ಸ್ಯಾಂಡಲ್ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty New Movie) ಅಭಿನಯದ ಬಹುನಿರೀಕ್ಷಿತ ಸಪ್ತ ಸಾಗರದಾಚೆ ಎಲ್ಲೋ (Sapta Sagaradaache Ello Movie) ಸಿನಿಮಾ ಶೂಟಿಂಗ್ ಮುಕ್ತಾಯಗೊಂಡಿದೆ. ಈ ಸಿನಿಮಾ ಟೈಟಲ್ನಿಂದಲೇ ಪ್ರೇಕ್ಷಕರಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ಚಿತ್ರ ಕೊನೆ ದಿನದ ಶೂಟಿಂಗ್ ಹಾಗೂ ಸೆಲಬ್ರೇಷನ್ ಕುರಿತು ನಟ ರಕ್ಷಿತ್ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ತೆರೆ ಮೇಲೆ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನೋಡಲು ರಕ್ಷಿತ್ ಶೆಟ್ಟಿ ಅಭಿಮಾನಿಗಳು ಕಾಯುತ್ತಿದ್ದಾರೆ.
ಶೂಟಿಂಗ್ ಮುಗಿಸಿದ ಖುಷಿಯಲ್ಲಿ ರಕ್ಷಿತ್ ಶೆಟ್ಟಿ
ನಿರ್ದೇಶಕ ಹೇಮಂತ್ ರಾವ್ ಮತ್ತು ರಕ್ಷಿತ್ ಶೆಟ್ಟಿ ಕಾಂಬಿನೇಷನ್‌ನಲ್ಲಿ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ತಯಾರಾಗ್ತಿದೆ. ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ 'ಮನು' ಪಾತ್ರಕ್ಕೆ ಜೀವ ತುಂಬಿದ್ದಾರೆ. ನಟಿ ರುಕ್ಮಿಣಿ ವಸಂತ್ ಸುರಭಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶೂಟಿಂಗ್ ಮುಗಿಸಿದ ಖುಷಿಯಲ್ಲಿ ರಕ್ಷಿತ್ ಶೆಟ್ಟಿ ಪೋಸ್ಟ್ ಹಂಚಿಕೊಂಡಿದ್ದಾರೆ.
137 ಸೊಗಸಾದ ದಿನಗಳ ಶೂಟಿಂಗ್ಗೆ ಪೂರ್ಣವಿರಾಮ
SSE ಶೂಟಿಂಗ್ ಕೊನೆಯ ದಿನ ಚಿತ್ರತಂಡದವರೆಲ್ಲಾ ಸೇರಿಕೊಂಡು ಪೂಜೆ ಮಾಡಿ ಕುಂಬಳಕಾಯಿ ಒಡೆದು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು ನಾಯಕ ನಟ ರಕ್ಷಿತ್ ಶೆಟ್ಟಿ ಹಂಚಿಕೊಂಡಿದ್ದಾರೆ. 137 ಸೊಗಸಾದ ದಿನಗಳ ಚಿತ್ರೀಕರಣಕ್ಕೆ ಪೂರ್ಣವಿರಾಮ ಎಂದು ರಕ್ಷಿತ್ ಬರೆದುಕೊಂಡಿದ್ದಾರೆ.
ಥಿಯೇಟರ್ಗೆ ಅಪ್ಪಳಿಸಲು SSE ರೆಡಿ
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ, ಥಿಯೇಟರ್ಗೆ ಬರಲು ಸಿದ್ಧವಾಗಿದೆ ಎಂದು ನಮ್ಮ ಪ್ರೀತಿ ಪಾತ್ರರು ನಮ್ಮೊಂದಿಗೆ ಇರುತ್ತಾರೆ ಎಂದು ಭಾವಿಸುತ್ತೇವೆ ಎಂದು ರಕ್ಷಿತ್ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
View this post on Instagram
ಸಾಗರದ ಜೊತೆ ಜೊತೆಗೆ ಸಾಗಲಿದೆ ಪ್ರೇಮಕಥೆ
'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಹೆಸರೇ ಹೇಳುವಂತೆ ಸಮುದ್ರ ಕೂಡ ಈ ಚಿತ್ರದಲ್ಲಿ ಮುಖ್ಯ ಪಾತ್ರವಹಿಸಲಿದೆ ಎನ್ನಬಹುದು. ಸಿನಿಮಾ ತಂಡ ರಿಲೀಸ್ ಮಾಡಿರುವ 2 ಟೀಸರ್ನಲ್ಲೂ ಸಮುದ್ರದ ಬಗ್ಗೆ ಮಾತುಕತೆ ಇದೆ. ಟೀಸರ್ನಲ್ಲಿ ನಾಯಕಿಯನ್ನು ಮನು, ಸುರಭಿ ನಿನಗೆ ಸಮುದ್ರ ಇಷ್ಟನಾ ಎಂದು ಕೇಳಿದ್ದಾರೆ. ಮೊದಲ ಟೀಸರ್ನಲ್ಲೂ ನಾಯಕಿ ಸಮುದ್ರ ಬಗ್ಗೆ ಮಾತಾಡಿದ್ದಾರೆ ಇದನ್ನೆಲ್ಲಾ ನೋಡಿದ್ರೆ ಸಮುದ್ರ ದ ಜೊತೆ ಜೊತೆಗೆ ಈ ಸಿನಿಮಾ ಸಾಗಲಿದೆ ಎಂದು ಪ್ರೇಕ್ಷಕರು ಅಭಿಪ್ರಾಯಪಟ್ಟಿದ್ದಾರೆ.
ಮನುವಾಗಿ ಮಿಂಚಲಿದ್ದಾರೆ ರಕ್ಷಿತ್ ಶೆಟ್ಟಿ
ರಕ್ಷಿತ್ ಶೆಟ್ಟಿ ತಮ್ಮ ಚಿತ್ರ ಜೀವನದಲ್ಲಿ ಅನೇಕ ಪಾತ್ರಗಳನ್ನು ನಿಭಾಯಿಸಿದ್ದಾರೆ. ಆದರೆ ಎಲ್ಲ ಪಾತ್ರಗಳು ಇವರನ್ನ ಕಾಡಿರೋದು ಇಲ್ಲವೇ ಇಲ್ಲ. ಹಾಗಿರೋವಾಗ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಪ್ತ ಸಾಗರದಾಚೆ ಎಲ್ಲೋ ಚಿತ್ರದಲ್ಲಿ ಕಾಂಪ್ಲೆಕ್ಸ್ ಕ್ಯಾರೆಕ್ಟರ್ ಮಾಡಿದ್ದಾರೆ. ಅದನ್ನ ಅಷ್ಟೇ ಅದ್ಭುತವಾಗಿಯೇ ನಿಭಾಯಿಸಿದ್ದಾರೆ. ಈ ಚಿತ್ರದ ಪಾತ್ರಕ್ಕೆ ರಕ್ಷಿತ್ ಶೆಟ್ಟಿ ದೇಹದ ತೂಕವನ್ನು ಹೆಚ್ಚಿಸಿಕೊಂಡಿದ್ದಾರೆ. ತೆರೆ ಮೇಲೆ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ