ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಇವತ್ತು 42ನೇ ವಸಂತಕ್ಕೆ (Happy Birthday Prabhas) ಕಾಲಿಟ್ಟಿದ್ದಾರೆ. ನಟನ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿನಯದ ಬಹುನಿರೀಕ್ಷಿತ ಸಿನಿಮಾ ರಾಧೆಶ್ಯಾಮ್ ಚಿತ್ರತಂಡ ಟೀಸರ್ ರಿಲೀಸ್ (Radhe Shyam Teaser) ಮಾಡಿದೆ. ಈ ಸಿನಿಮಾದಲ್ಲಿ ಪ್ರಭಾಸ್ ವಿಕ್ರಮಾದಿತ್ಯನ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನು ಬಹಳ ಸಮಯದ ನಂತರ ಪ್ರಭಾಸ್ ಮತ್ತೆ ಲವರ್ ಬಾಯ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿಯಾಗಿದ್ದು, ಪ್ರೇರಣಾ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ಸಿನಿಮಾ ಮುಂದಿನ ವರ್ಷ ಜನವರಿ 14ರಂದು ತೆರೆಗೆ ಬರಲಿದೆ.
ಪ್ರಭಾಸ್ ಅವರ 44ನೇ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಚಿತ್ರತಂಡ ಈಗ ಟೀಸರ್ ರಿಲೀಸ್ ಮಾಡಿದೆ. ಇದರಲ್ಲಿ ನಾಯಕ ವಿಕ್ರಮಾದಿತ್ಯನ ಪಾತ್ರದ ಪರಿಚಯ ಮಾಡಿಕೊಟ್ಟಿದೆ. ಇನ್ನು ಈ ಹಿಂದೆಯೇ ಚಿತ್ರತಂಡ ಹೇಳಿದಂತೆ ಈ ಟೀಸರ್ ಇಂಗ್ಲಿಷ್ನಲ್ಲಿದೆ.
#Vikramaditya is here to cast his spell & win everyone's heart! 💕 Here's wishing our darling #Prabhas a very Happy Birthday! ☺️ #HappyBirthdayPrabhas
▶️https://t.co/7wuv17ivlN
Starring #Prabhas & @hegdepooja pic.twitter.com/Q6MAd60IR6
— UV Creations (@UV_Creations) October 23, 2021
140 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಸಿನಿಮಾ ಮುಂದಿನ ಸಂಕ್ರಾಂತಿಗೆ ತೆರೆಗಪ್ಪಳಿಸಲಿದೆ. ಸಾಹೋ ನಂತರ ಪ್ರಭಾಸ್ ಅವರನ್ನು ಬೆಳ್ಳಿತೆರೆ ಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಜೀ5 ಈ ಸಿನಿಮಾದ ಪ್ರಮುಖ ಭಾಷೆಗಳ ಸ್ಟೀಮಿಂಗ್ ಹಕ್ಕನ್ನು ಖರೀದಿಸಿದೆಯಂತೆ.
ಇದನ್ನೂ ಓದಿ: Happy Birthday Prabhas: ನಡೆಯಬೇಕಿದ್ದ Anushka Shetty ಮದುವೆ ನಿಲ್ಲಿಸಿದ್ದರಂತೆ ಪ್ರಭಾಸ್..!
ಈ ಚಿತ್ರಕ್ಕೆ ಜಸ್ಟಿನ್ ಪ್ರಭಾಕರನ್ ಅವರು ಸಂಗೀತ ನೀಡಿದ್ದಾರೆ. ಇನ್ನು ಪ್ರಭಾಸ್ ಅವರ 25ನೇ ಸಿನಿಮಾ ಸಹ ಪ್ರಕಟವಾಗಿದ್ದು, ಅದನ್ನು ಅರ್ಜುನ್ ರೆಡ್ಡಿ ಸಿನಿಮಾ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಸ್ಪಿರಿಟ್ ಎಂದು ಹೆಸರಿಡಲಾಗಿದೆ. ಇದೊಂದು ಆ್ಯಕ್ಷನ್ ಸಿನಿಮಾ ಆಗಿದೆಯಂತೆ. ಇದು ಸಹ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಶೂಟ್ ಮಾಡಲಾಗುತ್ತಿದ್ದು, ಇದರಲ್ಲಿ ಪ್ರಭಾಸ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಪ್ರಭಾಸ್ ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ದೀಪಿಕಾ ಪಡುಕೋಣೆ ಹಾಗೂ ಅಮಿತಾಭ್ ಅವರ ಜೊತೆಗಿನ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಸಲಾರ್ ಚಿತ್ರೀಕರಣ ಸಹ ನಡೆಯುತ್ತಿದೆ. ಈ ಸಿನಿಮಾದಲ್ಲಿ ಪ್ರಭಾಸ್ಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದಾರೆ.
ಇದನ್ನೂ ಓದಿ: Prabhas Radhe Shyam: ರಾಧೆ ಶ್ಯಾಮ್ ಚಿತ್ರದಲ್ಲಿ ವಿಕ್ರಮಾದಿತ್ಯನಾದ ಪ್ರಭಾಸ್: ಡಾರ್ಲಿಂಗ್ ಲುಕ್ಗೆ ಅಭಿಮಾನಿಗಳು ಫಿದಾ..!
ಬಾಲಿವುಡ್ ನಿರ್ದೇಶಕ ಓಂರಾವತ್ ಅವರ ನಿರ್ದೇಶನದಲ್ಲಿ ಪ್ರಭಾಸ್ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಓಂರಾವತ್ ಅವರ ಆದಿಪುರುಷ್ ಸಿನಿಮಾದಲ್ಲಿ ರಾಮನ ಪಾತ್ರಧಾರಿಯಾಗಿ ಕಾಣಿಸಿಕೊಳ್ಳಲಿರುವ ಪ್ರಭಾಸ್ ಅವರಿಗೆ ನಾಯಕಿಯಾಗಿ ಕೃತಿ ಸನೋನ್ ನಟಿಸುತ್ತಿದ್ದಾರೆ.. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿದೆ. ಪ್ರಭಾಸ್ ಈ ಸಿನಿಮಾದಲ್ಲಿನ ಪಾತ್ರಕ್ಕಾಗಿ ಮೀಸೆ ಬಿಟ್ಟಿದ್ದು, ಕೊಂಚ ತೂಕ ಹೆಚ್ಚಿಸಿಕೊಂಡಿದ್ದಾರೆ. ಈ ಹಿಂದೆ ಈ ಸಿನಿಮಾದ ಹಾಡಿನ ಡ್ಯಾನ್ಸ್ ಪ್ರಾಕ್ಟೀಸ್ಗೆ ಬಂದಾಗ ಪ್ರಭಾಸ್ ಅವರು ಮೇಕಪ್ ಇಲ್ಲದೆ ಕಾಣಿಸಿಕೊಂಡಿದ್ದರು.
ಪ್ರಭಾಸ್ ಅವರು ಮೀಸೆ ಬಿಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ನೆಟ್ಟಿಗರು ಆಗ ಪ್ರಭಾಸ್ ಅವರನ್ನು ಅಂಕಲ್, ವಯಸ್ಸಾಗಿದೆ ಎಂದೆಲ್ಲ ಟ್ರೋಲ್ ಮಾಡಿದ್ದರು. ಆಗ ಪ್ರಭಾಸ್ ಅಭಿಮಾನಿಗಳು ನಟನ ಬೆಂಬಲಕ್ಕೆ ನಿಂತಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ