ್ನು ಬಳಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.

'ಸೋಜುಗಾದ ಸೂಜು ಮಲ್ಲಿಗೆ'ಗೆ ಆಕ್ಷೇಪ!

ಮಿಧುನ್​ ಮುಕುಂದನ್​ ಅವರು ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳೆಲ್ಲವೂ ಹಿಟ್​ ಆಗಿವೆ. ಹಿನ್ನೆಲೆ ಸಂಗೀತ ಕೂಡ ಗಮನ ಸೆಳೆದಿದೆ. ಆದರೆ ರಕ್ತಪಾತದ ದೃಶ್ಯದಲ್ಲಿ ಸೋಜುಗಾ ಸೂಜು ಮಲ್ಲಿಗೆ ಹಾಡು ಬಳಸಿದ್ದಕ್ಕೆ ಸಾಲೂರು ಬೃಹನ್ಮಠದ  ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ ಎಂದು ಮುಂದೆ ನೋಡಿ.

ಹಾಡಿಗೆ ಸ್ವಾಮೀಜಿ ಬಹಿರಂಗ ಪತ್ರ!

ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ 'ಗರುಡ ಗಮನ ವೃಷಭ ವಾಹನ' ಚಿತ್ರದಲ್ಲಿ ಪುರಾಣದ ಐತಿಹ್ಯಗಳನ್ನು ಹೋಲಿಸಿ ಚಿತ್ರಕಥೆಯನ್ನು ರೂಪಿಸಲಾಗಿದೆ ಎಂದು ಕೇಳಿ ತಿಳಿದಿದ್ದೇವೆ. ಸಿನಿಮಾ ರಂಗಕ್ಕೆ ಇದೇನೂ ಹೊಸತಲ್ಲ. ಆದರೆ ಈ ಸಿನಿಮಾದ ಒಂದು ಕೊಲೆಯ ನಂತರದ ದೃಶ್ಯದ ಹಿನ್ನೆಲೆಯಾಗಿ ಕೊಲೆಗಾರನು ನರ್ತಿಸುವಾಗ 'ಸೋಜುಗದ ಸೂಜು ಮಲ್ಲಿಗೆ' ಎಂಬ ಮಲೆ ಮಹದೇಶ್ವರ ಸ್ವಾಮಿ ಕುರಿತಾದ ಜಾನಪದ ಗೀತೆಯನ್ನು ಹೊಸದಾಗಿ ಸಂಯೋಜಿಸಿದ ಸಂಗೀತದ ಮೂಲಕ ಹಾಡಿಸಲಾಗಿದೆ".

ಇದನ್ನು ಓದಿ : ಸಲ್ಮಾನ್ ಖಾನ್ ಯಾಕೆ ಮದುವೆ ಆಗುತ್ತಿಲ್ಲ?; ಅವರ ಭಾವ ಕೊಟ್ಟ ಕಾರಣ ಇದು

"ಯಾವುದೇ ಕಲಾತ್ಮಕ ಕೃತಿಗಳ ಹಾಗೆಯೇ ಸಿನಿಮಾ ರಂಗವೂ ರಚನಾತ್ಮಕವಾಗಿ ಮತ್ತು ಸಮಾಜಮುಖಿಯಾಗಿ ನಡೆದುಕೊಳ್ಳಬೇಕಾಗಿರುವುದು ಈ ಕಾಲದ ಅಗತ್ಯ. ಹೀಗೆ ಮಾಡುವಾಗ ಸೃಜನಶೀಲತೆಯು ಹಲವು ರೂಪಗಳನ್ನು ಪಡೆದುಕೊಳ್ಳುತ್ತದೆ. ಇದಕ್ಕೆ ಯಾರ ವಿರೋಧವೂ ಇರಕೂಡದು. ಆದರೆ ಪ್ರಸ್ತುತ ಪ್ರಕರಣದಲ್ಲಿ ಸಿನಿಮಾ ನಿರ್ದೇಶಕರು ಮಂಗಳೂರಿನ ಸುತ್ತಮುತ್ತಲ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಒಂದು ಕ್ರೌರ್ಯದತ್ತ ವಾಲುವ ಕಥಾಹಂದರವನ್ನು ರೂಪಿಸಿ ಅದರಲ್ಲಿ ನಡೆಯುವ ಕೊಲೆಯೆಂಬ ಹೀನಕೃತ್ಯ ಮಾಡಿ ಸಂಭ್ರಮಿಸುವ ದೃಶ್ಯದ ಹಿನ್ನೆಲೆಯಾಗಿ ಮಾದೇವನನ್ನು ಪೂಜಿಸುವ, ಆರಾಧಿಸುವ ಜಾನಪದ ಹಾಡನ್ನು ಬಳಸಿರುವುದನ್ನು ನೋಡಿದಾಗ ನಿರ್ದೇಶಕರ ಮಾರುಕಟ್ಟೆ ಆಧಾರಿತ ಚಿಂತನೆಯ ಬಗ್ಗೆ ಅನುಕಂಪ ಮೂಡುತ್ತದೆ"

‘ಜನತೆಯೇ  ಪ್ರಶ್ನಿಸಿ ಉತ್ತರ ಕಂಡುಕೊಳ್ಳಬೇಕಿದೆ’

ಮಂಗಳೂರಿನ ದಟ್ಟ ಅನುಭವ ಕೊಡುವ ಚಿತ್ರದಲ್ಲಿ ಮೈಸೂರು ಸೀಮೆಯಲ್ಲಿ ಅತಿಹೆಚ್ಚು ಜನಪ್ರಿಯವಾಗಿರುವ ಮಾದೇವನ ಸ್ತುತಿಸುವ, ಈಗ ಹಠಾತ್ತಾಗಿ ಜನಪ್ರಿಯವಾಗಿರುವ ಗೀತೆಯನ್ನು ಯಾವುದೇ ಕಾರಣವಿಲ್ಲದೆ ಸೃಜನಶೀಲತೆ ಎಂಬ ಕಾರಣ ನೀಡಿ ಬಳಸಿರುವುದು ಏಕೆ ಎಂಬುದನ್ನು ಕನ್ನಡ ನಾಡಿನ ಜನರೇ ನಿರ್ಧರಿಸಬೇಕು. ಮಂಗಳೂರು ಸೀಮೆಯಲ್ಲೂ ನೂರಾರು ಶೈವ ಸ್ಥಾನಗಳಿವೆ; ಶಿವನನ್ನು ಸ್ತುತಿಸುವ ನೂರಾರು ಜನಪ್ರಿಯ ಹಾಡುಗಳಿವೆ. ಹೀಗಿದ್ದೂ ದೂರದ ಮಲೈ ಮಹದೇಶ್ವರನ ಕುರಿತ ಹಾಡನ್ನು ಬಳಸುವ ಅನಿವಾರ್ಯತೆ ಅವರಿಗೆ ಏಕೆ ಬಂತು ಎಂಬುದನ್ನು ಕರ್ನಾಟಕದ ಜನತೆಯೇ ಪ್ರಶ್ನಿಸಿ ಉತ್ತರ ಕಂಡುಕೊಳ್ಳಬೇಕಿದೆ.

ಇದನ್ನು ಓದಿ : ಈ ರೀತಿಯ ಹುಡುಗ ಸಿಕ್ಕರೆ ಸಾರಾ ಅಲಿ ಖಾನ್ ಈಗ್ಲೇ ಮದುವೆಯಾಗ್ತಾರಂತೆ, ಹುಡುಗರು ಸ್ವಲ್ಪ ಇತ್ತ ನೋಡಿ...

ಈ ಹಾಡಲ್ಲದೆ ದಾಸಶ್ರೇಷ್ಠ ಪುರಂದರದಾಸರ 'ಚಂದ್ರಚೂಡ ಶಿವಶಂಕರ ಪಾರ್ವತಿ' ಹಾಡನ್ನೂ ಇದೇ ಸಿನಿಮಾದಲ್ಲಿ ಇನ್ನೊಂದು ಸನ್ನಿವೇಶಕ್ಕೆ ಬಳಸಿಕೊಂಡಿದ್ದಾರೆ ಎಂಬುದನ್ನೂ ತಿಳಿದಿದ್ದೇವೆ. ಪುರಂದರ ದಾಸರಾಗಲೀ, ಮನುಷ್ಯತ್ವದಿಂದ ದೈವತ್ವಕ್ಕೇರಿದ ಮಹಾಮಹಿಮ ಮಲೆ ಮಹದೇಶ್ವರ ಸ್ವಾಮಿಗಳಾಗಲೀ, ಭಕ್ತಿ ಪರವಶತೆಯಿಂದ ಪದ್ಯಗಳನ್ನು ರಚಿಸಿದ ಜನಪದರಾಗಲೀ ಈ ಹಾಡುಗಳ ಮೇಲೆ ಯಾವ ಹಕ್ಕುಗಳನ್ನೂ ಇಟ್ಟುಕೊಂಡಿಲ್ಲ. ತಮ್ಮ ಹಾಡುಗಳೆಲ್ಲವೂ ಸಮಾಜದ ಅಭ್ಯುದಯಕ್ಕಾಗಿ ಎಂದೇ ಅವರೆಲ್ಲ ಭಾವಿಸಿದ್ದರು. ಇಂದೇನಾದರೂ ಈ ಹಾಡುಗಳು ಕೃತಿಸ್ವಾಮ್ಯದಡಿ ಇದ್ದ ಪಕ್ಷದಲ್ಲಿ ಏನಾಗುತ್ತಿತ್ತು ಎಂಬುದನ್ನೂ ಈ ನಾಡಿನ ಚಿಂತಕರು, ಸಿನಿಮಾ ರಂಗದ ಅನುಭವಿಗಳು ಯೋಚಿಸಬೇಕಲ್ಲವೆ?.

ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಸುದೀರ್ಘ ಪತ್ರ

ಇನ್ನೂ ಸಾಕಷ್ಟು ವಿಚಾರಗಳನ್ನು ಸ್ವಾಮೀಜಿ ತಮ್ಮ ಬಹಿರಂಗ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇಂತಹ ಮಹಾಮಹಿಮರ ಬಗ್ಗೆ ಇದ್ದ ಅದ್ಭುತ ಗೀತೆಯೊಂದನ್ನು ಹಾಡುವಾಗ ಯಾವುದೋ ಲೌಕಿಕ ಜಗತ್ತಿಗೆ ಸೇರಿದ ಹಿಂಸಾತ್ಮಕ ಕಥೆಯೊಳಗಿನ ಕ್ರೌರ್ಯವು ನೆನಪಾಗುವಂತೆ ಮಾಡಿದ ನಿರ್ದೇಶಕರನ್ನೂ ಮಹದೇಶ್ವರರು ಹರಸಲಿ; ಅವರಿಗೆ ಮುಂದೆಂದೂ ಇಂತಹ ಚಿಂತನೆಗಳು ಬರದಂತೆ ಸದ್ಬುದ್ಧಿ ನೀಡಲಿ ಎಂದು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಸುದೀರ್ಘ ಪತ್ರ ಪರೆದಿದ್ದಾರೆ.
Published by:Vasudeva M
First published: