ಸ್ಯಾಂಡಲ್ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ದಿನದಂದು 'ವೀರಂ' ಚಿತ್ರತಂಡ ಅವರಿಗೆ ಭರ್ಜರಿ ಗಿಫ್ಟ್ ನೀಡಿದೆ.
'ವೀರಂ' ಚಿತ್ರತಂಡ ಪೋಸ್ಟರ್ವೊಂದನ್ನು ಬಿಡುಗಡೆ ಮಾಡುವ ಮೂಲಕ ಡೈನಾಮಿಕ್ ಪ್ರಿನ್ಸ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದೆ. ಖದರ್ ಕುಮಾರ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಪ್ರಜ್ವಲ್ ದೇವರಾಜ್ ಜೊತೆಗೆ ನಾಯಕಿಯಾಗಿ ನಟಿಸಲಿದ್ದಾರೆ. ಶಶಿಧರ ಕೆ.ಎಂ 'ವೀರಂ' ಸಿನಿಮಾದ ನಿರ್ಮಾಣದ ಹೊಣೆ ಹೊತ್ತಿದ್ದಾರೆ.
ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಆಗಿರುವ ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಅವರು ಸಾಹಸ ಸಿಂಹ ಅವರ ಅಭಿಮಾನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ದಿಶಾ ಎಂಟರ್ಟೈನ್ಮೆಂಟ್ನಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.
ಕಳೆದ ವರ್ಷ ವೀರಂ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಲುಕ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿದ್ದರು. ವಿಷ್ಣುವರ್ಧನ್ ಜನ್ಮದಿನದಂದು ಈ ಸಿನಿಮಾದ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದರು. ಇದೀಗ ಚಿತ್ರತಂಡ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದಂದು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ವಿಶ್ ಮಾಡಿದೆ.
ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುದಿಲ್ಲವೆಂದ ಪ್ರಜ್ವಲ್ ದೇವರಾಜ್
ಇತ್ತೀಚೆಗೆ ನಟ ಪ್ರಜ್ವಲ್ ದೇವರಾಜ್ ವಿಡಿಯೋ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಮನವಿ ಮಾಡಿಕೊಂಡಿದ್ದರು. ನನ್ನ ಹುಟ್ಟುಹಬ್ಬಕ್ಕೆ ತರುತ್ತಿದ್ದ ಕೇಕ್, ಹೂವಿನ ಹಾರದ ಖರ್ಚಿನಲ್ಲಿ ಬಡವರಿಗೆ ಸಹಾಯ ಮಾಡಿ. ಸದ್ಯ ಕೊರೋನಾ ಎಲ್ಲರಿಗೂ ತೊಂದರೆ ಕೊಡುತ್ತಿದೆ. ಗುಂಪು ಸೆರೋದು ಸರಿಯಲ್ಲ. ಹಾಗಾಗಿ ಈ ವರ್ಷ ನಾನು ಯಾರನ್ನು ಭೇಟಿ ಮಾಡೋದಿಲ್ಲ ಎಂದು ಹೇಳಿದ್ದರು. ಆದರು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಡೈನಾಮಿಕ್ ಪ್ರಿನ್ಸ್ಗೆ ಶುಭಾಶಯಗಳ ಸುರಿಮಳೆ ಸುರಿಸುತ್ತಿದ್ದಾರೆ.
Video Viral: ಟಿಕ್ಟಾಕ್ಗೆ ಗುಡ್ ಬೈ ಎಂದ ಡಿಬಾಸ್ ಅಭಿಮಾನಿಗಳು!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ