G K Govinda Rao Passes Away: ಕನ್ನಡದ ಹಿರಿಯ ನಟ ಪ್ರೊ ಜಿ ಕೆ ಗೋವಿಂದ ರಾವ್ ನಿಧನ: ಕಂಬನಿ ಮಿಡಿದ ರಾಜಕೀಯ ನಾಯಕರು-ಸೆಲೆಬ್ರಿಟಿಗಳು

G K Govinda Rao Is No More: 84 ವರ್ಷದವರಾಗಿದ್ದ ಪ್ರೊ. ಜಿ.ಕೆ. ಗೋವಿಂದ ರಾವ್​ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ 4.45ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಲೇಖಕರಾಗಿ, ನಟರಾಗಿ, ರಂಗಭೂಮಿ ಕಲಾವಿದರಾಗಿ ಖ್ಯಾತರಾಗಿದ್ದ ಜಿ.ಕೆ. ಗೋವಿಂದ ರಾವ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 8.30ಕ್ಕೆ ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ನೆರವೇರಲಿದೆ ಎನ್ನಲಾಗಿದೆ. 

ಕನ್ನಡದ ಹಿರಿಯ ನಟ ಪ್ರೊ. ಜಿ ಕೆ ಗೋವಿಂದರಾವ್

ಕನ್ನಡದ ಹಿರಿಯ ನಟ ಪ್ರೊ. ಜಿ ಕೆ ಗೋವಿಂದರಾವ್

  • Share this:
ಹಿರಿಯ ನಟ, ರಂಗಕರ್ಮಿ ಹಾಗೂ ಚಿಂತಕ ಪ್ರೊ ಜಿ ಕೆ ಗೋವಿಂದ ರಾವ್  (G K Govinda Rao Passes Away) ಅವರು ಇಂದು ನಿಧನರಾಗಿದ್ದಾರೆ.  ಹುಬ್ಬಳ್ಳಿಯಲ್ಲಿ ಇರುವ ಅವರ ಮಗಳ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಹಲೋಕ ತ್ಯಜಿಸಿದ್ದಾರೆ. 84 ವರ್ಷದವರಾಗಿದ್ದ ಪ್ರೊ. ಜಿ.ಕೆ. ಗೋವಿಂದ ರಾವ್​ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ 4.45ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಲೇಖಕರಾಗಿ, ನಟರಾಗಿ, ರಂಗಭೂಮಿ ಕಲಾವಿದರಾಗಿ ಖ್ಯಾತರಾಗಿದ್ದ ಜಿ.ಕೆ. ಗೋವಿಂದ ರಾವ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 8.30ಕ್ಕೆ ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ನೆರವೇರಲಿದೆ ಎನ್ನಲಾಗಿದೆ. ಜಿ.ಕೆ. ಗೋವಿಂದ ರಾವ್​ ಅವರು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಶಾಸ್ತ್ರಿ, ಮಿಥಿಲೆಯ ಸೀತೆಯರು, ಗೃಹ, ಕರ್ಫ್ಯೂ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಗೋವಿಂದ ರಾವ್​ ಅವರು ಕಿರುತೆರೆಯಲ್ಲೂ ಸಕ್ರಿಯವಾಗಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಸೇರಿದಂತೆ ಕೆಲವು ಧಾರಾವಾಹಿಗಳಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ರಂಜಿಸಿದ್ದಾರೆ. ಕಲಾವಿದನ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಕಂಬನಿ ಮಿಡಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಟ್ವೀಟ್​....ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದ ಅವರು, ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಅವರ ನಿಧನದಿಂದ ಒಬ್ಬ ಅನನ್ಯ ಚಿಂತಕನನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು.

ಇದನ್ನೂ ಓದಿ: RIP B M Krishnegowda: ಸ್ಯಾಂಡಲ್​ವುಡ್​ನ ಹಿರಿಯ ನಟ-ರಂಗಕರ್ಮಿ ಕೃಷ್ಣೇಗೌಡ ನಿಧನ..!

ಹಿರಿಯ ಚಿಂತಕ, ರಂಗಕರ್ಮಿ ಪ್ರೊ ಜಿ.ಕೆ.ಗೋವಿಂದರಾವ್ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು ಚಲನಚಿತ್ರ, ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಅಂತ ಟ್ವೀಟ್​ ಮಾಡಿದ್ದಾರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಡಿರುವ ಟ್ವೀಟ್​....ನಟನ ಅಗಲಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ಸಿದ್ಧರಾಮಯ್ಯ ಅವರು ಮಾಡಿರುವ ಟ್ವೀಟ್​ ಲಿಂಕ್​....ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತುಆತ್ಮೀಯ ಸ್ನೇಹಿತರಾಗಿದ್ದ ಪ್ರೊ. ಜಿ ಕೆ ಜಿ ಅವರಿಗೆ ಗೌರವದ ನಮನಗಳು ಎಂದು ಟ್ವೀಟ್​ ಮಾಡಿದ್ದಾರೆ ಸಿದ್ಧರಾಮಯ್ಯ ಅವರು.

ನಿರ್ದೇಶಕ ಟಿ.ಎನ್​. ಸೀತಾರಾಮ್​ ಅವರು ಸಹ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ನಮ್ಮ ತಂಡದ ಅನೇಕ ಧಾರಾವಾಹಿಗಳಲ್ಲಿ ಮುಖ್ಯ ಪಾತ್ರಗಳನ್ನು ಮಾಡುತ್ತಾ, ಮಾಡುತ್ತಾ ನಮ್ಮೆಲ್ಲರಿಗೂ ತುಂಬಾ ಹತ್ತಿರವಾದವರು ನೀವು. ನಿಮ್ಮ, ಜ್ಞಾನ ಪಾಂಡಿತ್ಯಕ್ಕಿಂತ ಹೆಚ್ಚಾಗಿ ಹೃದಯದ ಮೂಲಕ ಗೆಳೆಯರ ಜತೆ ಬಾಂಧವ್ಯ ವಿಟ್ಟುಕೊಂಡವರು ನೀವು.‌ ನಿಮ್ಮ ಜತೆ ಜಗಳಗಳು ಗಂಟು ಮುಖದಿಂದ ಕೂಡಿರುತ್ತಿರಲಿಲ್ಲ. ನಗು ಉಲ್ಲಾಸ ಗಳಿಂದ ತುಂಬಿರುತ್ತಿತ್ತು. ಮುಂದಿನ ಧಾರಾವಾಹಿಯಲ್ಲಿ ಕೋಪದ ವ್ಯಕ್ತಿತ್ವದ, ಆದರೆ ಅಂತಃಕರಣ ತುಂಬಿದ ಮುಖ್ಯಮಂತ್ರಿ ಪಾತ್ರ ಮಾಡಿಸಬೇಕೆಂದು ನಿನ್ನೆ ತಾನೇ ನನ್ನ ತಂಡದವರ ಜತೆ ಮಾತನಾಡುತ್ತಿದ್ದೆ. ಶೇಕ್ಸ್ ಪಿಯರ್ ಸೃಷ್ಟಿಸಿದ ಪಾತ್ರಗಳನ್ನು ಎಷ್ಟು ಅದ್ಭುತ ವಾಗಿ ನಟಿಸಿ ಪಾಠ ಮಾಡುತ್ತಿದ್ದಿರಿ ಸಾರ್... ಇಷ್ಟು ಬೇಗ ವಿದಾಯ ಹೇಳುತ್ತೀರೆಂದು ಭಾವಿಸಿರಲಿಲ್ಲ ಎಂದು ಭಾವುಕಾರಿ ಪೋಸ್ಟ್​ ಮಾಡಿದ್ದಾರೆ ಸೀತಾರಾಮ್​ ಅವರು.

ಇದನ್ನೂ ಓದಿ: Kotigobba 3 ಸಿನಿಮಾ ಪ್ರದರ್ಶನ ಆರಂಭ: ಕಿಚ್ಚನ ಕಟೌಟ್​​ಗೆ ಹಾಲಿನ ಅಭಿಷೇಕ

1937ರ ಏಪ್ರಿಲ್​ 27ರಂದು ಬೆಂಗಳೂರಿನಲ್ಲಿ ಜನಿಸಿದ ಜಿ.ಕೆ. ಗೀವಿಂದ ರಾವ್ ಅವರು ಇಂಗ್ಲಿಷ್​ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಸಿನಿಮಾ ಹಾಗೂ ರಂಗಭೂಮಿಯಲ್ಲೂ ಸಕ್ರಿಯವಾಗಿದ್ದರು. ಕಿರು ಕಾದಂಬರಿ ಈರ್ಶವರ್ ಅಲ್ಲಾ, ವಿಮರ್ಶಾ ಲೇಖನಗಳಾದ ಶೇಕ್ಸ್​ಪಿಯರ್​ ಎರಡು ನಾಟಕಗಳ ಅಧ್ಯಯನ, ಶೇಕ್ಸ್​ಪಿಯರ್​ ಸಂವಾದ, ನಡೆನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ.
Published by:Anitha E
First published: