ಜಮೀರ್ ಅಹಮದ್ ಖಾನ್ ಅವರ ಮಗ ಝೈದ್ ಖಾನ್ (Zaidkhan) ಹಾಗೂ ನಟಿ ಸೋನಾಲ್ ಮಾಂಟೆರೊ (Sonal Monteiro) ನಾಯಕ, ನಾಯಕಿಯಾಗಿ ನಟಿಸಿರುವ ಸಿನಿಮಾ ಬನಾರಸ್ ಬಗ್ಗೆ ಈಗಾಗಲೇ ನಿರೀಕ್ಷೆ ಹೆಚ್ಚಿದೆ. ಈಗಾಗಲೇ ಈ ಸಿನಿಮಾದ ಒಂದು ಹಾಡು ಬಿಡುಗಡೆಯಾಗಿ ಎಲ್ಲೆಡೆ ಸದ್ದು ಮಾಡಿತ್ತು. ಈಗ ಈ ಸಿನಿಮಾದ ಮತ್ತೊಂದು ಹಾಡು ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ಬಹಳ ಇಷ್ಟವಾಗಿದೆ. ಈ ಸಿನಿಮಾ ಬಿಡುಗಡೆಗೂ ಮುನ್ನವೇ ನಿರೀಕ್ಷೆ ಹೆಚ್ಚು ಮಾಡಿದೆ.
ಜಾನಪದ ಸೊಗಡಿನ ಹಾಡು
ಈ ಚಿತ್ರದಲ್ಲಿ “ಹೆಣ್ಣು ಹಡೆಯಲು ಬ್ಯಾಡಾ” ಎನ್ನುವ ಜಾನಪದ ಗೀತೆಯನ್ನು ಬಳಸಿಕೊಳ್ಳಲಾಗಿದ್ದು, ಸದ್ಯ ಟ್ರೆಂಡಿಂಗ್ ಆಗಿದೆ. ಈ ಹಾಡಿಗೆ ಸಂಗೀತ ನಿರ್ದೇಶಕ ಅಜನೀಶ್ ಲೋಕ್ನಾಥ್ ಮ್ಯೂಸಿಕ್ ನೀಡಿದ್ದು, ಹರ್ಷಿಕಾ ದೇವನಾಥ್ ಸುಂದರ ಹಾಡಿಗೆ ಧ್ವನಿಯಾಗಿದ್ದಾರೆ. ಈ ಬನಾರಸ್ ಸಿನಿಮಾ ಸಹ ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಡುಗಡೆಗೆ ಸಜ್ಜಾಗಿದ್ದು, ಈಗಾಗಲೇ ಅದರ ಹಾಡುಗಳು ಜನರಿಗೆ ಮೋಡಿ ಮಾಡಿದೆ.
ಈಗಾಗಲೇ ಬನಾರಸ್ ಸಿನಿಮಾದ ಮಾಯಾಗಂಗೆ ಎನ್ನುವ ಹಾಡು ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ಮಲೆಯಾಳಂ ನಲ್ಲಿ ಒಂದೇ ಬಾರಿಗೆ ಈ ಹಾಡು ಬಿಡುಗಡೆಯಾಗಿತ್ತು, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ಸಹ ಜನರಿಗೆ ಬಹಳ ಇಷ್ಟವಾಗಿ, ಎಲ್ಲೆಡೆ ಈ ಹಾಡಿನ ಬಗ್ಗೆ ಚರ್ಚೆಯಾಗಿತ್ತು. ಬನಾರಸ್ ಸಿನಿಮಾವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣ ಮಾಡಲಾಗಿದೆ.
ಈ ಚಿತ್ರಕ್ಕೆ ಜಯತೀರ್ಥ ಆಕ್ಷನ್ ಕಟ್ ಹೇಳಿದ್ದು, ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ ಮಾಡಿದ್ದಾರೆ. ಹಾಗೆಯೇ ಸೂಪರ್ ಹಿಟ್ ಹಾಡುಗಳನ್ನು ಕೊಟ್ಟ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪಂಚತಂತ್ರ ಸಿನಿಮಾ ನಾಯಕಿ ಸೋನಾಲ್ ಮೊಂಟೆರೊ ಈ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಷ್ಟೆಲ್ಲಾ ಹೈಪ್ ಕ್ರಿಯೇಟ್ ಮಾಡಿರುವ ಈ. ಸಿನಿಮಾದ ಬಿಡುಗಡೆ ದಿನಾಂಕ ಮಾತ್ರ ಇನ್ನೂ ತಿಳಿದುಬಂದಿಲ್ಲ.
ಇದನ್ನೂ ಓದಿ: ರಾಮ ರಾಮ ರೇ ನಿರ್ದೇಶಕರ ಹೊಸ ಸಿನಿಮಾದ ಟೈಟಲ್ ಲಾಂಚ್, ಸಾಥ್ ನೀಡಿದ ಅಶ್ವಿನಿ ಪುನೀತ್ ರಾಜ್ಕುಮಾರ್
ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಸಂಸ್ಥೆಯ ಕಡೆಯಿಂದ ಅದ್ದೂರಿಯಾಗಿ ನಿರ್ಮಾಣಗೊಂಡಿರುವ ಬನಾರಸ್ ಸಿನಿಮಾ ಮೋಷನ್ ಪೋಸ್ಟರ್ ಹಾಗೂ ಫಸ್ಟ್ ಲುಕ್ಕ್ಗೆ ಬಿಡುಗಡೆಯಾಗಿ ಬಹಳ ಸುದ್ದಿ ಮಾಡಿತ್ತು. ಅಲ್ಲದೇ, ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ನಿರೀಕ್ಷೆಗೂ ಮೀರಿ ಮೆಚ್ಚುಗೆ ವ್ಯಕ್ತವಾಗಿತ್ತು.
ನಿರೀಕ್ಷೆ ಮೂಡಿಸಿದ ಸಿನಿಮಾ
ಇಡೀ ಚಿತ್ರದ ಅದ್ಧೂರಿತನ ಮತ್ತು ವಿಭಿನ್ನ ಕಥಾನಕದ ಸುಳಿವನ್ನು ಈ ಮೋಷನ್ ಪೋಸ್ಟರ್ ಮತ್ತು ಫಸ್ಟ್ ಲುಕ್ ನೀಡಿದೆ. ಹಲವಾರು ಅದ್ಭುತಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿರುವ ಈ ಚಿತ್ರದ 90ರಷ್ಟು ಭಾಗದ ಚಿತ್ರೀಕರಣವನ್ನು ಬನಾರಸ್ನ ಮನಮೋಹಕ ಪರಿಸರದಲ್ಲಿ ನಡೆಸಲಾಗಿದೆ. ಇಲ್ಲಿನ 84 ಘಾಟ್ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿರುವುದು ಬನಾರಸ್ನ ಮತ್ತೊಂದು ಪ್ರಧಾನ ಅಂಶ.
View this post on Instagram
ಬನಾರಸ್, ದೇಶವ್ಯಾಪಿ ಸದ್ದು ಮಾಡಲಿದೆ. ಈಗಾಗಲೇ ಈ ಚಿತ್ರದ ಬಗ್ಗೆ ಒಳ್ಳೆ ಅಭಿಪ್ರಾಯ ಸಹ ವ್ಯಕ್ತವಾಗುತ್ತಿದೆ.ಸಿನಿಮಾ ಹಾಡುಗಳಿಗೆ ಸಿಗುತ್ತಿರುವ ಭರಪೂರ ಪ್ರತಿಕ್ರಿಯೆ ಚಿತ್ರತಂಡದಲ್ಲಿ ಹೊಸಾ ಹುರುಪು ಮೂಡಿಸಿದೆ. ಹೊಸ ಪ್ರತಿಭೆ ಮತ್ತು ಹೊಸತನದ ಪ್ರಯತ್ನಕ್ಕೆ ನಿಮ್ಮ ಬೆಂಬಲ ಸದಾ ಕಾಲವೂ ಇರಲಿ ಎಂದು ಚಿತ್ರತಂಡ ಮನವಿ ಮಾಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ