ಕಿಚ್ಚ ಸುದೀಪ್ (Kichcha Sudeep) ಅವರ ಹುಟ್ಟುಹಬ್ಬಕ್ಕೆ (Birthday) ಇನ್ನು ಒಂದು ದಿನ ಮಾತ್ರ ಬಾಕಿ ಇದೆ. ಕಿಚ್ಚನ ಹುಟ್ಟುಹಬ್ಬದ ಸಂಭ್ರ,ಮ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ. ಅಭಿಮಾನಿಗಳು ಕೊಂಚ ಬೇಸರದಲ್ಲಿದ್ದರೂ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಸಾಮಾಜಿಕ ಜಾಲತಾಣದಲ್ಲಿ ಹೇಗೆಲ್ಲ ಆಚರಿಸಬೇಕೆಂದು ಸಿದ್ಧತೆ ಮಾಡಿಕೊಂಡಿದ್ದಾರೆ. ಸೆ. 2ರಂದು ಸುದೀಪ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಕೆಲವು ದಿನಗಳ ಮೊದಲೇ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಸುದೀಪ್ ಅವರ ಹುಟ್ಟುಹಬ್ಬದ ಕಾಮನ್ ಡಿಪಿ ಬಿಡುಗಡೆ ಮಾಡಿ ವಿಶ್ ಮಾಡಿದ್ದರು. ಇನ್ನು ಈಗಾಗಲೇ ಕಿಚ್ಚನ ಹುಟ್ಟುಹಬ್ಬಕ್ಕೆ ಶುಭ ಕೋರುತ್ತಿರುವ ಸಂದೇಶಗಳು ಹರಿದು ಬರುತ್ತಿವೆ.
ಕಿಚ್ಚ ಸುದೀಪ್ ಅವರಿಗೆ ವಿಶೇಷ ವ್ಯಕ್ತಿಯೊಬ್ಬರು ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಹೌದು, ಆ ವಿಶೇಷ ವ್ಯಕ್ತಿ ಮತ್ತಾರೂ ಅಲ್ಲ, ಅವರೇ ಚಿನ್ನದ ಹುಡುಗ ನೀರಜ್ ಚೋಪ್ರಾ (Neeraj Chopra). ಹೌದು, ಸುದೀಪ್ ಅವರ ಹುಟ್ಟುಹಬ್ಬಕ್ಕೆ ನೀರಜ್ ಚೋಪ್ರಾ ವಿಶ್ ಮಾಡಿದ್ದಾರೆ. ಆ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ನೀರಜ್ ಚೋಪ್ರಾ ವಿಡಿಯೋ ನೋಡಿದ ಕಿಚ್ಚ ಸುದೀಪ್ ಅವರು ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ತುಂಬಾ ಸಿಹಿಯಾದ ಧನ್ಯವಾದಗಳು ಸಹೋದರ ಎಂದಿದ್ದಾರೆ.
This is the sweetest .
ಕಿಚ್ಚ ಸುದೀಪ್ ಅವರು ಈ ಸಲವೂ ಸಹ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದಾಗಿನಿಂದ ಫ್ಯಾನ್ಸ್ಗಳಿಗೆ ಕೊಂಚ ಬೇಸರವಾಗಿತ್ತಾದರೂ, ಆ ನಿರ್ಧಾರದ ಹಿಂದೆ ಒಂದೊಳ್ಳೆ ಉದ್ದೇಶ ಇದೆ ಅನ್ನೋದು ಅರ್ಥವಾಗಿತ್ತು. ಅಭಿಮಾನಿಗಳಿಗೆ ಕೊಂಚ ಬೇಸರ ಮಾಡಿದರೂ, ಕಿಚ್ಚ ಸುದೀಪ್ ಅವರು ಈಗ ಕೊಟ್ಟಿರುವ ಸಿಹಿ ಸುದ್ದಿಯಿಂದಾಗಿ ಅವರು ಫುಲ್ ಖುಷಿಯಾಗಿದ್ದಾರೆ.
ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟಿ ಸೈರಾ ಬಾನು
ಸೆ. 2ರಂದು ಅಂದರೆ ನಾಳೆ ಬೆಳಿಗ್ಗೆ 11.5ಕ್ಕೆ ಸುದೀಪ್ ಹುಟ್ಟುಹಬ್ಬದ ಉಡುಗೊರೆಯಾಗಿ ವಿಕ್ರಾಂತ್ ರೋಣ ಚಿತ್ರದ ಗ್ಲಿಂಪ್ಸ್ ದ ಡೆಡ್ ಮ್ಯಾನ್ಸ್ ಆ್ಯಂಥಮ್ ರಿಲೀಸ್ ಆಗಲಿದೆ. ಈ ವಿಷಯವನ್ನು ಕೆಲವೇ ನಿಮಿಷಗಳ ಹಿಂದೆಯಷ್ಟೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.
ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಕಿಚ್ಚ
ಕೊರೋನಾ ಕಾರಣದಿಂದಾಗಿ ಹುಟ್ಟುಹಬ್ಬದಂದು ಅಭಿಮಾನಿಗಳನ್ನು ಭೇಟಿಯಾಗಲು ಆಗುತ್ತಿಲ್ಲ ಎಂದು ಕಿಚ್ಚ ಸುದೀಪ್ ಹೇಳಿದ್ದರು. ಕೊರೋನಾ ನಿಯಮಗಳನ್ನು ಪಾಲಿಸುತ್ತಾ ಮನೆಯಗಳಲ್ಲೇ ಇದ್ದು ಅಲ್ಲಿಂದಲೇ ಶುಭ ಕೋರಿ ಎಂದು ಸುದೀಪ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಈಗ ಈ ಸಂಬಂಧ ಮತ್ತೊಂದು ಪೋಸ್ಟ್ ಮಾಡಿರುವ ಸುದೀಪ್, ಎಲ್ಲ ಸರಿಹೋದ ನಂತರ ಅಭಿಮಾನಿಗಳನ್ನು ಭೇಟಿಯಾಗುವುದಾಗಿಯೂ ಹಾಗೂ ಈ ಸಲ ಹುಟ್ಟುಹಬ್ಬದಂದು ಸಿಗಲು ಆಗದ ಕಾರಣಕ್ಕೆ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.ವಿಕ್ರಾಂತ್ ರೋಣ' ಸಿನಿಮಾದ ಜೊತೆಗೆ ಕೋಟಿಗೊಬ್ಬ 3 ಸಿನಿಮಾ ಕೂಡ ತೆರೆಗೆ ಬರಲು ಸಿದ್ಧವಾಗಿದೆ. 'ವಿಕ್ರಾಂತ್ ರೋಣ' ಸಿನಿಮಾದಲ್ಲಿ ನಟ ಸುದೀಪ್ ಲುಕ್ಗೆ ಅಭಿಮಾನಿಗಳು ಫಿದಾ ಆಗಿದ್ದರು. ಜನವರಿ ತಿಂಗಳಲ್ಲಿ ದುಬೈನ ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿತ್ತು.
'ವಿಕ್ರಾಂತ್ ರೋಣ' ಸಿನಿಮಾವನ್ನು ರಂಗಿತರಂಗ, ರಾಜರಥ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ ಸೇರಿದಂತೆ ಹಲವು ನಟರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ಇದನ್ನೂ ಓದಿ: ಇನ್ಸ್ಟಾಗ್ರಾಂಗೆ ಲಗ್ಗೆ ಇಟ್ಟ ನಟಿ Jyotika: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್ಗೂ ಹೆಚ್ಚು ಹಿಂಬಾಲಕರು..!
ವಿಕ್ರಾಂತ್ ರೋಣ ಸಿನಿಮಾ ಎಲ್ಲ ಸರಿಯಾಗಿ ಇದ್ದಿದ್ದರೆ ಈಗಾಗಲೇ ರಿಲೀಸ್ ಆಗಿರುತ್ತಿತ್ತು. ಆಗ. 19ರಂದು ವಿಶ್ವದಾದ್ಯಂತ ರಿಲೀಸ್ ಆಗಲಿದೆ ಎಂದು ಪ್ರಕಟಿಸಲಾಗಿತ್ತು. ಕೊರೋನಾ ಲಾಕ್ಡೌನ್ನಿಂದಾಗಿ ಈ ದಿನಾಂಕವನ್ನು ಮುಂದೂಡಲಾಯಿತು. ಇನ್ನು ಈ ಸಿನಿಮಾದಲ್ಲಿ ವಿಶೇಷ ಪಾತ್ರ ಹಾಗೂ ಹಾಡಿನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಸಹ ನಟಿಸಿದ್ದಾರೆ. ಇನ್ನು ಈ ಹಾಡಿನ ಪ್ರಚಾರಕ್ಕಾಗಿ ಸಖತ್ ಫೋಟೋಶೂಟ್ ಸಹ ಮಾಡಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ